DK Shivakumar: ಖಾತೆ ಕ್ಯಾತೆ ಊಹಾಪೋಹ, ನನ್ನ ಬಳಿ ಯಾರೂ ಚರ್ಚೆ ಮಾಡಿಲ್ಲ ಎಂದ ಸಿಎಂ

Kannadaprabha News   | Kannada Prabha
Published : Jun 05, 2026, 06:47 AM IST
DK Shivakumar

ಸಾರಾಂಶ

ಸಚಿವ ಸಂಪುಟದ ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಯಾವ ಸಚಿವರೂ ನಿರ್ದಿಷ್ಟ ಖಾತೆಗಾಗಿ ತಮ್ಮ ಬಳಿ ಚರ್ಚಿಸಿಲ್ಲ ಎಂದ ಅವರು, ಪಕ್ಷವೇ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಮತ್ತು ಶೀಘ್ರದಲ್ಲೇ ಹಂಚಿಕೆಯಾಗಲಿದೆ ಎಂದು ತಿಳಿಸಿದರು.

ಬೆಂಗಳೂರು (ಜೂ.5): ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಇಂತಹದ್ದೇ ಖಾತೆ ಬೇಕು ಎಂದು ನನ್ನ ಬಳಿ ಬಂದು ಯಾವ ಸಚಿವರೂ ಚರ್ಚೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ವಿಧಾನಸೌಧದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿ ವೇಳೆ ಖಾತೆ ಹಂಚಿಕೆ ಯಾವಾಗ ಎಂದು ಸುದ್ದಿಗಾರರ ಪ್ರಶ್ನೆಗೆ, ಹೊತ್ತು ಮುಳುಗುವುದರರೊಳಗೆ ಖಾತೆ ಹಂಚಿಕೆಯಾಗಲಿದೆ ಎಂದರು. ಇದೇ ವೇಳೆ ಖಾತೆ ಹಂಚಿಕೆಯಲ್ಲಿ ಗೊಂದಲ ಏರ್ಪಟ್ಟಿದೆಯಂತಲ್ವಾ, ಕೆಲವರು ಇಂತಹದ್ದೇ ಖಾತೆ ಬೇಕೆಂದು ಪಟ್ಟು ಹಿಡಿದಿದ್ದಾರಂತಲ್ವಾ ಎಂದು ಪ್ರಶ್ನಿಸಿದಾಗ, ನಮ್ಮಲ್ಲಿ ಯಾವ ಗೊಂದಲವೂ ಇಲ್ಲ, ನಿಮ್ಮಲ್ಲಿ ಗೊಂದಲವಿರಬೇಕು. ನನ್ನ ಬಳಿ ಬಂದು ಯಾರು ಇಂತಹದ್ದೇ ಖಾತೆ ಬೇಕೆಂದು ಚರ್ಚೆ ಮಾಡಿಲ್ಲ. ಗಾಳಿ ಸುದ್ದಿ, ಊಹಾಪೋಹಗಳಿಗೆ ನಾನು ಉತ್ತರ ಕೊಡುವುದಿಲ್ಲ ಎಂದರು.

ಪಕ್ಷದಿಂದಲೇ ತೀರ್ಮಾನ:

ಖಾತೆ ಹಂಚಿಕೆ ವಿಚಾರವಾಗಿ ಪಕ್ಷ ತೀರ್ಮಾನ ಮಾಡಲಿದೆ. ಪಕ್ಷ ನನ್ನನ್ನು ಮುಖ್ಯಮಂತ್ರಿ ಮಾಡಿದೆ. ನಾನು ಯಾವ ಕೆಲಸ ಮಾಡಬೇಕು ಎಂದು ಹೇಳಿದೆ. ನಾನು ಆ ಕೆಲಸ ಮಾಡುತ್ತೇನೆ. ಪಕ್ಷ ಯಾರಿಗೆ ಯಾವ ಕೆಲಸ ಹೇಳಿದೆಯೋ ಆ ಕೆಲಸ ಮಾಡುತ್ತಾರೆ ಎಂದರು.

ಬಿಜೆಪಿ ನಾಯಕರು ನಿಮ್ಮ ಹೊಸ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲ ಎಲ್ಲಿದೆ ಎಂದು ಪ್ರಶ್ನಿಸುತ್ತಿದ್ದಾರಲ್ವಾ ಎಂದು ಕೇಳಿದಾಗ, ಖಂಡಿತವಾಗಿ, ಈ ಬಗ್ಗೆ ಮಾಹಿತಿ ನೀಡದೆ ನಾವು ಏನನ್ನೂ ಮಾಡುವುದಿಲ್ಲ. ಅವರಿಗೂ ಮಾಹಿತಿ ನೀಡುತ್ತೇವೆ, ಮಾಧ್ಯಮಗಳಿಗೂ ಮಾಹಿತಿ ನೀಡುತ್ತೇವೆ ಎಂದರು.

ಯುವಕ ಸಂಘ ಮಾಡುವುದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಬೀಳಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರಲ್ವಾ ಎಂದಾಗ, ಯಾವುದೇ ಕೆಲಸ ಮಾಡಿದರೂ ಆರ್ಥಿಕ ಹೊರೆ ಇದ್ದೇ ಇರುತ್ತದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಆದ ಮರುದಿನವೇ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ: ಜನರ ಕುಂದುಕೊರತೆ ಕೇಳಲು ಪ್ರತ್ಯೇಕ ಮಂತ್ರಿ, ದೇಶದಲ್ಲೇ ಮೊದಲು!
Karnataka Politics: ಇಂದು ರಾಹುಲ್ ಗಾಂಧಿ ಉಪಸ್ಥಿತಿಯಲ್ಲಿ ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ!