ಕಾಂಗ್ರೆಸ್ ವಿರುದ್ಧವೇ ಸಿಡಿದೆದ್ದ ಕುಮಾರಸ್ವಾಮಿ ಖಡಕ್ ಸಂದೇಶ ರವಾನೆ

Published : Jan 14, 2019, 07:53 PM IST
ಕಾಂಗ್ರೆಸ್ ವಿರುದ್ಧವೇ ಸಿಡಿದೆದ್ದ ಕುಮಾರಸ್ವಾಮಿ ಖಡಕ್ ಸಂದೇಶ ರವಾನೆ

ಸಾರಾಂಶ

 ಸಿಎಂ ಕುಮಾರಸ್ವಾಮಿ ತಾಳ್ಮೆಯ ಕಟ್ಟೆ ಹೊಡಿದಿದ್ದು,  ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ. ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ದೋಸ್ತಿ ಪಕ್ಷವಾದ ಕಾಂಗ್ರೆಸ್ ವಿರುದ್ಧ ಗುಡುಗಿದ್ದು,ಕೆಲ ಎಚ್ಚರಿಕೆಗಳನ್ನು ನೀಡಿದ್ದಾರೆ.

ಬೆಂಗಳೂರು, [ಜ.14]: ರಾಜ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ದೋಸ್ತಿಗಳ ನಡುವೆ ಒಂದಲ್ಲ ಒಂದು ಮುಸುಕಿನ ಗುದ್ದಾಟ ನಡೆಯುತ್ತಲೇ ಇವೆ. ಇದಕ್ಕೆ ಪೂರಕವೆಂಬಂತೆ ಇಂದು [ಸೋಮವಾರ] ಸಿಎಂ ಕುಮಾರಸ್ವಾಮಿ ಅವರು ದೋಸ್ತಿ ಪಕ್ಷವಾದ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ,

ಕಾಂಗ್ರೆಸ್ ನಮ್ಮನ್ನು 3ನೇ ದರ್ಜೆಯವರಂತೆ ನೋಡುತ್ತಿದ್ದು, ತನ್ನ ಮನಸ್ಥಿತಿ ಬದಲಾಯಿಸಿಕೊಳ್ಳಬೇಕು. ಕೊಟ್ಟು ತೆಗೆದುಕೊಳ್ಳುವ ನೀತಿ ಅನುಸರಿಸಬೇಕು ಎಂದು ಕುಮಾರಸ್ವಾಮಿ ಅವರು ಖಾಸಗಿ ಸುದ್ದಿ ವಾಹಿನಿ ಸಂದರ್ಶನದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಎಲೆಕ್ಷನ್: ಕುಮಾರಸ್ವಾಮಿಗೆ ಸ್ಪಷ್ಟ ಸಂದೇಶ ರವಾನಿಸಿದ ಖಂಡ್ರೆ

ಲೋಕಸಭೆ ಸೀಟು ಹಂಚಿಕೆಗೆ 1/3 ಸೂತ್ರ ಆಗಲೇಬೇಕು. ಅತಿ ಆತ್ಮವಿಶ್ವಾಸದಿಂದ ಮುನ್ನುಗ್ಗಿದರೆ ಸೋಲು ಖಚಿತ ಎಂದು ಕಾಂಗ್ರೆಸ್ ಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹೀಗೆ ಸಿಎಂ ಕುಮಾರಸ್ವಾಮಿ ದೋಸ್ತಿ ಪಕ್ಷಕ್ಕೆ ನೇರವಾಗೇ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಇಲ್ಲದಿದ್ದರೆ ನಮ್ಮ ದಾರಿ ನಮಗೆ ಅನ್ನೋ ಸಂದೇಶ ರವಾನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!