ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಪವರ್ ಶೇರಿಂಗ್ ಅಂತಿಮ ಹಂತಕ್ಕೆ ಬಂದಂತೆ ಕಾಣಿಸುತ್ತಿದೆ. ಇಂದು ಹೈಕಮಾಂಡ್ ಇಬ್ಬರು ನಾಯಕರೊಂದಿಗೆ ಮಾತುಕತೆ ನಡೆಸಲು ಮುಂದಾಗಿದೆ ಎಂದು ತಿಳಿದು ಬಂದಿದೆ. ಎರಡು ಹಂತದಲ್ಲಿ ಸಭೆಗಳು ನಡೆಯಲಿದ್ದು, ಈ ಎಲ್ಲಾ ಬೆಳವಣಿಗೆ ನಡುವೆ ಡಿಸಿಎಂ ಡಿಕೆ ಶಿವಕುಮಾರ್, ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ಪವರ್ ಶೇರಿಂಗ್ ಕುರಿತ ವಿದ್ಯಮಾನಕ್ಕೆ ಮತ್ತಷ್ಟು ಮೈಲೇಜ್ ನೀಡಿದಂತಾಗಿದೆ. ಮತ್ತೊಂದೆಡೆ ಅಹಿಂದ ನಾಯಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುತ್ತಿದ್ರೆ, ಧಾರ್ಮಿಕ ಗುರುಗಳು ಪಟ್ಟದ ಕುರಿತು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕರ್ನಾಟಕ ರಾಜಕಾರಣಕ್ಕೆ ಸಂಬಂಧಿಸಿದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

08:21 PM (IST) Nov 27
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರಗೊಂಡಿರುವಾಗಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತುರ್ತು ಮುಂಬೈ ಪ್ರವಾಸ ಕೈಗೊಂಡಿದ್ದಾರೆ. ಶಾಸಕ ಎನ್.ಎ. ಹ್ಯಾರಿಸ್ ಜೊತೆಗಿನ ಈ ಪ್ರಯಾಣವನ್ನು ಖಾಸಗಿ ಎಂದು ಹೇಳಲಾಗಿದೆ.
07:32 PM (IST) Nov 27
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ, ಅಹಿಂದ ಸಂಘಟನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಬೀದಿಗಿಳಿದಿವೆ. ಬೆಂಗಳೂರಿನಲ್ಲಿ ಉರುಳು ಸೇವೆ ನಡೆಸುವ ಮೂಲಕ, ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಿ ಮುಂದುವರಿಯಬೇಕು, ನಾಯಕತ್ವ ಬದಲಾದರೆ ಹೋರಾಟ ನಡೆಸುವುದಾಗಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿವೆ.
07:17 PM (IST) Nov 27
ಕರ್ನಾಟಕದಲ್ಲಿನ ನಾಯಕತ್ವ ಮತ್ತು ಅಧಿಕಾರ ಹಂಚಿಕೆ ಚರ್ಚೆಗಳ ನಡುವೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಆರು ಹಿರಿಯ ಸಚಿವರು ದೆಹಲಿಗೆ ತೆರಳಲಿದ್ದಾರೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸಲಹೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.
06:22 PM (IST) Nov 27
ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಸಂಘರ್ಷ ತಾರಕಕ್ಕೇರಿದೆ. ಅರ್ಧ ಅವಧಿಯ ಅಧಿಕಾರ ಹಂಚಿಕೆ ಒಪ್ಪಂದದ ಹಿನ್ನೆಲೆಯಲ್ಲಿ, ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಹೈಕಮಾಂಡ್ ತೀರ್ಪಿಗಾಗಿ ಕಾಯುತ್ತಿದ್ದಾರೆ.
04:51 PM (IST) Nov 27
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿದ್ದು, ಸಚಿವ ಸಂತೋಷ್ ಲಾಡ್ ಅವರು ಸಿದ್ದರಾಮಯ್ಯನವರ ಪರ ನಿಲ್ಲುವುದಾಗಿ ಹೇಳಿದ್ದಾರೆ. ಆದರೆ, ಈ ಕುರಿತು ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಸಚಿವ ಮಧುಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
03:52 PM (IST) Nov 27
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂರ್ಣಾವಧಿಗೆ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ ಎಂದು ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಯಾವುದೇ ಅಧಿಕಾರ ಹಂಚಿಕೆ ಸೂತ್ರ ರಚನೆಯಾಗಿಲ್ಲ ಮತ್ತು ಹೈಕಮಾಂಡ್ ಕೂಡ ಬದಲಾವಣೆ ಬಗ್ಗೆ ಮಾತನಾಡಿಲ್ಲ ಎಂದು ಅವರು ಹೇಳಿದ್ದಾರೆ.
12:34 PM (IST) Nov 27
ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವ ಭರವಸೆಯ ಮೇಲೆ ಒಕ್ಕಲಿಗ ಸಮುದಾಯ ಕಾಂಗ್ರೆಸ್‌ಗೆ ಮತ ನೀಡಿದೆ. ಅಧಿಕಾರ ಹಂಚಿಕೆ ಒಪ್ಪಂದ ಪಾಲಿಸದಿದ್ದರೆ, ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುವುದಾಗಿ ರಾಜ್ಯ ಒಕ್ಕಲಿಗರ ಸಂಘದ ಮುಖಂಡರು ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ.
12:29 PM (IST) Nov 27
ಕರ್ನಾಟಕದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವಿನ ಅಧಿಕಾರ ಸಂಘರ್ಷ ತಾರಕಕ್ಕೇರಿದ್ದು, ಈ ಕುರಿತು ದೆಹಲಿಯಲ್ಲಿ ನಡೆಯಲಿರುವ ಹೈಕಮಾಂಡ್ ಸಭೆಯಲ್ಲಿ ಮಹತ್ವದ ತೀರ್ಮಾನ ಹೊರಬೀಳುವ ಸಾಧ್ಯತೆಯಿದೆ.
12:03 PM (IST) Nov 27