ಕಾಂಗ್ರೆಸ್‌ ರಾಷ್ಟ್ರೀಯ ಒಬಿಸಿ ಸಮಿತಿಗೆ ಸಿದ್ದರಾಮಯ್ಯ ನಾಯಕತ್ವ

Kannadaprabha News   | Kannada Prabha
Published : Jul 06, 2025, 06:32 AM IST
Karnataka Chief Minister Siddaramaiah (File Photo/ANI)

ಸಾರಾಂಶ

ರಾಷ್ಟ್ರಮಟ್ಟದಲ್ಲಿ ಹಿಂದುಳಿದ ವರ್ಗಗಳ ಮತ ಬ್ಯಾಂಕ್‌ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌ ಹೈಕಮಾಂಡ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸು ಬಳಸಿಕೊಂಡು ಹಿಂದುಳಿದ ವರ್ಗಗಳ ಸಂಘಟನೆಗೆ ಮುಂದಾಗಿದೆ.

ಬೆಂಗಳೂರು : ರಾಷ್ಟ್ರಮಟ್ಟದಲ್ಲಿ ಹಿಂದುಳಿದ ವರ್ಗಗಳ ಮತ ಬ್ಯಾಂಕ್‌ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌ ಹೈಕಮಾಂಡ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸು ಬಳಸಿಕೊಂಡು ಹಿಂದುಳಿದ ವರ್ಗಗಳ ಸಂಘಟನೆಗೆ ಮುಂದಾಗಿದೆ.ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ರಾಷ್ಟ್ರೀಯ ಸಲಹಾ ಮಂಡಳಿ ರಚಿಸಿದ್ದು, ನಾಲ್ಕು ಮಂದಿ ಮಾಜಿ ಮುಖ್ಯಮಂತ್ರಿಗಳು ಸೇರಿ 24 ಮಂದಿ ಸದಸ್ಯರಿರುವ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಸ್ಥರನ್ನಾಗಿ ಮಾಡಲಾಗಿದೆ.

ಅಹಿಂದ ನಾಯಕನಾಗಿ ಯಶಸ್ವಿಯಾಗಿರುವ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳನ್ನು ಸಂಘಟಿಸಿದ ಅನುಭವವಿದೆ. ಹಿಂದುಳಿದ ವರ್ಗಗಳ ಸಮಸ್ಯೆಗಳ ಪರಿಹಾರದ ಸಾಧಕ-ಬಾಧಕಗಳ ಬಗ್ಗೆ ತಿಳಿದಿರುವುದರಿಂದ ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಅರಿತು ಅವುಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲು ಸಿದ್ದರಾಮಯ್ಯ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

ದೇಶಾದ್ಯಂತ ಹಿಂದುಳಿದ ವರ್ಗಗಳ ಸಮಸ್ಯೆ, ಸವಾಲುಗಳನ್ನು ಅರಿತು ಸಲಹೆ ನೀಡುವ ಜತೆಗೆ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಮಂಡಳಿ ಸಲಹೆ ನೀಡಲಿದೆ. ರಾಜ್ಯದ ಕಾಂಗ್ರೆಸ್‌ ನಾಯಕರ ಪೈಕಿ ಸಿದ್ದರಾಮಯ್ಯ ಅವರ ಜತೆಗೆ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್‌ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಕೂಡ ಮಂಡಳಿ ಸದಸ್ಯರಾಗಿದ್ದಾರೆ.

ಜು.15ಕ್ಕೆ ಮೊದಲ ಸಭೆ:

ಸಲಹಾ ಮಂಡಳಿ ಸಭೆಯನ್ನು ಕರ್ನಾಟಕದಿಂದಲೇ ಆರಂಭಿಸಲು ಎಐಸಿಸಿ ಮುಂದಾಗಿದ್ದು, ಜು.15 ರಂದು ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಆವರಣದಲ್ಲಿನ ಭಾರತ್‌ ಜೋಡೋ ಭವನದಲ್ಲಿ ಮಂಡಳಿಯ ಮೊದಲ ಸಭೆ ನಡೆಯಲಿದೆ. ಮಂಡಳಿ ಸದಸ್ಯರು, ಸಂಚಾಲಕರು, ಕಾರ್ಯದರ್ಶಿಗಳು ಸೇರಿ ದೇಶದ ವಿವಿಧ ರಾಜ್ಯಗಳ 90 ಮಂದಿ ನಾಯಕರಿಗೆ ಆಹ್ವಾನ ನೀಡಲಾಗಿದೆ. ಐವರು ಮಾಜಿ ಮುಖ್ಯಮಂತ್ರಿ, 10 ಮಂದಿ ಕೇಂದ್ರದ ಮಾಜಿ ಸಚಿವರು ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಡಳಿ ಸದಸ್ಯರ ವಿವರ:

ಸಿದ್ದರಾಮಯ್ಯ (ಅಧ್ಯಕ್ಷರು), ಸಲಹಾ ಮಂಡಳಿ ಸಂಚಾಲಕರಾಗಿ ಡಾ.ಅನಿಲ್‌ ಜೈಹಿಂದ್‌, ಕಾರ್ಯದರ್ಶಿಯಾಗಿ ಜೀತೇಂದರ್‌ ಬಘೇಲ್‌, ಸದಸ್ಯರಾಗಿ ಬಿ.ಕೆ.ಹರಿಪ್ರಸಾದ್‌, ಅಶೋಕ್‌ ಗೆಹಲೋಟ್‌, ಭೂಪೇಶ್ ಬಘೇಲ್‌, ವಿ.ನಾರಾಯಣಸ್ವಾಮಿ, ಸಚಿನ್‌ ಪೈಲಟ್‌, ಗುರುದೀಪ್‌ ಸಿಂಗ್‌ ಸಪ್ಪಲ್‌, ಅರುಣ್‌ ಯಾದವ್‌, ವಿಜಯ್‌ ನಾಮ್‌ದೇವ್‌ರಾವ್‌ ವಡೆಟ್ಟಿವಾರ್‌, ವಿ.ಹನುಮಂತರಾವ್‌, ಅಮಿತ್‌ ಚಾವ್ಡಾ, ಬಿ. ಮಹೇಶ್‌ಕುಮಾರ್‌ ಗೌಡ್, ಪೊನ್ನಮ್‌ ಪ್ರಭಾಕರ್‌, ಡಾ.ವೀರಪ್ಪ ಮೊಯ್ಲಿ, ಎಸ್‌. ಜ್ಯೋತಿಮಣಿ, ಶ್ರೀಕಾಂತ್‌ ಜೇನಾ, ಕಮಲೇಶ್ವರ ಪಟೇಲ್‌, ಅಜಯ್‌ಕುಮಾರ್‌ ಲಲ್ಲು, ಸುಭಾಷಿಣಿ ಯಾದವ್, ಅಡೂರು ಪ್ರಕಾಶ್, ಧನೇಂದ್ರ ಸಾಹು, ಹೀನಾ ಕಾವ್ರೆ ಅವರನ್ನು ನೇಮಿಸಲಾಗಿದೆ.

ಸಿದ್ದುಗೇಕೆ ಹೊಣೆ?

ಅಹಿಂದ ನಾಯಕರಾಗಿ ಕರ್ನಾಟಕದಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಪಕ್ಷವನ್ನು ಅಧಿಕಾರಕ್ಕೇರಲು ಕೊಡುಗೆ ನೀಡಿದ್ದಾರೆ

- ಹಿಂದುಳಿದ ವರ್ಗಗಳನ್ನು ಸಂಘಟಿಸಿದ ಅನುಭವ ಅವರಿಗಿದೆ. ಸಮುದಾಯದ ಸಮಸ್ಯೆಗಳಿಗೆ ಪರಿಹಾರವನ್ನೂ ಅವರು ತಿಳಿದಿದ್ದಾರೆ

- ದೇಶದಲ್ಲಿ ಹಿಂದುಳಿದ ವರ್ಗಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಕೂಲಂಕಷವಾಗಿ ಅರಿತು ಪರಿಹಾರ ಒದಗಿಸಲು ಹೊಸ ಹೊಣೆ-

ಹಿಂದುಳಿದ ವರ್ಗಗಳ ಸಮಸ್ಯೆ, ಸವಾಲುಗಳನ್ನು ಅರಿತು ಸಲಹೆ ನೀಡುವ ಕೆಲಸವನ್ನು ಸಿದ್ದರಾಮಯ್ಯ ನೇತೃತ್ವದ ಸಮಿತಿ ಮಾಡಬೇಕು

- ಆ ಸಮುದಾಯಗಳ ಅಭಿವೃದ್ಧಿಗೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಿದ್ದು ನೇತೃತ್ವದ ಸಮಿತಿ ಸಲಹೆ ನೀಡಬೇಕು

- ಸಮಿತಿಯಲ್ಲಿರುವ ಪ್ರಮುಖರು

ಮಾಜಿ ಸಿಎಂಗಳಾದ ಕರ್ನಾಟಕದ ವೀರಪ್ಪ ಮೊಯ್ಲಿ, ರಾಜಸ್ಥಾನದ ಅಶೋಕ್‌ ಗೆಹ್ಲೋಟ್‌, ಛತ್ತೀಸ್‌ಗಢದ ಭೂಪೇಶ್‌ ಬಘೇಲ್‌, ವಿ. ನಾರಾಯಣಸ್ವಾಮಿ, ಸಚಿನ್‌ ಪೈಲಟ್‌, ಹರಿಪ್ರಸಾದ್‌ ಸೇರಿ 24 ಮಂದಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ