ರಾಹುಲ್‌, ಸಿಎಂ ಭೇಟಿ: ಪ್ರತಿಪಕ್ಷ ನಾಯಕ ಆಗಿದ್ದಕ್ಕೆ ಸಿದ್ದು ಅಭಿನಂದನೆ

By Girish Goudar  |  First Published Jun 30, 2024, 7:40 AM IST

ಸಿದ್ದರಾಮಯ್ಯ ನೇತೃತ್ವದ ತಂಡ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಲೋಕಸಭೆ ಚುನಾವಣೆ ಗೆಲುವು ಹಾಗೂ ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿತು. ಕೆಲಕಾಲ ಕುಶಲೋಪರಿ ವಿಚಾರಿಸಿದರು. 
 


ನವದೆಹಲಿ(ಜೂ.30):  ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದರು.

ಸಿದ್ದರಾಮಯ್ಯ ನೇತೃತ್ವದ ತಂಡ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಲೋಕಸಭೆ ಚುನಾವಣೆ ಗೆಲುವು ಹಾಗೂ ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿತು. ಕೆಲಕಾಲ ಕುಶಲೋಪರಿ ವಿಚಾರಿಸಿದರು. 
ತರುವಾಯ ಸಿದ್ದರಾಮಯ್ಯ ಅವರ ಜತೆಗೆ ರಾಹುಲ್‌ ಗಾಂಧಿ ಅವರು ಮಾತುಕತೆ ನಡೆಸಿದ್ದು, ಈ ಸಂದರ್ಭದಲ್ಲಿ ರಾಜ್ಯ ರಾಜಕೀಯದ ವಿಚಾರ ಚರ್ಚಿಸಿದರು ಎನ್ನಲಾಗಿದೆ

Latest Videos

undefined

ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವೇತನ ಎಷ್ಟು, ಸಿಗಲಿದೆ ಈ ಅಧಿಕಾರ!

ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ರಾಜ್ಯದಲ್ಲಿ ನಿರೀಕ್ಷೆಗಿಂತ ಕಡಿಮೆ ಸ್ಥಾನ ಬಂದಿರುವುದಕ್ಕೆ ರಾಹುಲ್ ಗಾಂಧಿ ಅವರಿಗೆ ಸಿದ್ದರಾಮಯ್ಯ ಈ ವೇಳೆ ವಿವರಣೆ ನೀಡಿದರು. ಉಭಯ ನಾಯಕರ ಮಾತುಕತೆ ನಡುವೆ ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರವೂ ಪ್ರಸ್ತಾಪವಾಗಿದೆ ಎನ್ನಲಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ಆಗಮಿಸುವ ಮೊದಲೇ ಸಿದ್ದರಾಮಯ್ಯ ಅವರು ರಾಹುಲ್‌ ಭೇಟಿಯಾಗಿದ್ದು, ಈ ವೇಳೆ ಸಚಿವರಾದ ಡಾ.ಜಿ.ಪರಮೇಶ್ವರ್‌, ಕೆ.ಜೆ.ಜಾರ್ಜ್, ಎಚ್.ಸಿ.ಮಹದೇವಪ್ಪ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ದರ್ಶನ್ ಧ್ರುವನಾರಾಯಣ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು.

click me!