ಸ್ನೇಹಮಯಿ ಕೃಷ್ಣ ಯಾರು ಎಂಬುದೇ ನನಗೆ ಗೊತ್ತಿಲ್ಲ: ಸಿಎಂ

By Kannadaprabha NewsFirst Published Sep 30, 2024, 5:01 AM IST
Highlights

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮೈಸೂರು (ಸೆ.30):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣ ಸಂಬಂಧ ಇ.ಡಿ. ಯಲ್ಲಿ ದೂರು ದಾಖಲಾಗಿದ್ದರೆ, ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದರು.

Latest Videos

ಕುಮಾರಸ್ವಾಮಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಲ್ಲ

ನಿನ್ನೆಯೇ ಹೇಳಿದಿನಿ ಕುಮಾರಸ್ವಾಮಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಲ್ಲ. ಲೋಕಾಯುಕ್ತ ಎಡಿಜಿಪಿ ಮೇಲೆ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಅದಕ್ಕೆ ಎಡಿಜಿಪಿ ಅವರು ಉತ್ತರ ಕೊಡ್ತಾರೆ ಅಷ್ಟೆ. ಎಡಿಜಿಪಿ ಕುಮಾರಸ್ವಾಮಿ ಹಂದಿ ಅಂತ ಹೇಳಿಲ್ಲಾ. ಬರ್ನಾಡ್ ಷಾ ಅವರ ವಾಕ್ಯ ಹೇಳಿದ್ದಾರೆ. ನಾನು ಅದರ ಬಗ್ಗೆ ಕಾಮೆಂಟ್ ಮಾಡಲ್ಲ ಎಂದರು.

ಕುಮಾರಸ್ವಾಮಿ, ಐಪಿಎಸ್‌ ಅಧಿಕಾರಿ ಜಟಾಪಟಿ: ಹಂದಿಗಳ ಜೊತೆಗೆ ಕುಸ್ತಿ ಆಡಲ್ಲ, ಎಚ್‌ಡಿಕೆಗೆ ಚಂದ್ರಶೇಖ‌ರ್ ತಿವಿತ

ಸ್ನೇಹಮಯಿ ಕೃಷ್ಣ ಯಾರು ಎಂಬುದೇ ಗೊತ್ತಿಲ್ಲ

ನನಗೆ ಸ್ನೇಹಮಯಿ ಕೃಷ್ಣ ಯಾರು ಎಂಬುದೇ ಗೊತ್ತಿಲ್ಲ. ನಾನು ಇವತ್ತಿನವರೆಗೂ ಅವರನ್ನ ನೋಡಿಯೇ ಇಲ್ಲ. ಅವರ ಮೇಲೆ ಏನೇನು ಕೇಸ್ ಗಳಿದೆ ಅದು ನನಗೆ ಗೊತ್ತಿಲ್ಲ. ಅವರು ಇಡಿ ಕೇಸ್ ಕೊಟ್ಟಿರಬಹುದು. ಕೇಸ್ ಕೊಟ್ಟ ತಕ್ಷಣ ಅದು ತನಿಖೆಯಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಕೊಟ್ಟಿದ್ದಾರೆ ಕೊಡಲಿ ಬಿಡಿ. ಈಗ ಮುಡಾ ವಿಚಾರ ನ್ಯಾಯಾಲಯದಲ್ಲಿದೆ, ಇದರ ಬಗ್ಗೆ ಹೆಚ್ಚು ಕಾಮೆಂಟ್ ಮಾಡುವುದಿಲ್ಲ ಎಂದು ಅವರು ತಿಳಿಸಿದರು.

click me!