ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರದ ಕ್ರಮವನ್ನು, ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತದೆ. ಬಿಜೆಪಿಯವರು ಎಂದಿಗೂ ಜಾತ್ಯತೀತತೆ, ಸಾಮಾಜಿಕ ನ್ಯಾಯದ ಪರವಾಗಿ ನಿಂತವರಲ್ಲ. ಬಿಜೆಪಿ ಮೊದಲಿನಿಂದಲೂ ಕೋಮುವಾದಿ ಪಕ್ಷವಾಗಿಯೇ ಗುರುತಿಸಿಕೊಂಡಿದ್ದು, ಜಾತ್ಯತೀತ ತತ್ವವನ್ನು ನಂಬುವುದಿಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು(ಆ.09): ಬಿಜೆಪಿ ಹಾಗೂ ಎನ್‌ಡಿಎ ಪಕ್ಷಗಳಿಗೆ ಅಲ್ಪಸಂಖ್ಯಾತರ ಮೇಲೆ ಕೋಪವಿರುವಂತಿದೆ. ಬಿಜೆಪಿ ಎಂದಿಗೂ ಜಾತ್ಯತೀತರ, ಸಾಮಾಜಿಕ ನ್ಯಾಯದ ಪರವಾಗಿಲ್ಲ. ಬಿಜೆಪಿ ಕಮ್ಯೂನಲ್ ಪಾರ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ವಿಚಾರ ಕುರಿತು ಮೈಸೂರು ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮತಾಂತರದ ಬಗ್ಗೆ ಕಾನೂನು ತಂದವರು ಬಿಜೆಪಿ. ಇದನ್ನು ಸಹ ಅದೇ ರೀತಿ ಮಾಡಲು ಹೊರಟಿದ್ದಾರೆ. ನಾವು ಅದನ್ನು ಸಂಪೂರ್ಣವಾಗಿ ವಿರೋಧಿಸುತ್ತೇನೆ. ನಾವೆಲ್ಲರೂ ಸಂವಿಧಾನದ ಮೇಲೆ ನಂಬಿಕೆ ಇಟ್ಟವರು ಎಂದರು.
ಸಿದ್ದರಾಮಯ್ಯ ಭೇಟಿಗೆ ಬಂದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ವಾಹನದಲ್ಲಿ ಹೆಬ್ಬಾವು!
ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರದ ಕ್ರಮವನ್ನು, ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತದೆ. ಬಿಜೆಪಿಯವರು ಎಂದಿಗೂ ಜಾತ್ಯತೀತತೆ, ಸಾಮಾಜಿಕ ನ್ಯಾಯದ ಪರವಾಗಿ ನಿಂತವರಲ್ಲ. ಬಿಜೆಪಿ ಮೊದಲಿನಿಂದಲೂ ಕೋಮುವಾದಿ ಪಕ್ಷವಾಗಿಯೇ ಗುರುತಿಸಿಕೊಂಡಿದ್ದು, ಜಾತ್ಯತೀತ ತತ್ವವನ್ನು ನಂಬುವುದಿಲ್ಲ ಎಂದರು.
ಸುಳ್ಳು ಕೇಸ್‌ಗೆಲ್ಲ ನಾನು ಹೆದರಲ್ಲ: ಸಿಎಂ
ತಮ್ಮ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ದೂರಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರು ಸುಳ್ಳು ಕೇಸ್ ಹಾಕಲಿ. ಆ ಸುಳ್ಳು ಕೇಸ್ ಗಳಿಗೆ ಉತ್ತರ ಕೊಡುವ ಶಕ್ತಿ ಇದೆ. ಕಾನೂನಿನಲ್ಲಿ ಸುಳ್ಳು ಕೇಸ್ ಗಳು ನಿಲ್ಲುವುದಿಲ್ಲ ಎಂದರು.