
ಬೆಳಗಾವಿ(ಏ.30): ಮೊದಲು ಹಾಗೂ ಎರಡನೇ ಹಂತದ ಚುನಾವಣೆಗಳಲ್ಲಿ ಬಿಜೆಪಿ, ಎನ್‌ಡಿಎ ಅಧಿಕಾರಕ್ಕೆ ಬರುವುದಿಲ್ಲ. ತಮಗೆ ಸ್ಪಷ್ಟ ಸೋಲಾಗಿದೆ ಎನ್ನುವುದು ಖಚಿತವಾಗುತ್ತಿದ್ದಂತೆ ಮೋದಿಯವರು ಹತಾಶರಾಗಿದ್ದು, ಭಯಾನಕ ಸುಳ್ಳುಗಳಿಂದ ಭಾರತೀಯರನ್ನ ದಾರಿ ತಪ್ಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಗೋಕಾಕದಲ್ಲಿ ಇಂದು(ಮಂಗಳವಾರ) ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರವಾಗಿ ಮತ ಮತಯಾಚಿಸಿ ಮಾತನಾಡಿದರು.
PM Modi Bagalkot Rally ಬಾಲಾಕೋಟ್ ಉಗ್ರರ ದಾಳಿ ಕಾಂಗ್ರೆಸ್‌ಗೆ ಅರ್ಥವಾಗದೆ ಬಾಗಲಕೋಟೆ ಅಂದುಕೊಂಡಿದ್ರು: ಮೋದಿ
ಬೆಲೆ ಏರಿಕೆ, ನಿರುದ್ಯೋಗದ ಬಗ್ಗೆ ಪ್ರಧಾನಿ ಮೋದಿ ಮಾಡನಾಡುವುದಿಲ್ಲ. 2014 ಹಾಗೂ 2019 ರಲ್ಲಿ ಭಾರತೀಯರಲ್ಲಿ ಭ್ರಮೆಯನ್ನು ಹುಟ್ಟಿಸಿ ಅಧಿಕಾರಕ್ಕೆ ಬಂದ ಮೋದಿ ಒಂದೇ ಒಂದು ಭರವಸೆಗಳನ್ನೂ ಈಡೇರಿಸಲಿಲ್ಲ. ಪ್ರತಿ ಬಾರಿ ಕೇವಲ ಭಾವನಾತ್ಮಕವಾಗಿ ಜನರನ್ನು ಪ್ರಚೋದಿಸುವಂತೆ ಸುಳ್ಳುಗಳನ್ನು ಹೇಳುತ್ತಿಲೇ ಇದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಖಚಿತವಾಗುತ್ತಿದ್ದಂತೆ ಸಂಪೂರ್ಣ ಹತಾಶರಾಗಿ ಹೆಚ್ಚೆಚ್ಚು ಸುಳ್ಳುಗಳನ್ನು ಹೇಳಿ ಎಷ್ಟು ಸಾಧ್ಯವೋ ಅಷ್ಟು ಭಾರತೀಯರ ದಾರಿ ತಪ್ಪಿಸಿ ಲಾಭ ಮಾಡಿಕೊಳ್ಳಲು ಒದ್ದಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.