ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಪ್ರಧಾನಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ

By Girish Goudar  |  First Published May 3, 2024, 7:51 PM IST

ಮಹಿಳೆಯರಿಗೆ ರಕ್ಷಣೆ ಕೊಡುತ್ತೇವೆಂದು ಪ್ರಧಾನಿಯವರು ಹಾಗೂ ಬಿಜೆಪಿಯವರು ಹೇಳುತ್ತಾರೆ. ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಹಾಲಿ ಲೋಕಸಭಾ ಸದಸ್ಯ, ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾಡಿರುವ ಅನ್ಯಾಯ ಜಗಜ್ಜಾಹೀರಾಗಿದೆ. ಈ ಬಗ್ಗೆ ಗೊತ್ತಿದ್ದೂ ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡು ಟಿಕೆಟ್ ನೀಡಿದ್ದಾರೆ. ಹೆಣ್ಣುಮಕ್ಕಳನ್ನ ರೇಪ್ ಮಾಡಿರುವವನಿಗೆ ಟಿಕೆಟ್ ಕೊಟ್ಟಿದ್ದಾರೆ. ಇದೇನಾ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವ ನೀತಿ..? ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ ಸಿಎಂ ಸಿದ್ದರಾಮಯ್ಯ 


ಕಾರವಾರ(ಮೇ.03):  ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವ ಪ್ರಧಾನಿಯವರ ರೀತಿ. ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್ ಎಂದು ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಕೆಂಡ ಕಾರಿದ್ದಾರೆ.

ಇಂದು(ಶುಕ್ರವಾರ) ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಿಳೆಯರಿಗೆ ರಕ್ಷಣೆ ಕೊಡುತ್ತೇವೆಂದು ಪ್ರಧಾನಿಯವರು ಹಾಗೂ ಬಿಜೆಪಿಯವರು ಹೇಳುತ್ತಾರೆ. ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಹಾಲಿ ಲೋಕಸಭಾ ಸದಸ್ಯ, ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾಡಿರುವ ಅನ್ಯಾಯ ಜಗಜ್ಜಾಹೀರಾಗಿದೆ. ಈ ಬಗ್ಗೆ ಗೊತ್ತಿದ್ದೂ ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡು ಟಿಕೆಟ್ ನೀಡಿದ್ದಾರೆ. ಹೆಣ್ಣುಮಕ್ಕಳನ್ನ ರೇಪ್ ಮಾಡಿರುವವನಿಗೆ ಟಿಕೆಟ್ ಕೊಟ್ಟಿದ್ದಾರೆ. ಇದೇನಾ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವ ನೀತಿ..? ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. 

Latest Videos

undefined

ಈ ಬಾರಿ ಗೀತಾ ಗೆಲುವು ಗ್ಯಾರಂಟಿ; ಯಾವ ಮೋದಿ ಆಟವೂ ನಡೆಯೊಲ್ಲ: ಮಧು ಬಂಗಾರಪ್ಪ

ನಮ್ಮ ಪಕ್ಷದ ಅಭ್ಯರ್ಥಿಗೆ ಈ ಬಾರಿ ಆಶೀರ್ವಾದ ಮಾಡಬೇಕು. ಹಿಂದೆ ಉತ್ತರಕನ್ನಡ ಜಿಲ್ಲೆಯಲ್ಲಿ ಬಿಜೆಪಿಯನ್ನ‌ ಗೆಲ್ಲಿಸಿದ್ದೀರಿ. ಮಾರ್ಗರೇಟ್ ಆಳ್ವಾ ಒಮ್ಮೆ ಸಂಸದರಾಗಿದ್ದರು. ಈ ಬಾರಿ ಬದಲಾವಣೆಗೆ ಅವಕಾಶ ಇದೆ. ಹತ್ತು ವರ್ಷಗಳ ಕಾಲ ಮೋದಿಯವರು ಅಧಿಕಾರದಲ್ಲಿದ್ದರೂ ರಾಜ್ಯದಲ್ಲಾಗಲೀ, ದೇಶದಲ್ಲಾಗಲೀ ಬಡವರಿಗೆ ಶಕ್ತಿ ತುಂಬುವ ಕೆಲಸ ಮಾಡಿಲ್ಲ. ಮೋದಿ ಮತ್ತು ಬಿಜೆಪಿಯವರು ಎರಡೂ ಕಡೆ ಒಂದೇ ಸರ್ಕಾರವಿದ್ದರೆ ಡಬಲ್ ಎಂಜಿನ್ ಸರ್ಕಾರವಾಗುತ್ತದೆ ಎನ್ನುತ್ತಿದ್ದರು. ಮೂರು ವರ್ಷ ಹತ್ತು ತಿಂಗಳು ಎರಡೂ ಒಂದೇ ಸರ್ಕಾರವಿದ್ದರೂ ಲೂಟಿ ಹೊಡೆದರೇ ವಿನಃ ಏನೂ ಕೆಲಸ ಮಾಡಿಲ್ಲ ಎಂದು ಹೇಳಿದ್ದಾರೆ. 

ಮೋದಿಯವರು ಹೇಳುತ್ತಾರೆ, ಕರ್ನಾಟಕದಲ್ಲಿ ಲೂಟಿ ಹೊಡೆಯುವ ಗ್ಯಾಂಗ್ ಇದೆ. ಕಾಂಗ್ರೆಸ್‌ನವರು ಲೂಟಿ ಮಾಡುತ್ತಾರೆ ಎನ್ನುತ್ತಾರೆ. ಗುತ್ತಿಗೆದಾರರ ಸಂಘದವರು ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವೆಂದಾಗ ಮೋದಿಯವರು ಏನೂ ಪ್ರತಿಕ್ರಿಯೆ ಕೊಟ್ಟಿಲ್ಲ. ಆರೋಪ ಸಹಿಸಿಕೊಂಡಿದ್ದರೆಂದರೆ ಭ್ರಷ್ಟಾಚಾರ ಸಹಿಸಿಕೊಳ್ಳುವ ಕೆಲಸ ಮಾಡಿದ್ದಾರೆ ಎಂದು ಅರ್ಥ. ಪ್ರಧಾನಿಯಾಗುವ ಮುನ್ನ ನೀಡಿದ್ದ ಯಾವ ಭರವಸೆಯನ್ನೂ ಮೋದಿಯವರು ಈಡೇರಿಸಿಲ್ಲ ಎಂದು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. 

click me!