
ಬೆಂಗಳೂರು (ಏ.4): ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಚಾರ ಮಾಡಲು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳಕ್ಕೆ ತೆರಳಲಿದ್ದಾರೆ.
ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ತೆರಳಲಿರುವ ಸಿದ್ದರಾಮಯ್ಯ ಅವರು, ಅಲ್ಲಿಂದ ಕೇರಳದ ಮಂಜೇಶ್ವರಕ್ಕೆ ತೆರಳಲಿದ್ದಾರೆ. ಭಾನುವಾರ ಸಂಜೆ 5 ಗಂಟೆಗೆ ಮಂಜೇಶ್ವರ ವಿಧಾನಸಭೆ ಕ್ಷೇತ್ರದ ವೊರ್ಕಾಡಿ ಮಜೀರ್ಪಲ್ಲ ಬಳಿ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ 6.30ಕ್ಕೆ ಮಂಜೇಶ್ವರದ ಮುಲ್ಲೇರಿಯದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.