ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿ.ಟಿ. ರವಿ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಡಿಯೋ ಮತ್ತು ಆಡಿಯೋ ಕ್ಲಿಪ್ಪಿಂಗ್‌ಗಳಂತಹ ಸಾಕ್ಷ್ಯಗಳು ಲಭ್ಯವಿವೆ ಎಂದು ಅವರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸ್ ತನಿಖೆ ನಡೆಯುತ್ತಿದ್ದು, ನ್ಯಾಯಾಂಗ ತನಿಖೆಯ ಅಗತ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕಲಬುರಗಿ (ಡಿ.23): ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಅವಾಚ್ಯ ಶಬ್ದ ಬಳಸಿದ ಕುರಿತು ವಿಡಿಯೋ, ಆಡಿಯೋ ಕ್ಲಿಪಿಂಗ್ ಸಾಕ್ಷ್ಯ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಸಿ.ಟಿ. ರವಿ ಅವಾಚ್ಯ ಶಬ್ದ ಬಳಿಸಿದ್ದು ಸತ್ಯ. ಸದನದ ಸದಸ್ಯರು ಅದಕ್ಕೆ ಸಾಕ್ಷಿ ಇದ್ದಾರೆ ಎಂದು ಸಮರ್ಥಿಸಿಕೊಂಡರು.
undefined
ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ಬರುವುದು ನಾಚಿಕೆಗೇಡಿನದ್ದು. ಆ ಪದ ಬಳಸಿರುವುದನ್ನು ಇತರೆ ವಿಧಾನ ಪರಿಷತ್ ಸದಸ್ಯರು ಕೇಳಿಸಿಕೊಂಡಿದ್ದಾರೆ ಎಂದರು.
ಈ ಸಂಚಿನಲ್ಲಿ ಸಿಎಂ ಸಿದ್ದರಾಮಯ್ಯ ಕೈವಾಡ..; ಸಿಟಿ ರವಿ ಸ್ಫೋಟಕ ಹೇಳಿಕೆ!
ಸಿ.ಟಿ. ರವಿ ಪ್ರಕರಣ ಕುರಿತಂತೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ, ನ್ಯಾಯಾಂಗ ತನಿಖೆ ಯಾಕೆ ಬೇಕು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಇದು ಕ್ರಿಮಿನಲ್ ಅಪರಾಧ ಪ್ರಕರಣ. ಬಿಜೆಪಿಯವರು ಅವರ ತಪ್ಪುಗಳನ್ನು ಮುಚ್ಚಿಕೊಳ್ಳಲು ನ್ಯಾಯಾಂಗ ತನಿಖೆ ಕೇಳುತ್ತಿದ್ದಾರೆ ಎಂದು ಹೇಳಿದರು.
ತನಿಖೆ ನಡೆಯುತ್ತಿದೆ, ಬೇರೆ ತನಿಖೆ ಏಕೆ?
ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ಬರುವುದು ನಾಚಿಕೆಗೇಡಿನದ್ದು. ಪ್ರಕರಣ ಕುರಿತು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ನ್ಯಾಯಾಂಗ ತನಿಖೆ ಯಾಕೆ ಬೇಕು?
- ಸಿದ್ದರಾಮಯ್ಯ, ಮುಖ್ಯಮಂತ್ರಿ