
ಬೆಂಗಳೂರು, [ಡಿ.02]: ಮುಂಬರುವ ಲೋಕಸಬಾ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ತಯಾರಿ ನಡೆಸಿವೆ.
ಅದರಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್, ಮುಂಬರುವ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆಗಳನ್ನ ಮಾಡುಕೊಳ್ಳುತ್ತಿದೆ.
ಇದಕ್ಕೆ ಪೂರಕವೆಂಬಂತೆ ಬಿಜೆಪಿಯನ್ನು ಟ್ರ್ಯಾಕ್ ಮಾಡುವುದಕ್ಕಾಗಿಯೇ ಕಾಂಗ್ರೆಸ್ ಸ್ಪೆಷಲ್ ಟೀಂ ರೆಡಿ ಮಾಡಿದೆ. 28 ಕ್ಷೇತ್ರಕ್ಕೆ ಪಕ್ಷದ ಕಾನೂನು ಘಟಕವನ್ನ ರೆಡಿ ಮಾಡಲಾಗಿದೆ.
28 ಕ್ಷೇತ್ರಕ್ಕೂ 28 ವಕೀಲರ ನೇಮಕ ಮಾಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶಗಳು ಬಿಜೆಪಿ ಕಡೆಯಿಂದ ಪೋಸ್ಟ್ ಆದರೆ ಅದನ್ನು ಪತ್ತೆ ಹಚ್ಚುವುದು ಈ ಟೀಮ್ನ ಕೆಲಸವಾಗಿದೆ.
ಬಿಜೆಪಿ ಪೋಸ್ಟ್ ಗಳಿಗೆ ಕೌಂಟರ್ ಕೊಡುವ ಜತೆಗೆ, ಕಾನೂನು ಕ್ರಮ ಕೈಗೊಂಡು ಪ್ರಕರಣ ದಾಖಲಿಸುವುದು ಕೂಡಾ ಟೀಮ್ನ ಜವಾಬ್ದಾರಿಯಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಆ್ಯಕ್ಟಿವ್ ಆಗಿರುವ ಬಿಜೆಪಿ, ಕಾಂಗ್ರೆಸ್ ಪಕ್ಷವನ್ನ ಕಾಲೆಳೆಯುವ ದೃಷ್ಟಿಯಿಂದ ಈ ಘಟಕ ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.