ಬೆಂಗಳೂರು, (ಜು.26): ಮುಖ್ಯಮಂತ್ರಿ ಹುದ್ದೆಗೆ ಬಿಎಸ್ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ್ದು, ಇದೀಗ ಅವರ ರಾಜಕೀಯ ಯುಗಾಂತ್ಯವಾದಂತಾಗಿದೆ. ಆದ್ರೆ, ಬಿಎಸ್‌ವೈ ರಾಜೀನಾಮೆ ನೀಡಲು ಕಾರಣವೇನು..? ಹೈಕಮಾಂಡ್ ರಾಜೀನಾಮೆ ಒತ್ತಡ ಹಾಕಿತ್ತಾ..? ಹೀಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ.
ಇನ್ನು ಬಗ್ಗೆ ಕರ್ನಾಟಕ ಕಾಂಗ್ರೆಸ್ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ್ದು, ಬಿಎಸ್ ಯಡಿಯೂರಪ್ಪ ಅವರ ರಾಜೀನಾಮೆ ವೈಫಲ್ಯಕ್ಕಾಗಿಯೇ? ಒತ್ತಡಕ್ಕಾಗಿಯೇ? ಅಸಹಕಾರಕ್ಕಾಗಿಯೇ? ಬೆದರಿಕೆಗಾಗಿಯೇ? ಬ್ಲಾಕ್‌ಮೇಲ್‌ಗಾಗಿಯೇ? ಯಾವ ಕಾರಣಕ್ಕಾಗಿ ಕಣ್ಣೀರಿನೊಂದಿಗೆ ರಾಜೀನಾಮೆ ನೀಡಿದ್ದು ಎನ್ನುವುದನ್ನ ರಾಜ್ಯದ ಜನತೆಗೆ ತಿಳಿಸುವಿರಾ ಎಂದು ಟ್ವೀಟ್ ಮಾಡಿದೆ.
ರಾಜ್ಯಕ್ಕೆ ಬಿಎಲ್ ಸಂತೋಷ್ ಎಂಟ್ರಿ: ರಾಜ್ಯ ರಾಜಕಾರಣದಲ್ಲಿ ಸಂಚಲನ
ಸಮರ್ಪಕ ಆಡಳಿತ ನಡೆಸಲು ನಿಮಗೆ ಯೋಗ್ಯತೆ ಒದಗಿಬರುವುದು ಯಾವಾಗ ಹೇಳುವಿರಾ ಎಂದು ಕೂಡ ಕರ್ನಾಟಕ ಬಿಜೆಪಿಗೆ ಪ್ರಶ್ನೆ ಮಾಡಿದೆ.
ಬಿಜೆಪಿಯ ದುರಾಡಳಿತದಿಂದ ಬೇಸತ್ತ ರಾಜ್ಯದ ಜನತೆ ಬಯಸುತ್ತಿರುವುದು 'ನಾಯಕತ್ವ ಬದಲಾವಣೆ' ಅಲ್ಲ 'ಸರ್ಕಾರದ ಬದಲಾವಣೆ' ಎಂದು ರಾಜ್ಯ ಕಾಂಗ್ರೆಸ್ ಆಗ್ರಹಿಸಿದೆ.
ತಾಖತ್ತಿದ್ದರೆ, ನೈತಿಕತೆಯಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬರಲಿ, ರಾಜ್ಯವನ್ನು ಯಾರು ಆಳಬೇಕು ಎನ್ನುವುದನ್ನು ಜನರೇ ನಿರ್ಧರಿಸಲಿ ಎಂದು ಸವಾಲು ಹಾಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.