Karnataka Politics ರಾಮನಗರದಲ್ಲಿ ನಾಯಕರ ಕಿತ್ತಾಟ, ರೌಡಿ ಡಿಕೆ ಬ್ರದರ್ಸ್​ ಎಂದು ಟ್ವೀಟ್ ಮಾಡಿದ ಬಿಜೆಪಿ

By Suvarna NewsFirst Published Jan 3, 2022, 10:28 PM IST
Highlights

* ರಾಮನಗರದಲ್ಲಿ ಜನನಾಯಕರ ಕಿತ್ತಾಟ
* ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ
* ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು, (ಜ.03) : ಸಿಎಂ ಬಸವರಾಜ್ ಬೊಮ್ಮಾಯಿ ಎದುರೇ ಸಚಿವ ಅಶ್ವತ್ಥ್ ನಾರಾಯಣ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಮಧ್ಯೆ ನಡೆದ ಜಗಳಕ್ಕೆ ಎರಡೂ ಪಕ್ಷಗಳ ಮಧ್ಯೆ ಆರೋಪ, ಪ್ರತ್ಯಾರೋಪ ಆರಂಭವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, . ತೋಳ್ಬಲ, ಅಕ್ರಮ ಸಂಪತ್ತಿನ ಬಲದಿಂದ ಮೆರೆಯುತ್ತಿರುವ ಕನಕಾಸುರರು ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದ ಅಧಿಕಾರ ಹಿಡಿದು ಶಾಂತಿ ಕದಡುವ ಪ್ರಯತ್ನ ಮಾಡಲಾಗುತ್ತಿದೆ. ಇವರು ಅಧಿಕಾರಕ್ಕೆ ಬಂದ್ರೆ ಕಂಡ ಕಂಡ ಖಾಲಿ ಜಾಗಕ್ಕೆ ಬೇಲಿ ಹಾಕುವುದರಲ್ಲಿ ಅನುಮಾನವಿಲ್ಲ. ರಾಜ್ಯದ ಜನರು ಇಂಥವರಿಗೆ ಅಧಿಕಾರ ನೀಡಲಾರರು ಎಂದು ಡಿಕೆ ಬ್ರದರ್ಸ್ ಎಂದು ಬರೆದಿದೆ.

Karnataka Politics: ಡಿಕೆ ಸುರೇಶ್-ಅಶ್ವತ್ಥ್ ನಾರಾಯಣ ಕಿತ್ತಾಟ, ಗುಡುಗಿದ ಡಿಕೆ ಶಿವಕುಮಾರ್

ಅಲ್ಲದೇ, ಈ ಘಟನೆ ಕುರಿತು ಟ್ವೀಟ್ ಮಾಡಿರುವ ಸಚಿವ ಅಶ್ವತ್ಥ್ ನಾರಾಯಣ, ಅಧಿಕಾರ ನೀಡಿರುವ ರಾಮನಗರ ಹೆಸರನ್ನು ಅಭಿವೃದ್ಧಿ ಹೆಸರಿನಿಂದ ಸೂಚಿಸಬೇಕು. ಆದರೆ, ಇಬ್ಬರು ರಾಮನಗರದ ನಾಯಕರು, ಗೂಂಡಾಗಿರಿಯಿಂದ ಸೂಚಿಸುವಂತೆ ಮಾಡುತ್ತಿದ್ದಾರೆ. ಇಂತಹ ಅನಾಗರಿಕ ವರ್ತನೆ ಕೇವಲ ಒಂದು ಪಕ್ಷದಿಂದ ಮಾತ್ರ ಸಾಧ್ಯ. ಇನ್ನಾದರೂ ಅಭಿವೃದ್ಧಿ ವಿಚಾರವಾಗಿ ಹೋರಾಟ ನಡೆಯಲಿ ಎಂದಿದ್ದಾರೆ.

ಗಲಾಟೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕೂಡ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದ ಸಚಿವರಾದ ಅಶ್ವತ್ಥ್​ ಭಾಷಣ ಬೇಳೆ ಗೂಂಡಾಗಿರಿ ಪ್ರದರ್ಶಿಸಿದ್ದಾರೆ. ಹಾಗೂ ಕಾಂಗ್ರೆಸ್ ಮುಖಂಡರ ವರ್ತನೆ ಖಂಡನೀಯ. ಇಂಥ ರಾಜಕೀಯ ಸಂಸ್ಕೃತಿ ನಮ್ಮ ರಾಜ್ಯಕ್ಕೆ ಒಳ್ಳೆಯದಲ್ಲ. ರಾಮನಗರ ಕರ್ನಾಟಕದಲ್ಲಿದೆ ಅನ್ನೋದು ನೆನಪಿರಲಿ ಎಂದು ಕಿಡಿಕಾರಿದ್ದಾರೆ.

ಡಿಕೆ ಶಿವಕುಮಾರ್ ತಿರುಗೇಟು 
ಕಾಂಗ್ರೆಸ್‌ ಪಕ್ಷದ ನಿರಂತರ ಯಶಸ್ಸಿನಿಂದ ಕಂಗೆಟ್ಟಿರುವ ಬಿಜೆಪಿ ನಾಯಕರು ವೇದಿಕೆಗಳಲ್ಲಿ ಇಲ್ಲಸಲ್ಲದ್ದನ್ನು ಮಾತನಾಡಿ ಜನರನ್ನು, ನಾಯಕರನ್ನು ಪ್ರಚೋದಿಸುತ್ತಿದ್ದಾರೆ. ಬಿಜೆಪಿ ತಾನು ಮಾಡಿದ್ದೆಂದು ಹೇಳುತ್ತಿರುವ ʼನಕಲಿ ಅಭಿವೃದ್ಧಿಗೆʼ ಉಪಚುನಾವಣೆ, ಪರಿಷತ್‌ ಚುನಾವಣೆ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜನ ಉತ್ತರ ಕೊಟ್ಟಿದ್ದಾರೆ.
ಬಿಜೆಪಿ ನಾಯಕರು ಪ್ರಚೋದನಕಾರಿಯಾಗಿ ಮಾತನಾಡುವುದು ಹೊಸದೇನಲ್ಲ. ಇದು ಅವರ ಹತಾಶೆಯನ್ನು ತೋರುತ್ತದೆ. ರಾಮನಗರದಲ್ಲಿ ರಾಜೀವ್‌ಗಾಂಧಿ ಆರೋಗ್ಯ ವಿವಿ ಸ್ಥಾಪನೆಗೆ ತಡೆಯೊಡ್ಡಿ, ಈಗ ಅಭಿವೃದ್ಧಿಯ ಬಗ್ಗೆ ಯಾರು ಮಾತನಾಡುತ್ತಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. 2023ರ ಚುನಾವಣೆಯಲ್ಲಿ ʼನಕಲಿ ಅಭಿವೃದ್ಧಿಗೆʼ ಜನ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.

ಸಿಎಂ ಹೇಳಿದ್ದೇನು
ಜಿಲ್ಲೆಯ ಅಭಿವೃದ್ಧಿ, ಕರ್ನಾಟಕದ ಅಭಿವೃದ್ಧಿಗೆ ಸಂಕಲ್ಪ ಮಾಡಲಾಗಿದೆ. ಈ ಘಟನೆಗಳು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಲ್ಲ. ಚುನಾವಣೆಗೆ 1 ತಿಂಗಳಿರುವಾಗ ರಾಜಕಾರಣ ಮಾಡೋಣ ಎಂದು ರಾಮನಗರದಲ್ಲಿ ವೇದಿಕೆಯಲ್ಲಿ ಅಶ್ವತ್ಥ ನಾರಾಯಣ, ಡಿಕೆ ಸುರೇಶ್, ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆಗೆ ಸಂಬಂಧಿಸಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ರಾಮನಗರ ಜಿಲ್ಲೆ ಕರ್ನಾಟಕಕ್ಕೆ ಮಾದರಿಯಾಗುವ ಜಿಲ್ಲೆ. ಅಭಿಮಾನ, ಸಂತಸದಿಂದ ರಾಮನಗರಕ್ಕೆ ಬಂದಿದ್ದೇನೆ. ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಚುನಾವಣೆಯ 1 ತಿಂಗಳು ಮಾತ್ರ ರಾಜಕಾರಣ ಮಾಡೋಣ. ರಾಮನಗರ ಜಿಲ್ಲೆಗೆ ಬಂದು ಪ್ರಚಾರ ಪಡೆಯುವ ಅಗತ್ಯವಿಲ್ಲ. ರಾಮನಗರ ಜಿಲ್ಲೆಗೆ ಕೊಡುಗೆ ಕೊಡಲು ಇಲ್ಲಿಗೆ ಬಂದಿದ್ದೇನೆ. ಹಲವಾರು ವಿಚಾರಗಳು ನನೆಗುದಿಗೆ ಬಿದ್ದಿರುವುದು ಗೊತ್ತಿದೆ. ಜನರು ರಾಜಕಾರಣ ಮಾಡುವುದನ್ನು ಕಲಿಯಬೇಕು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಜನರು ರಾಜಕಾರಣ ಮಾಡಿದರೆ ನಮ್ಮನ್ನು ಕೈಬಿಡುವುದಿಲ್ಲ. ಕರ್ನಾಟಕ ಏಕೀಕರಣಕ್ಕೆ ಹೋರಾಟ ಮಾಡಿದ ಜಿಲ್ಲೆ ಇದು. ರಾಮನಗರ ಜಿಲ್ಲೆಯ ಜೊತೆ ಹಳೆಯ ಸಂಬಂಧವಿದೆ. ಕೆಂಗಲ್ ಹನುಮಂತಯ್ಯ ಅಖಂಡ ಕರ್ನಾಟಕದ ಸಿಎಂ ಆಗಿದ್ರು. ಕೆಂಗಲ್ ಹನುಮಂತಯ್ಯನವರು ಸುಸಂಸ್ಕೃತ ಆಡಳಿತ ನೀಡಿದ್ರು. ಇಂದಿರಾ ಗಾಂಧಿಯವರ ಜತೆ ಅತ್ಯಂತ ಒಡನಾಟ ಹೊಂದಿದ್ದರು. ಪ್ರಧಾನಿ ಜತೆ ಹೆಚ್.ಡಿ. ದೇವೇಗೌಡರಿಗೆ ಅನ್ಯೋನ್ಯ ಸಂಬಂಧವಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಅಷ್ಟಕ್ಕೂ ಆಗಿದ್ದೇನು?
ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ್ದನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಸಚಿವ ಅಶ್ವತ್ಥನಾರಾಯಣ ' ಇವತ್ತು ಏನು ತಪ್ಪಾಗಿದೆ ಎಂದು ನಾಲ್ಕು ಜನರನ್ನು‌‌ ಸೇರಿಸಿ ಘೋಷಣೆ ಕೂಗುತ್ತೀರಿ.  ನಾನೇನು ಯಾರ ಜಮೀನಿಗೂ ಕೈ ಹಾಕಿಲ್ಲ. ಯಾವನೋ ಅವನು‌ ಗಂಡಸು ಅನ್ನೋನು' ಎಂದು ಪ್ರಚೋದಿಸಿದರು.

ಇದರಿಂದ ಕುಪಿತಗೊಂಡ ಸುರೇಶ್ ' ನನ್ನ ಗಂಡಸ್ಥನ ತೋರಿಸಲ' ಎಂದು ಅಶ್ವತ್ಥನಾರಾಯಣರತ್ತ ನುಗ್ಗಿದರು. ಇದರಿಂದ ಗಲಾಟೆ ಜೋರಾಯಿತು. ಬಳಿಕ‌ ಸುರೇಶ್ ವೇದಿಕೆಯಲ್ಲೇ ಧರಣಿ‌‌ ಕುಳಿತರು.

click me!