ಬಿಜೆಪಿ ಮೇಲೆ ಶೇ.40 ಕಮಿಷನ್‌ ಆರೋಪಿಸಿದ್ದ ಕಾಂಗ್ರೆಸ್‌, ಈಗ ಶೇ.65 ಕಮಿಷನ್ ವಸೂಲಿ ಮಾಡ್ತಿದೆ: ಬೊಮ್ಮಾಯಿ ಆರೋಪ

By Sathish Kumar KH  |  First Published Aug 10, 2023, 8:05 PM IST

ಬಿಜೆಪಿ ಸರ್ಕಾರದ ವಿರುದ್ಧ ಶೇ.40 ಪರ್ಸೆಂಟ್‌ ಕಮಿಷನ್‌ ಆರೋಪ ಮಾಡುತ್ತಿದ್ದ ಕಾಂಗ್ರೆಸ್‌ ಸರ್ಕಾರ ಈಗ ಶೇ.65 ಪರ್ಸೆಂಟ್‌ ಕಮಿಷನ್‌ ವಸೂಲಿಗೆ ಮುಂದಾಗಿದೆ.


ಬೆಂಗಳೂರು (ಆ.10): ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಸರ್ಕಾರದಲ್ಲಿ ಶೇ.65 ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ‌ನಾಯಕ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದಿದ್ದರೆ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲವಾದಲ್ಲಿ ಕರ್ನಾಟಕ ಕಾಂಗ್ರೆಸ್ ಕೇಂದ್ರಕ್ಕೆ ಎಟಿಎಂ ಎನ್ನುವುದು ಸಾಬೀತಾದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕೆ ಮಾಡಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಮನವಿ ಸ್ವೀಕರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಬಿಎಂಪಿಯಲ್ಲಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು  ಭೇಟಿ ಮಾಡಿದ್ದಾರೆ. ಅವರು ಮಾಡಿರುವ ಕೆಲಸಕ್ಕೆ ಹಣ ಬಿಡುಗಡೆ ಮಾಡಿಸಲು ಸರ್ಕಾರವನ್ನು ಆಗ್ರಹಿಸಲು ಮನವಿ‌ ಮಾಡಿದ್ದಾರೆ.  ನಾನು ಮುಖ್ಯಮಂತ್ರಿ ಆಗಿದ್ದಾಗ ಬಿಲ್ ಪಾವತಿಗೆ ಆನ್ಲೈನ್  ಮಾಡಿ ಸ್ಟ್ರೀಮ್ ಲೈನ್ ಮಾಡಿದ್ದೆನು‌. ಕಾಮಗಾರಿ ಪೂರ್ಣಗೊಳಿಸಿದ ಹಿರಿತನದ ಆಧಾರದ ಮೇಲೆ ಹಣ ಬಿಡುಗಡೆ ಮಾಡಲಾಗುತ್ತಿತ್ತು.‌ ಇದರಿಂದ ಅವರ ಬಾಕಿ ಕೂಡ ಕಡಿಮೆ ಉಳಿದಿತ್ತು ಎಂದರು.

Tap to resize

Latest Videos

ಗೃಹಲಕ್ಷ್ಮಿ ಯೋಜನೆಗೆ 2000 ರೂ. ಸ್ಮಾರ್ಟ್‌ ಕಾರ್ಡ್‌ ವಿತರಣೆ: ಆ.27ಕ್ಕೆ ಬೆಳಗಾವಿಯಲ್ಲಿ ಚಾಲನೆ

ಸಿಎಂ ಮೌನ, ಸಮ್ಮತಿಯ ಲಕ್ಷಣ: ಗುತ್ತಿಗೆದಾರರು ಹಿಂದಿನ ಸರ್ಕಾರದ ಅವಧಿಯಲ್ಲಿ ಮಾಡಿದ ಕೆಲಸಕ್ಕೆ ಈಗ ಲಂಚ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ. ಎಲ್ಲ ಇಲಾಖೆಗಳಲ್ಲಿ ಹಿಂದಿನ ಸರ್ಕಾರದ ಅವಧಿಯ ಕಾಮಗಾರಿಗಳಿಗೆ ಲಂಚ ಕೇಳುತ್ತಿರುವುದು ಸರ್ವವಿಧಿತವಾಗಿದೆ. ಮುಖ್ಯಮಂತ್ರಿಗಳು ಇದರ ಬಗ್ಗೆ ಮೌನ ವಹಿಸಿದ್ದಾರೆ. ಇದು ಅವರ ಸಮ್ಮತಿ ಅಂತ ಸೂಚಿಸುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ  ವರ್ಗಾವಣೆಗೆ ಹಣ ಪಡೆದಿಲ್ಲ ಅಂತ ಹೇಳಿದ್ದಾರೆ‌. ಆದರೆ, ಅವರ ಕಚೇರಿಯಿಂದ ವರ್ಗಾವಣೆ ಆಗಿರುವ ಆದೇಶಗಳು ಯಾಕೆ ಬದಲಾವಣೆ  ಆಗುತ್ತಿವೆ? ನಮ್ಮ ಅವಧಿಯಲ್ಲಿ ಕಾಮಗಾರಿಗಳಲ್ಲಿ ಪಾರದರ್ಶಕತೆ ತರಲು 3 ಜನರ ಸಮಿತಿ ರಚನೆ ಮಾಡಿದ್ದೆವು. ಆ ಆದೇಶಗಳನ್ನು ಈಗ ಪಾಲನೆ ಮಾಡುತ್ತಿಲ್ಲ ಎಂದು ಹೇಳಿದರು. 

40+25=65% ಕಮಿಷನ್‌ ಬಗ್ಗೆ ರಾಹುಲ್ ಗಾಂಧಿ ಮಧ್ಯ ಪ್ರವೇಶಿಸಲಿ:
ಕಾಂಗ್ರೆಸ್ ಹೈಕಮಾಂಡ್  ಭ್ರಷ್ಟಾಚಾರ ಸಹಿಸುವುದಿಲ್ಲ ಅಂತ ಹೇಳಿದ್ದಾರೆ‌. ಆದರೆ, ಗುತ್ತಿಗೆದಾರರು ರಾಹುಲ್ ಗಾಂಧಿಗೆ ಟ್ವೀಟ್ ಮಾಡಿ, 40+25=65% ಕಮಿಷನ್‌ ವಸೂಲಿ ಮಾಡುತ್ತಿದ್ದಾರೆ. ರಾಹುಲ್ ಗಾಂಧಿಯವರು ಭ್ರಷ್ಟಾಚಾರದ ಬಗ್ಗೆ ಝಿರೋ ಟಾಲೆರೆನ್ಸ್ ಇದ್ದರೆ, ತಕ್ಷಣ ಮಧ್ಯ ಪ್ರವೇಶ ಮಾಡಿ 24 ಗಂಟೆಯಲ್ಲಿ ಗುತ್ತಿಗೆದಾರರ ಬಾಕಿ ಹಣ ಕೊಡಿಸಲಿ. ಯಾರು ಕಳಪೆ ಕಾಮಗಾರಿ ಮಾಡಿದ್ದಾರೆ ಅದರ ಬಗ್ಗೆ ತನಿಖೆ ನಡೆಸಲಿ. ಪ್ರಾಮಾಣಿಕವಾಗಿ ಕೆಲಸ ಮಾಡಿದವರ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಅಂತ ಕರಿಯೋದು ಸಾಬೀತಾದಂತೆ ಆಗುತ್ತದೆ‌. ರಾಹುಲ್ ಗಾಂಧಿ ಮಧ್ಯ ಪ್ರವೇಶ ಮಾಡಿ 24 ಗಂಟೆಯಲ್ಲಿ ಸಮಸ್ಯೆ ಬಗೆ ಹರಿಸಬೇಕು ಎಂದು ಆಗ್ರಹಿಸಿದರು. 

Bengaluru: ಬಿಬಿಎಂಪಿ ಮಾಜಿ ಕಾಪೋರೇಟರ್‌ ಪುತ್ರ ನೇಣಿಗೆ ಶರಣು: ಸಾವಿನ ಸತ್ಯ ಬಿಚ್ಚಿಟ್ಟ ತಂದೆ

ಗುತ್ತಿಗೆದಾರರು ಕೆಲಸ ನಿಲ್ಲಿಸಿದರೆ ಬ್ರ್ಯಾಂಡ್ ಬೆಂಗಳೂರು ಸ್ಥಗಿತ ಆಗುತ್ತದೆ.  ಕಮಿಷನ್ ಎಷ್ಟು ಪಡೆಯಬೇಕು ಎನ್ನುವುದು ಸ್ಯಾಂಗ್ರಿಲಾ ಹೊಟೆಲ್ ನಲ್ಲಿ ಮಾತುಕತೆ ನಡೆಯುತ್ತಿದೆಯಂತೆ ಎಷ್ಟಕ್ಕೆ ಆಗುತ್ತದೆಯೋ ನೊಡೊಣ ಲಂಚ ಪಡೆಯುವುದು ಕೊಡುವುದು ಎರಡೂ ಅಪರಾಧ. ಗುತ್ತಿಗೆದಾರರು ಎಷ್ಟು ಪರ್ಸೆಂಟೇಜಿಗೆ ಒಪ್ಪುತ್ತಾರೊ, ಭ್ರಷ್ಟಾಚಾರದ ಭಾಗವಾಗುತ್ತಾರೊ, ಇಲ್ಲವೋ ನೋಡೊಣ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಕುರಿತು‌ ಕೇಳಿದ  ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೆಂಪಣ್ಣ ದೊಡ್ಡವರು, ಅವರೇ ಆರೋಪ ಮಾಡಿದ್ದರಲ್ಲ. 

ಡಿಕೆಶಿ ಸೂಪರ್ ಸಿಎಂ: ರಾಜ್ಯದಲ್ಲಿ ಡಿ. ಕೆ ಶಿವಕುಮಾರ್ ಸೂಪರ್ ಸಿಎಂ ಆಗಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ಟ್ರಾನ್ಸಫರ್ ತನ್ನ ಗಮನಕ್ಕೆ ತಂದು ಮಾಡಬೇಕು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್ ಸೂಪರ್ ಸಿಎಂ ಆಗಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಸಿಎಂ ಮತ್ತು ಸೂಪರ್ ಸಿಎಂ ಸೇರಿದಂತೆ ಒಟ್ಟು ಇಬ್ಬರು ಮುಖ್ಯಮಂತ್ರಿಗಳಿದ್ದಾರೆ. ಇನ್ನು ಸರ್ಕಾರದ ವಿರುದ್ದ ಬರುವ ಎಲ್ಲ ಪತ್ರಗಳೂ ಫೇಕ್ ಎಂದು ಸರ್ಕಾರ ಅಲ್ಲಗಳೆಯುತ್ತಿದೆ. ಅವರದೇ ಪಕ್ಷದ ಶಾಸಕರು ಬರೆದ ಪತ್ರವನ್ನೂ ಫೇಕ್ ಎನ್ನುತ್ತಾರೆ. ಈ ಸರ್ಕಾರವೇ ಫೇಕ್ ಎಂದು ಆರೋಪಿಸಿದರು.

click me!