Karnataka Govt Topple: ಡಿ.ಕೆ. ಶಿವಕುಮಾರ್ ಸಿಂಗಾಪುರದ ನಾಟಕ ಆರಂಭಿಸಿದ್ದಾರೆ: ಬಿಜೆಪಿ ಟೀಕೆ

By Sathish Kumar KH  |  First Published Jul 25, 2023, 11:44 AM IST

ಡಿಸಿಎಂ ಡಿ.ಕೆ. ಶಿವಕುಮಾರ್‌ ತಮ್ಮ ಭವಿಷ್ಯ ಮಂಕಾಗಬಹುದು ಎಂಬ ಭಯದಿಂದಲೇ ಈಗ ಸಿಂಗಾಪುರದ ನಾಟಕ ಆರಂಭಿಸಿದ್ದಾರೆ ಎಂದು ಬಿಜೆಪಿ ಟೀಕೆ ಮಾಡಿದೆ. 


ಬೆಂಗಳೂರು (ಜು.25): ರಾಜ್ಯದಲ್ಲಿ ಕರ್ನಾಟಕ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಎರಡು ತಿಂಗಳೂ ಕೂಡ ಕಳೆದಿಲ್ಲ, ಅದಾಗಲೇ ಸರ್ಕಾರ ಬಿದ್ದು ಹೋಗುವ ಮಾತುಗಳನ್ನು ಸ್ವತಃ ಉಪ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಈ ಬಗ್ಗೆ ಟೀಕೆ ಮಾಡಿರುವ ಕರ್ನಾಟಕ ಬಿಜೆಪಿ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಮ್ಮ ಭವಿಷ್ಯ ಮಂಕಾಗಬಹುದು ಎಂಬ ಭಯದಿಂದಲೇ ಈಗ ಸಿಂಗಾಪುರದ ನಾಟಕ ಆರಂಭಿಸಿದ್ದಾರೆ ಎಂದು ಟೀಕೆಯನ್ನು ಮಾಡಿದೆ. 

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟೀಕೆಯನ್ನು  ಮಾಡಿರುವ ರಾಜ್ಯ ಬಿಜೆಪಿ "ಜನತೆಯ ಕಿವಿಯ ಮೇಲೆ ಸದಾ ಹೂವಿಡುವ ಕಾಂಗ್ರೆಸ್, ತನ್ನ ಪರಂಪರೆಯನ್ನು ರಾಜ್ಯದಲ್ಲಿ ‌ಮುಂದುವರೆಸಿದೆ. ತಮ್ಮ ಸರ್ಕಾರದ ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ಹಾಗೂ ಬೆಲೆಯೇರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಕನಕಪುರದವರು ಸಿಂಗಾಪುರ ಎನ್ನುತ್ತಿದ್ದಾರೆ.

Tap to resize

Latest Videos

ಎರಡೇ ತಿಂಗಳಿಗೆ ಸಿದ್ದು ಸರ್ಕಾರಕ್ಕೆ ಶುರುವಾಯ್ತು ಟೆನ್ಶನ್, ಸಚಿವರ ವಿರುದ್ಧ ಕಾಂಗ್ರೆಸ್ ಶಾಸಕರ ದೂರು!

ಈ ತುಘಲಕ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಗ್ಯಾರಂಟಿಗಳ ವಿಷಯದಲ್ಲಿ ಉಲ್ಟಾ ಹೊಡೆದಿದೆ, ವರ್ಗಾವಣೆ ದಂಧೆಯಲ್ಲಿ ನಿರತವಾಗಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಹಿಂದೂ ಕಾರ್ಯಕರ್ತರ, ಜೈನ ಮುನಿಗಳ ಹತ್ಯೆ, ಪೊಲೀಸರ ಮೇಲೆ ಹಲ್ಲೆ, ಸಾಲು ಸಾಲು ಅತ್ಯಾಚಾರ ಹೀಗೆ ತಾನು ಆಡಳಿತವನ್ನು ನಿಭಾಯಿಸಲು ಅಸಮರ್ಥ ಎಂಬುದನ್ನು ಶುರುವಾತಿನಲ್ಲಿಯೇ ನಿರೂಪಿಸಿದೆ.

ಭವಿಷ್ಯ ಮಂಕಾಗುವ ಉದ್ದೇಶದಿಂದ ಸಿಂಗಾಪುರ ನಾಟಕ: ಹೀಗಾಗಿ ದೇಶದ ಇತಿಹಾಸದಲ್ಲಿ ಇದೇ ಮೊದಲು ಎಂಬಂತೆ ಅಧಿಕಾರಕ್ಕೆ ಬಂದ ಎರಡು ತಿಂಗಳೊಳಗೆ ಸರ್ಕಾರಕ್ಕೆ ರಾಜ್ಯಾದ್ಯಂತ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿದೆ.  ಬಡ, ಮಧ್ಯಮ, ಶ್ರಮಿಕ ವರ್ಗದವರು ಹೋದಲ್ಲಿ ಬಂದಲ್ಲಿ ಸರ್ಕಾರವನ್ನು ವಾಚಾಮಗೋಚರವಾಗಿ ನಿಂದಿಸಲು ಆರಂಭಿಸಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ, ತಮ್ಮ ಭವಿಷ್ಯ ಮಂಕಾಗಲಿದೆ ಎಂಬ ಕಾರಣಕ್ಕೆ ಡಿ.ಕೆ. ಶಿವಕುಮಾರ್ ಈಗ ಸಿಂಗಾಪುರದ ನಾಟಕ ಆರಂಭಿಸಿದ್ದಾರೆ. ಅಷ್ಟಕ್ಕೂ ಈ ಸರ್ಕಾರವನ್ನು ಬೀಳಿಸಲು ಹೊರಗಿನವರೇ ಬೇಕಾಗಿಲ್ಲ. ಅಸಲಿಗೆ ಸರ್ಕಾರದ ಪ್ರಮುಖ ಭಾಗವಾಗಿರುವವರಿಗೆ ಈ ಸರ್ಕಾರ ಬೇಕಾಗಿಲ್ಲ. 

ಸಿದ್ದರಾಮಯ್ಯ ವಿರುದ್ಧ ಮಾತನಾಡಲು ಹೊಸ ಗುಂಪು ರಚನೆ: ಸಚಿವರಾದ ಜಮೀರ್ ಅಹಮದ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ ಗಟ್ಟಿಯಾಗಿ ಸಿದ್ದರಾಮಯ್ಯರವರು ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುತ್ತಾರೆ ಎಂದು ಹೇಳುವ ಹಾಗಿಲ್ಲ. ಹೇಳಿದರೆ ಡಿ.ಕೆ.ಶಿವಕುಮಾರ್ ಬಣ ಮುಗಿಬೀಳುತ್ತದೆ. ಸಿದ್ದರಾಮಯ್ಯರವರ ವಿರುದ್ಧ ಮಾತನಾಡುವ ಹೊಸ ಗುಂಪಿನ ನಾಯಕ ಹರಿಪ್ರಸಾದ್ ಬಗ್ಗೆ ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಸಹ ನೀಡದೇ ಮೌನಂ ಸಮ್ಮತಿ ಲಕ್ಷಣಂ ಎಂಬಂತೆ ವರ್ತಿಸುತ್ತಾರೆ. ಈ ಸರಕಾರ ಉಳಿಯುವ ಯಾವ ಲಕ್ಷಣವೂ ಇಲ್ಲ ಮತ್ತದಕ್ಕೆ ಹೊರಗಿನವರ ಶ್ರಮದ ಅಗತ್ಯವೇ ಇಲ್ಲ. ಪರಸ್ಪರ ಗುದ್ದಾಡಿಕೊಳ್ಳುತ್ತಿರುವ ಒಳಗಿನ ನಾಲ್ಕು ಗುಂಪುಗಳೇ ಈ ಸರಕಾರವನ್ನು ಮುಗಿಸಲಿದೆ.

ಸೋಲಿನಿಂದ ಪುಟಿದೇಳಲು ಸಿದ್ಧವಾಯ್ತ ದಳ-ಕಮಲ..?: ಇಂದು ದೇವೇಗೌಡರ ಮಹತ್ವದ ಸುದ್ದಿಗೋಷ್ಠಿ..!

ಬಿಜೆಪಿಯಿಂದ ರಾಜ್ಯಾದ್ಯಂತ ಮಳೆ ಹಾನಿ ಭೇಟಿಗೆ ಪ್ರವಾಸ: ಆಪರೇಷನ್ ಸ್ಕೆಚ್ ನಲ್ಲಿ ನಮ್ಮ‌ ಗಮನ ಇಲ್ಲ. ರಾಜ್ಯದಲ್ಲೆಡೆ ಮಳೆಯಿಂದಾಗಿ ಹಾನಿ ಹಿನ್ನೆಲೆ‌ಯಲ್ಲಿ ಮಳೆ ಹಾನಿ ಪ್ರದೇಶಗಳ ವೀಕ್ಷಣೆಗೆ ಹೋಗುತ್ತಿದ್ದೇವೆ. ಎರಡು ತಂಡಗಳಲ್ಲಿ ನಾಯಕರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಶನಿವಾರ ಮತ್ತು ಭಾನುವಾರ ಬಿಜೆಪಿ ನಾಯಕರ ಪ್ರವಾಸ ಮಾಡಲಿದ್ದಾರೆ. ರಾಜ್ಯಾದ್ಯಂತ ಪ್ರವಾಸದ ಮೂಲಕ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ಮಾಡಲಾಗುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್,ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವರಾದ ಈಶ್ವರಪ್ಪ, ಆರ್ ಅಶೋಕ್, ಸುನೀಲ್ ಕುಮಾರ್, ಅಶ್ವಥ್ ನಾರಾಯಣ್, ಶಾಸಕರಾದ ವಿಜಯೇಂದ್ರ‌, ಸೋಮಣ್ಣ, ಆರಗ ಜ್ಞಾನೇಂದ್ರ, ಮಹೇಶ್ ಟೆಂಗಿನಕಾಯಿ, ರವಿಕುಮಾರ್, ಸೇರಿ ಹಲವರಿಂದ ಪ್ರವಾಸ ಕೈಗೊಳ್ಳಲಾಗುತ್ತದೆ. ಮಳೆ ಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು, ನೆರೆಯಿಂದ ಆಗಿರುವ ಹಾನಿಯ ಬಗ್ಗೆ ಅಧ್ಯಯನ ಮಾಡಿ, ಸೂಕ್ತ ಪರಿಹಾರಕ್ಕೆ ಸರ್ಕಾರಕ್ಕೆ ಒತ್ತಾಯ ಮಾಡಲಾಗುತ್ತದೆ. 

click me!