
ರಾಜ್ಯ ವಿಧಾನಸಭಾ ಚುನಾವಣೆ (Karnataka Elections) ಮುಂದಿನ ವರ್ಷ ನಡೆಯಲಿದೆ. ಆದರೆ, ರಾಜಕೀಯ ಚಟುವಟಿಕೆಗಳು ಈಗಲೇ ಗರಿಗೆದರಿವೆ. ಇದೇ ರೀತಿ, ಕಾಂಗ್ರೆಸ್‌ನಲ್ಲೂ (Karnataka Congress) ರಾಜಕೀಯ ಚಟುವಟಿಕೆಗಳು ಬಿರುಸಿನತ್ತ ಸಾಗಿವೆ. ಈ ಮಧ್ಯೆ, ಕರ್ನಾಟಕದಲ್ಲಿ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಚುನಾವಣೆ ಮುಗಿಯುವ ತನಕ ಕರ್ನಾಟಕದಲ್ಲೇ ತಂಗಿರಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ (Randeep Surjewala) ಅವರು ನಿರ್ಧಾರ ಮಾಡಿದ್ದಾರೆ. ಕಬ್ಬನ್ ಪಾಕ್೯ ಬಳಿ ಅರ್ಪಾಮೆಂಟ್ ಬಾಡಿಗೆಗೆ ತೆಗೆದುಕೊಂಡಿರುವ ರಣದೀಪ್ ಸುಜೇರ್ವಾಲ ಚುನಾವಣೆ ಮುಗಿಯುವ ತನಕ ಬೆಂಗಳೂರಿನಲ್ಲಿ ತಂಗಿರಲು ನಿರ್ಧಾರ ಮಾಡಿದ್ದಾರೆ. ಚುನಾವಣೆ ಮುಗಿಯುವ ತನಕ ಕರ್ನಾಟಕದಲ್ಲಿ ಇರಲು ಹೈಕಮಾಂಡ್ ಸೂಚಿಸಿರುವ ಹಿನ್ನೆಲೆ ಈ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ, ಅವರಿಗೆ ರಾಜ್ಯ ರಾಜಧಾನಿಯಲ್ಲಿ (Bengaluru) ಕಚೇರಿಯನ್ನೂ ನಿರ್ಮಾಣ ಮಾಡಲಾಗಿದೆ.
ತಿಂಗಳಲ್ಲಿ 20-25 ದಿನಗಳ ಕಾಲ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕರ್ನಾಟಕದಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ (KPCC) ಕಚೇರಿ ಹಿಂಭಾಗದಲ್ಲಿರುವ ನೂತನ ಕಟ್ಟಡದಲ್ಲಿ ನಿರ್ಮಾಣ ಮಾಡಲಾಗಿದೆ. ನೂತನವಾಗಿ ನಿರ್ಮಿಸಿರುವ ಈ ಕಚೇರಿಯಲ್ಲಿ 11 ಚೇಂಬರ್‌ಗಳು, 3 ಮೀಟಿಂಗ್ ಹಾಲ್ ವ್ಯವಸ್ಥೆ ಇರುತ್ತದೆ ಎಂದು ತಿಳಿದುಬಂದಿದೆ.
ಇದನ್ನು ಓದಿ: ಕ್ಲೀನ್ ಇಮೇಜ್‌ನ ಡಿಕೆಶಿ ಸೋದರರಿಗೆ ಬಿಜೆಪಿ ಕಿರುಕುಳ: ಸುರ್ಜೇವಾಲ
ಇನ್ನು, ಸುರ್ಜೇವಾಲಾಗೆ ನೂತನ ಕಚೇರಿ ಯಾಕೆ ನಿರ್ಮಾಣ ಮಾಡಲಾಗಿದೆ ಎಂದರೆ ನವೆಂಬರ್ 6ರಂದು ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನಾ ಸಮಾರಂಭ ಇದೆ. ಹಾಗೂ, ನವೆಂಬರ್ ತಿಂಗಳಿನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬಸ್ ಯಾತ್ರೆ ಮಾಡುತ್ತಿದ್ದಾರೆ. ಅಲ್ಲದೆ, ಒಬಿಸಿ, ಎಸ್ಸಿ, ಎಸ್ಟಿ ಸಮಾವೇಶಗಳ ಆಯೋಜನೆಯನ್ನೂ ಮಾಡಲಾಗುತ್ತಿದೆ. ಇದರ ಜತೆಗೆ, ನೀರಾವರಿ ಯೋಜನೆಗಳನ್ನು ಮುಂದಿಟ್ಟು ರ್‍ಯಾಲಿಗಳಿವೆ - ಹೀಗೆ ಸಾಲು ಸಾಲು ಕಾರ್ಯಕ್ರಮಗಳು ರಾಜ್ಯದಲ್ಲಿ ನಡೆಯಲಿವೆ.
ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನಡುವೆ ಭಿನ್ನಾಭಿಪ್ರಾಯ ಬಾರದಂತೆ ಇಬ್ಬರ ನಡುವೆ ಸಮನ್ವಯ ಮೂಡಿಸುವುದು, ಜೊತೆ ಜೊತೆಗೆ ಮುಂಬರುವ ಎಲೆಕ್ಷನ್‌ನಲ್ಲಿ ಗೆಲುವಿನ ರಣತಂತ್ರ ರೂಪಿಸುವುದು - ಈ ಎಲ್ಲಾ ಕಾರಣಕ್ಕೆ ರಣದೀಪ್ ಸುರ್ಜೇವಾಲಗೆ ಎಐಸಿಸಿ ಸೂಚನೆ ಮೇರೆಗೆ ರಾಜ್ಯದಲ್ಲಿ ಕಚೇರಿ ನಿರ್ಮಾಣ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕಮಿಷನ್ ದಂಧೆಗೆ ಬಿಜೆಪಿ ಕಾರ್ಯಕರ್ತರೇ ಬೇಸರ; ರಣದೀಪ್ ಸಿಂಗ್ ಸುರ್ಜೇವಾಲ
ಎಸ್‌ಸಿ ಎಸ್‌ಟಿ ಮೀಸಲಾತಿ ಕಾಂಗ್ರೆಸ್ ಕೂಸು
ಇನ್ನು, ರಾಜ್ಯ ಸರ್ಕಾರ ಎಸ್‌ಸಿ ಎಸ್‌ಟಿ ಮೀಸಲಾತಿಯನ್ನು ಹೆಚ್ಚಿಸಿರುವ ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ರಣದೀಪ್ ಸುರ್ಜೇವಾಲಾ, ಇದು ಕಾಂಗ್ರೆಸ್ ಕೂಸು ಎಂದಿದ್ದಾರೆ. ನ್ಯಾ.ನಾಗಮೋಹನ್ ದಾಸ್ ಸಮಿತಿ ರಚನೆ ಮಾಡಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ. ರಾಹುಲ್ ಗಾಂಧಿ ಈ ಬಗ್ಗೆ ಮಾತಾಡಿದ್ದರು. ಅಂದು, ಸಂಜೆ ಬೊಮ್ಮಾಯಿ ಕ್ಯಾಬಿನೆಟ್ ಕರೆದು ಸುಗ್ರೀವಾಜ್ಞೆ ಹೊರಡಿಸಿದರು ಎಂದು ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ಅಲ್ಲದೆ, ಪಮಚಮಸಾಲಿ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಮೊದಲು ತನ್ನ ನಿಲುವು ತಿಳಿಸಲಿ ಎಂದೂ ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸವಾಲು ಹಾಕಿದ್ದಾರೆ.
ಇದನ್ನೂ ಓದಿ: ಕೋಮು ವಿಷಯಗಳಲ್ಲಿ ಕಾಂಗ್ರೆಸ್ ಇನ್ನು ಗಪ್‌ಚುಪ್?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.