* ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಬಗ್ಗೆ ಚರ್ಚೆ ವಿಚಾರ
* ಮುಂದಿನ ಸಿಎಂ ಸಿದ್ದರಾಮಯ್ಯ ಎಂದಿರುವ ನಾಯಕರಿಗೆ ಖಡಕ್ ಎಚ್ಚರಿಕೆ
* ರಾಜ್ಯ ಕಾಂಗ್ರೆಸ್ ಉಸ್ತುವಾರಿ ಖಡಕ್ ಸಂದೇಶ ರವಾನೆ
ಬೆಂಗಳೂರು, (ಜೂನ್.21): ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ತಾರಕಕ್ಕೇರಿದೆ. ಕೆಲ ಶಾಸಕರು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಬಹಿರಂಗ ಹೇಳಿಕೆ ನೀಡುತ್ತಿರುವುದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಣ್ಣು ಕೆಂಪಾಗಿಸಿದೆ.
ಈ ಸಂಬಂಧ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಅವರನ್ನ ಭೇಟಿ ಮಾಡಿ ಈ ಬಗ್ಗೆ ದೂರು ನೀಡಿದ್ದಾರೆ. ಇದರ ಬೆನ್ನಲೇ ರಂದೀಪ್ ಸಿಂಗ್ ಸುರ್ಜೇವಾಲ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಬಿಜೆಪಿ ಅಯ್ತು ಈಗ ಕಾಂಗ್ರೆಸ್ ಸರದಿ: 'ಕೈ' ಪಾಳಯದಲ್ಲಿ ‘ಸಿದ್ದು ಮುಂದಿನ ಸಿಎಂ’ ವಿವಾದ..!
ಹೌದು....ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದ್ದ ಜಮೀರ್ ಅಹಮದ್ ಖಾನ್ ಮತ್ತು ರಾಘವೇಂದ್ರ ಹಿಟ್ನಾಳ್ ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸುರ್ಜೇವಾಲ, ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕತ್ವದ ಬಗ್ಗೆ ಕೆಲವರು ಬಹಿರಂಗ ಹೇಳಿಕೆ ನೀಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಸಂದರ್ಭ ಬಂದಾಗ ಪಕ್ಷದ ಹೈಕಮಾಂಡ್ ಮತ್ತು ಶಾಸಕರು ನಾಯಕತ್ವದ ಬಗ್ಗೆ ನಿರ್ಧರಿಸುತ್ತಾರೆ. ಆದರೆ ನಾಯಕತ್ವ ಕುರಿತು ಯಾರೂ ಯಾವುದೇ ಹೇಳಿಕೆ ನೀಡಬಾರದು ಎಂದು ಸುರ್ಜೇವಾಲ ತಾಕೀತು ಮಾಡಿದ್ದಾರೆ.
ಎಚ್ಚರಿಕೆ ಕೊಟ್ಟ ಡಿಕೆ ಶಿವಕುಮಾರ್‌ಗೆ ಜಮೀರ್ ಅಹ್ಮದ್ ಖಾನ್ ಡಿಚ್ಚಿ
ಭ್ರಷ್ಟ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಇಂತಹ ಸಮಯದಲ್ಲಿ ಭವಿಷ್ಯದಲ್ಲಿ ಯಾರು ಕಾಂಗ್ರೆಸ್ ಸಿಎಂ ಅಭ್ಯರ್ಥಿ ಅನ್ನುವುದನ್ನ ಹೇಳಬಾರದು ಎಂದು ನಾಯಕತ್ವದ ಹೇಳಿಕೆ ನೀಡಿದ ಶಾಸಕರ ಹೆಸರು ಪ್ರಸ್ತಾಪಿಸದೆ ಸೂಚನೆ ನೀಡಿದ್ದಾರೆ.
ಎಲ್ಲ ಕಾಂಗ್ರೆಸ್ ನಾಯಕರು ಜನರ ಹಿತಾಸಕ್ತಿಗಾಗಿ ಒಗ್ಗೂಡಿ ಹೋರಾಡಬೇಕು. ಮಹಾಭಾರತದ ಅರ್ಜುನನಂತೆ ಹೋರಾಟ ನಮ್ಮ ಗುರಿ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.