HDK ಬಜೆಟ್ ಮಂಡನೆ ಡೌಟ್ ಎಂದ BJP, ಅಲರ್ಟ್ ಆದ ಮೈತ್ರಿ ಸರ್ಕಾರ

By Web DeskFirst Published Feb 3, 2019, 8:08 PM IST
Highlights

ಕುಮಾರಸ್ವಾಮಿ ಬಜೆಟ್ ಮಂಡಿಸೋದು ಡೌಟ್ ಎಂದ ಬಿಜೆಪಿ ನಾಯಕರು ಹೇಳಿರುವುದು ಮೈತ್ರಿ ಸರ್ಕಾರ ಆತಂಕಗೊಂಡಿದೆ. ಇದ್ರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಅಲರ್ಟ್ ಆಗಿದ್ದಾರೆ.

ಬೆಂಗಳೂರು, [ಫೆ.03]: ಒಂದು ಕಡೆ ರಾಜ್ಯ ಮೈತ್ರಿ ಸರ್ಕಾರಕ್ಕೆ ಆತಂಕ, ಮತ್ತೊಂದು ಕಡೆ ಲೋಕಸಭಾ ಟಿಕೆಟ್ ಹಂಚಿಕೆ ಗೊಂದಲ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಇದರ ನಡುವೆ ಇದೇ ಫೆಬ್ರವರಿ 8ರಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಬಜೆಟ್​ ಮಂಡಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಫೆ.6 ರಿಂದ ಜಂಟಿ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮುನ್ನ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಒಟ್ಟುಗೂಡಿಸುವ ಕೆಲಸ ನಡೆಯುತ್ತಿದೆ.

ಕುಮಾರಸ್ವಾಮಿ ಬಜೆಟ್ ಮಂಡಿಸೋದು ಡೌಟ್: ಹೊಸ ಬಾಂಬ್ ಸಿಡಿಸಿದ ಅಶೋಕ್

ಬಿಜೆಪಿ ನಾಯಕರು ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದ್ರಿಂದ ಮೈತ್ರಿ ಸರ್ಕಾರ ಆತಂಕ ಸೃಷ್ಟಿಸಿದೆ. ಹಾಗಾಗಿ, ಕಾಂಗ್ರೆಸ್ ಮತ್ತು ಜೆಡಿಎಸ್​​ ಶಾಸಕರನ್ನು ಒಂದೆಡೆ ಸೇರಿಸಲು ಉಭಯ ಪಕ್ಷಗಳ ನಾಯಕರು ಒಂದು ತೀರ್ಮಾನಕ್ಕೆ ಬಂದಿದ್ದಾರೆ.

ಅದೇನೆಂದರೆ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು. ಹೌದು.. ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು  ಡಿಸಿಎಂ ಜಿ. ಪರಮೇಶ್ವರ್ ನೇತೃತ್ವದಲ್ಲಿ ಫೆಬ್ರವರಿ 6 ರಂದು ಖಾಸಗಿ ಹೊಟೇಲ್​ನಲ್ಲಿ ದೋಸ್ತಿ ಪಕ್ಷಗಳ ಶಾಸಕರಿಗೆ, ಸಚಿವರಿಗೆ ಔತಣಕೂಟ ಏರ್ಪಡಿಸಲಾಗಿದೆ. 

ಔತಣಕೂಟದ ಜತೆಗೆ ಎರಡೂ ಪಕ್ಷಗಳ ಜಂಟಿ ಶಾಸಕಾಂಗ ಸಭೆ ನಡೆಸಲು ಉಭಯ ಪಕ್ಷಗಳ ನಾಯಕರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

click me!