ನವದೆಹಲಿ(ಜು.11): ಹಿಂದುಳಿದ ಆಯೋಗ ಸಲ್ಲಿಸಿರುವ ಜಾತಿಗಣತಿ ವರದಿ ಬಿಡುಗಡೆ ಮಾಡಲು ಕಾಂಗ್ರೆಸ್ ಬೃಹತ್ ಪ್ರತಿಭಟನೆಗೆ ಮುಂದಾಗಿದೆ. ಇದರ ನಡುವೆ ಕಾಂಗ್ರೆಸ್ ನಾಯಕರು ಇದೀಗ ರಾಜ್ಯ ಸರ್ಕಾರದ ಮೇಲೆ ವರದಿ ಬಿಡುಗಡೆಗೆ ಆಗ್ರಹಿಸಿದ್ದಾರೆ. ಇದೀಗ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಕ್ಷಣವೇ ಕಾಂಗ್ರೆಸ್ ಸರ್ಕಾರ ಮಾಡಿದ್ದ ಜಾತಿಗಣತಿ ವರದಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಜಾತಿ ಗಣತಿ’ ಹೋರಾಟಕ್ಕೆ ಕಾಂಗ್ರೆಸ್ ತಯಾರಿ
undefined
ನವದೆಹಲಿಯಲ್ಲಿ ಮಾತನಾಡಿದ ಗುಂಡೂರಾವ್, ಬಿಎಸ್ ಯಡಿಯೂರಪ್ಪ ಸರ್ಕಾರವನ್ನು ವರದಿ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಹಿಂದುಳಿದ ವರ್ಗಗಳ ಆಯೋದ ಸಲ್ಲಿಸಿರುವ ಜಾತಿಗಣತಿ ವರದಿಯನ್ನು ರಾಜ್ಯ ಬಿಜೆಪಿ ಸರ್ಕಾರ ಬಿಡುಗಡೆ ಮಾಡಬೇಕು. ಮತ್ತಷ್ಟು ವಿಳಂಬ ಮಾಡುವುದು ಸರಿಯಲ್ಲ. ಈ ವರದಿಯಿಂದ ಹಲವರಿಗೆ ಅನುಕೂಲವಾಗಲಿದೆ ಎಂದು ಗುಂಡೂರಾವ್ ಹೇಳಿದ್ದಾರೆ.
ಕಾಲಾವಕಾಶ ಕೊರತೆ ಕಾರಣಕ್ಕೆ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾತಿ ಗಣತಿ ಬಿಡುಗಡೆ ಮಾಡಲು ಸಾಧ್ಯವಾಗಲಿಲ್ಲ. ಹಲವು ಸಮುದಾಯಗಳಿಗೆ ಪ್ರಯೋಜನವಾಗಲಿರುವ ಜಾತಿ ಗಣತಿ ವರದಿ ಬಿಡುಗಡೆಗೆ ಕಾಂಗ್ರೆಸ್ ಈಗಾಗಲೇ ಕಾನೂನು ತಜ್ಞರ ಅಭಿಪ್ರಾಯ ಕೇಳಿದೆ.
ಜಾತಿ ವ್ಯವಸ್ಥೆ ನಿರ್ಮೂಲನೆಗೆ ಬಸವಣ್ಣನ ಮಾರ್ಗ ಬೇಕು; ಕರ್ನಾಟಕ ನೆನೆದ ಕೇಂದ್ರ ಸಚಿವ!
ಕಾರ್ಯಕರ್ತನ ಮೇಲೆ ಡಿಕೆ ಶಿವಕುಮಾರ್ ಹಲ್ಲೆ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಲು ಗುಂಡೂರಾವ್ ನಿರಾಕರಿಸಿದ್ದಾರೆ. ಈ ಕುರಿತು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಇತ್ತ ಕೆಆರ್‌ಎಸ್ ಡ್ಯಾಮ್ ಬಿರುಕು ಹಾಗೂ ರಾಜಕೀಯ ನಾಯಕರ ಕೆಸರೆಚಾಟಕ್ಕೆ ಬ್ರೇಕ್ ಹಾಕಲು ಸರ್ಕಾರವನ್ನು ಆಗ್ರಹಿಸಿದ್ದಾರೆ. ಜನರ ಆತಂಕ ದೂರ ಮಾಡಲು ಸರ್ಕಾರ ಮುಂದಾಗಬೇಕು ಎಂದು ಗುಂಡುರಾವ್ ಹೇಳಿದ್ದಾರೆ.