ಬನ್ನಿ, ಬನ್ನಿ..ಇನ್ನು ಕೆಲ್ಸ ಮಾಡಿ: ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಟಾಂಗ್!

Published : Jan 17, 2019, 05:20 PM IST
ಬನ್ನಿ, ಬನ್ನಿ..ಇನ್ನು ಕೆಲ್ಸ ಮಾಡಿ: ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಟಾಂಗ್!

ಸಾರಾಂಶ

‘ಎಲ್ಲರಿಗೂ ವೆಲ್‌ಕಮ್ ಟು ಕರ್ನಾಟಕ’| ಆಪರೇಶನ್ ಸಂಕ್ರಾಂತಿ ಫೇಲ್ ಆದ ಪರಿಣಾಮ| ರಾಜ್ಯಕ್ಕೆ ಮರಳುತ್ತಿರುವ ಬಿಜೆಪಿ ಶಾಸಕರು| ಹರಿಯಾಣದ ಸ್ಟಾರ್ ಹೋಟೆಲ್‌ನಲ್ಲಿರುವ ಬಿಜೆಪಿ ಶಾಸಕರು| ಮರಳಿ ಬಂದ ಶಾಸಕರಿಗೆ ಕಾಂಗ್ರೆಸ್ ವ್ಯಂಗ್ಯಭರಿತ ವೆಲ್‌ಕಮ್| ಇನ್ನಾದರೂ ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸಲು ಸಲಹೆ| ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ 

ಬೆಂಗಳೂರು(ಜ.17): ಕಳೆದ ಕೆಲವು ದಿನಗಳಿಂದ ಹರಿಯಾಣದ ಸ್ಟಾರ್ ಹೋಟೆಲ್‌ನಲ್ಲಿ ಬೀಡು ಬಿಟ್ಟಿರುವ ಬಿಜೆಪಿ ಶಾಸಕರು ಒಬ್ಬೊಬ್ಬರಾಗಿ ಮರಳಿ ರಾಜ್ಯಕ್ಕೆ ಬರುತ್ತಿದ್ದಾರೆ.

ಈ ಮಧ್ಯೆ ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ವ್ಯಂಗ್ಯಭರಿತ ಸ್ವಾಗತ ನೀಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ‘ಲಕ್ಸುರಿ ಹೋಟೆಲ್ ನಲ್ಲಿ ಜಾಲಿ ಹಾಲಿ ಡೇ ಮುಗಿಸಿ ಬರುತ್ತಿರುವ ಬಿಜೆಪಿ ಶಾಸಕರಿಗೆ ಸ್ವಾಗತ. ಇನ್ನು ಮುಂದಾದರೂ ಈ ಶಾಸಕರು ತಮ್ಮ ಕ್ಷೇತ್ರಗಳಿಗೆ ತೆರಳಿ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸುತ್ತಾರೆ ಎಂಬ ವಿಶ್ವಾಸವಿದೆ..’ ಎಂದು ಕಿಚಾಯಿಸಿದ್ದಾರೆ.

ಆಪರೇಶನ್ ಸಂಕ್ರಾಂತಿ ಹೆಸರಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಆಡಳಿತ ತರುವ ಮೂಡ್‌ನಲ್ಲಿದ್ದ ಬಿಜೆಪಿ, ಇದೀಗ ಮತ್ತೊಮ್ಮೆ ತನ್ನ ತಂತ್ರದಲ್ಲಿ ವಿಫಲತೆ ಕಂಡಿದೆ. ಈ ಹಿನ್ನೆಲೆಯಲ್ಲಿ ಹರಿಯಾಣದಲ್ಲಿ ಬೀಡು ಬಿಟ್ಟಿದ್ದ ಬಿಜೆಪಿ ಶಾಸಕರು ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಮರಳಿ ರಾಜ್ಯಕ್ಕೆ ವಾಪಸ್ ಬರುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ