* ಕಾಂಗ್ರೆಸ್‌ನಿಂದ ಪಾದಯಾತ್ರೆ
* ಮೇಕೆದಾಟು ಕುಡಿಯುವ ನೀರಿನ ಯೋಜನೆಯ ಜಾರಿಗೆ ಒತ್ತಾಯಿಸಿ ಪಾದಯಾತ್ರೆ
* ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಕಟಣೆ
ಬೆಂಗಳೂರು, (ಡಿ.22): ಮೇಕೆದಾಟು ಕುಡಿಯುವ ನೀರಿನ ಯೋಜನೆಯ (Mekedatu Project) ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಮುಂದಾಳತ್ವದಲ್ಲಿ 2022ರ ಜನವರಿ 9ರಂದು ಬೆಳಗ್ಗೆ 9.30ಕ್ಕೆ ಪಾದಯಾತ್ರೆ (padayatra) ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಮೇಕೆದಾಟು ಪ್ರದೇಶದಿಂದ ಫ್ರೀಡಂಪಾರ್ಕ್ವರೆಗೆ ಪಾದಯಾತ್ರೆ ನಡೆಯಲಿದೆ. ಗ್ರಾಮೀಣ ಪ್ರದೇಶ, ನಗರ ಪ್ರದೇಶದಲ್ಲಿ ತಲಾ 5 ದಿನದಂತೆ ಪಾದಯಾತ್ರೆ ನಡೆಯಲಿದ್ದು ರಾಜ್ಯದ ಹಿತದೃಷ್ಟಿಯಿಂದ ನಡೆಯುತ್ತಿರುವ ಪಕ್ಷಾತೀತ ಹೋರಾಟಕ್ಕೆ ಎಲ್ಲ ವರ್ಗ, ಸಮುದಾಯದವರು ಬೆಂಬಲ ನೀಡಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
undefined
Mekedatu Project: ಜ.9ರಿಂದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ
ಹೋರಾಟದಲ್ಲಿ ಭಾಗವಹಿಸುವವರಿಗೆ ಉಚಿತ ಊಟ, ವಸತಿ ವ್ಯವಸ್ಥೆ ಇರಲಿದೆ. ಜತೆಗೆ www.MekedatuNammaHakku.orgಲಿಂಕನ್ನು ಓಪನ್ ಮಾಡಿ ನೊಂದಾಯಿಸಿಕೊಂಡು ಹೋರಾಟದಲ್ಲಿ ಕೈ ಜೋಡಿಸಿ. ನೀವೂ ಸಹ ರಾಜ್ಯದ ನೀರಿನ ಹಕ್ಕಿಗಾಗಿ ನಡೆಯುತ್ತಿರುವ ಈ ಹೋರಾಟದ ಭಾಗವಾಗಿರಿ. ನೀರಿನ ಹಕ್ಕಿಗಾಗಿ ಮೊಳಗುತ್ತಿರುವ ಈ ಧ್ವನಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕೇಳುವಷ್ಟು ಗಟ್ಟಿಯಾಗಿರಲಿ. ಮೇಕೆದಾಟು ಜಲಾಶಯ ನಿರ್ಮಾಣ ಯೋಜನೆಯನ್ನು ಶೀಘ್ರವೇ ಆರಂಭಿಸುವಂತೆ ಸರ್ಕಾರವನ್ನು ಒತ್ತಾಯಿಸಿ, ಮೇಕೆದಾಟು ಯೋಜನೆಯನ್ನು ಶೀಘ್ರವೇ ಅನುಷ್ಠಾನಗೊಳಿಸಿ ಎಂದಿದ್ದಾರೆ.
ಬೆಂಗಳೂರು ಹಾಗೂ ಸುತ್ತಮುತ್ತ ಪ್ರದೇಶಗಳಿಗೆ ಮುಂದಿನ 50-100 ವರ್ಷಗಳ ಅವಧಿಗೆ ಕುಡಿಯುವ ನೀರಿನ ಪೂರೈಕೆಯಾಗಲಿದೆ.
ಯೋಜನೆಯ ಅನುಷ್ಠಾನದಿಂದ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ.
ಬರಗಾಲದ ಸಂದರ್ಭದಲ್ಲೂ ತಮಿಳುನಾಡು ಸೇರಿದಂತೆ ನೆರೆ ರಾಜ್ಯಗಳಿಗೆ ಕಾಲಕ್ಕೆ ಸರಿಯಾಗಿ ನೀರು ಬಿಡುಗಡೆ ಸಾಧ್ಯವಾಗಲಿದೆ.
ಕೆಆರ್‌ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಅಣೆಕಟ್ಟುಗಳಲ್ಲಿ ನೀರು ಸಂಗ್ರಹಿಸುವ ಮೂಲಕ ಕಾವೇರಿ ಮಡಿಲಿನ ರೈತರಿಗೆ ಸಹಾಯಕವಾಗಲಿದೆ ಉಪಯೋಗಗಳ ಬಗ್ಗೆ ಎಂದು ತಿಳಿಸಿದ್ದಾರೆ.
ಈ ಐತಿಹಾಸಿಕ ಹೋರಾಟದಲ್ಲಿ ನಮ್ಮೊಂದಿಗೆ ಕೈಜೋಡಿಸಿರಿ. ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಪ್ರಮಾಣಪತ್ರ ನೀಡಲಾಗುವುದು. ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಊಟ, ವಸತಿ ವ್ಯವಸ್ಥೆ ಮಾಡಲಾಗುವುದು. ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಟೀ ಶರ್ಟ್ ಹಾಗೂ ಟೋಪಿಯನ್ನು ನೀಡಲಾಗುವುದು ಎಂದು ಪ್ರಕಟಣೆ ಹೊರಡಿಸಿದ್ದಾರೆ.
Koo Appಬೆಂಗಳೂರು ಸೇರಿದಂತೆ 10 ಜಿಲ್ಲೆಗಳ ಜನರು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದಾರೆ. ಮೇಕೆದಾಟು ಜಲಾಶಯ ನಿರ್ಮಾಣವಾದರೆ, ಕೋಟ್ಯಂತರ ಜನರ ಬದುಕು ಹಸನಾಗಲಿದೆ. ಇದಕ್ಕಾಗಿ ಜನವರಿ 9ರಿಂದ 19ರವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಬನ್ನಿ, ಈ ಹೋರಾಟದಲ್ಲಿ ನೀವೂ ಕೈಜೋಡಿಸಿ. MekedatuNammaHakku.org - ಕರ್ನಾಟಕ ಕಾಂಗ್ರೆಸ್ (@inckarnataka) 24 Dec 2021
ಎಲ್ಲಿಂದ ಎಲ್ಲಿಗೆ?
ಮೇಕೆದಾಟುವಿನಿಂದ ಕನಕಪುರ, ರಾಮನಗರ, ಬಿಡದಿ ಮೂಲಕ 75 ಕಿ.ಮೀ. ದೂರದಲ್ಲಿರುವ ಕೆಂಗೇರಿಗೆ ಪಾದಯಾತ್ರೆ ಆಗಮಿಸಲಿದೆ. ಬಳಿಕ ನಾಯಂಡಹಳ್ಳಿ ಜಂಕ್ಷನ್ ಮೂಲಕ ಬೆಂಗಳೂರು ನಗರದ ವಿವಿಧ ಕ್ಷೇತ್ರಗಳಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಮೇಕೆದಾಟುವಿನಿಂದ ಬೆಂಗಳೂರಿಗೆ 5 ದಿನ ಹಾಗೂ ಬೆಂಗಳೂರು ನಗರದಲ್ಲಿ 5 ದಿನ ಪಾದಯಾತ್ರೆ ನಡೆಯಲಿದ್ದು, ಒಟ್ಟು ಹದಿನೈದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 169 ಕಿ.ಮೀ. ಉದ್ದದ ಪಾದಯಾತ್ರೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಿದ್ದರಾಮಯ್ಯ ಕರೆ
ಈ ಪಾದಯಾತ್ರೆ ನಮ್ಮ ಪಕ್ಷದ ಕಾರ್ಯಕ್ರಮವಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಆಯೋಜಿಸಿರುವ ಹೋರಾಟ. ಎಲ್ಲಾ ಸಂಘ ಸಂಸ್ಥೆಗಳು, ಆಸಕ್ತರು ಇದರಲ್ಲಿ ಭಾಗವಹಿಸುವಂತೆ ವಿನಮ್ರವಾಗಿ ಮನವಿ ಮಾಡುತ್ತೇನೆ. ಮೇಕೆದಾಟು ನಮ್ಮ ಹಕ್ಕು, ನಮ್ಮ ಹಕ್ಕಿಗಾಗಿ ಹೋರಾಡೋಣ" ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.