ಬಿ.ಎಲ್‌. ಸಂತೋಷ್‌ ಹೇಳಿಕೆ ಶತಮಾನದ ಜೋಕ್‌: ಕಾಂಗ್ರೆಸ್‌ ವ್ಯಂಗ್ಯ

Published : Sep 02, 2023, 11:57 AM IST
ಬಿ.ಎಲ್‌. ಸಂತೋಷ್‌ ಹೇಳಿಕೆ ಶತಮಾನದ ಜೋಕ್‌: ಕಾಂಗ್ರೆಸ್‌ ವ್ಯಂಗ್ಯ

ಸಾರಾಂಶ

ವಿರೋಧ ಪಕ್ಷದ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡದ ಬಗ್ಗೆ ಬಿಜೆಪಿ ಶಾಸಕರು, ನಾಯಕರು ಬಹಿರಂಗವಾಗಿಯೇ ಅಸಮಧಾನ ಹೊರಹಾಕುತ್ತಿದ್ದಾರೆ. ಆ ಬಗ್ಗೆ ಮಾತನಾಡದಂತೆ ಬಿ.ಎಲ್‌.ಸಂತೋಷ್‌ ಅವರು ಬಿಜೆಪಿಗರಿಗೆ ಫರ್ಮಾನು ಹೊರಡಿಸಿದ್ದಾರೆ. ತಮ್ಮಲ್ಲಿನ ಹುಳುಕುಗಳೇ ಕೊಳೆತು ನಾರುತ್ತಿದೆ. ಅದನ್ನು ಸರಿಪಡಿಸುವ ಯೋಗ್ಯತೆ ಇಲ್ಲದವರು ಕಾಂಗ್ರೆಸ್‌ ಶಾಸಕರನ್ನು ಸಂಪರ್ಕಿಸಿ ಸಾಧಿಸುವುದಾದರು ಏನು ಎಂದು ಪ್ರಶ್ನಿಸಿದ ಕಾಂಗ್ರೆಸ್‌ 

ಬೆಂಗಳೂರು(ಸೆ.02):  ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು, ಕಾಂಗ್ರೆಸ್‌ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಶತಮಾನದ ಜೋಕ್‌ ಮಾಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ವ್ಯಂಗ್ಯವಾಡಿದೆ.

ಗುರುವಾರ ನಡೆದ ಬಿಜೆಪಿ ಸಭೆಯಲ್ಲಿ ಕಾಂಗ್ರೆಸ್‌ನ 40ರಿಂದ 45 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಬಿ.ಎಲ್‌.ಸಂತೋಷ್‌ ನೀಡಿದ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಿರುಗೇಟು ನೀಡಿರುವ ರಾಜ್ಯ ಕಾಂಗ್ರೆಸ್‌, ವಿರೋಧ ಪಕ್ಷದ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡದ ಬಗ್ಗೆ ಬಿಜೆಪಿ ಶಾಸಕರು, ನಾಯಕರು ಬಹಿರಂಗವಾಗಿಯೇ ಅಸಮಧಾನ ಹೊರಹಾಕುತ್ತಿದ್ದಾರೆ. ಆ ಬಗ್ಗೆ ಮಾತನಾಡದಂತೆ ಬಿ.ಎಲ್‌.ಸಂತೋಷ್‌ ಅವರು ಬಿಜೆಪಿಗರಿಗೆ ಫರ್ಮಾನು ಹೊರಡಿಸಿದ್ದಾರೆ. ತಮ್ಮಲ್ಲಿನ ಹುಳುಕುಗಳೇ ಕೊಳೆತು ನಾರುತ್ತಿದೆ. ಅದನ್ನು ಸರಿಪಡಿಸುವ ಯೋಗ್ಯತೆ ಇಲ್ಲದವರು ಕಾಂಗ್ರೆಸ್‌ ಶಾಸಕರನ್ನು ಸಂಪರ್ಕಿಸಿ ಸಾಧಿಸುವುದಾದರು ಏನು ಎಂದು ಪ್ರಶ್ನಿಸಿದೆ.

ಸಂತೋಷ್‌ ಮೊದ್ಲು ತಮ್ಮವರನ್ನೇ ಪಕ್ಷದಲ್ಲಿ ಉಳಿಸಿಕೊಳ್ಳಲಿ: ಜಗದೀಶ್‌ ಶೆಟ್ಟರ್‌

ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸಡ್ಡು ಹೊಡೆದು ಬಿ.ಎಲ್‌.ಸಂತೋಷ್‌ ಅವರು ನಡೆಸಿದ ಸಭೆಗೆ ಬಿ.ಎಸ್‌.ಯಡಿಯೂರಪ್ಪ, ಸಿ.ಟಿ.ರವಿ, ಬಸವರಾಜ ಬೊಮ್ಮಾಯಿ. ವಿ.ಸೋಮಣ್ಣ, ಎಸ್‌.ಟಿ.ಸೋಮಶೇಖರ್‌, ಶಂಕರ ಪಾಟೀಲ್‌ ಮುನೇನಕೊಪ್ಪ, ಶಿವರಾಂ ಹೆಬ್ಬಾರ್‌, ಎಂ.ಪಿ.ರೇಣುಕಾಚಾರ್ಯ ಹೀಗೆ ಹಲವರು ಗೈರಾಗಿದ್ದರು. ಬಿ.ಎಲ್‌.ಸಂತೋಷ್‌ ಅವರೇ, ಮೊದಲು ನಿಮ್ಮವರನ್ನು ಸಂಪರ್ಕಿಸಲು ಪ್ರಯತ್ನಿಸಿ. ಸುಳ್ಳು ಹೇಳಿಕೊಂಡು ತಿರುಗುವ ಮೊದಲು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಮತ್ತು ವಿಶ್ವಾಸವನ್ನು ಹೊಂದಲು ಪ್ರಯತ್ನಿಸಿ ಎಂದು ಹೇಳಿದೆ.

ಸಚಿವ ಎಂ.ಬಿ.ಪಾಟೀಲ್‌ ಮಾತನಾಡಿ, ಕರ್ನಾಟಕ ಬಿಜೆಪಿ ಮುಳುಗಿರುವ ಹಡಗು. ಬಿ.ಎಲ್‌.ಸಂತೋಷ್‌ ಅವರು ಸೀ ಡೈವರ್‌ ಥರ ಸಮುದ್ರದಲ್ಲಿ ಮುಳುಗಿ ರಾಜ್ಯ ಬಿಜೆಪಿಯನ್ನು ಮೇಲೆತ್ತಲಿ. ಅವರ ಪಕ್ಷ ಸರಿಯಿದ್ದಿದ್ದರೆ ಅವರ ಶಾಸಕರು ನಮ್ಮ ಪಕ್ಷದ ಕಡೆ ಯಾಕೆ ಬರುತ್ತಾರೆ. ಬಿ.ಎಲ್‌.ಸಂತೋಷ್‌ ಅವರ ಸಭೆಗೆ ಬಿ.ಎಸ್‌.ಯಡಿಯೂರಪ್ಪ ಸೇರಿ ಹಲವರು ಹೋಗಿಲ್ಲ ಎಂಬ ಮಾಹಿತಿಯಿದೆ. ಹೀಗೆ ಮುಂದುವರಿದರೆ ಬಿ.ಎಲ್‌.ಸಂತೋಷ್‌ ಸಭೆ ಮಾಡಿದರೆ, ಅದರಲ್ಲಿ ಯಾರೂ ಭಾಗಿಯಾಗುವುದಿಲ್ಲ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ