ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ ವ್ಯಕ್ತಿ ಸಂತೋಷ್ ಸಭೆ ನಡೆಸುವ ದುರ್ಗತಿ ಬಿಜೆಪಿಗೆ: ಕಾಂಗ್ರೆಸ್ ವ್ಯಂಗ್ಯ

Published : Sep 01, 2023, 01:30 AM IST
ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ ವ್ಯಕ್ತಿ ಸಂತೋಷ್ ಸಭೆ ನಡೆಸುವ ದುರ್ಗತಿ ಬಿಜೆಪಿಗೆ: ಕಾಂಗ್ರೆಸ್ ವ್ಯಂಗ್ಯ

ಸಾರಾಂಶ

ನಾಲ್ಕು ಮತ ಸೆಳೆಯಲಾಗದ, ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ ವ್ಯಕ್ತಿ ಸಂತೋಷ್ ಸಭೆ ನಡೆಸುವ ದುರ್ಗತಿ ಬಿಜೆಪಿಗೆ ಬಂದಿದೆ ಎಂದು ಕರ್ನಾಟಕ ಕಾಂಗ್ರೆಸ್ ವ್ಯಂಗ್ಯವಾಡಿದೆ.   

ಬೆಂಗಳೂರು (ಸೆ.01): ನಾಲ್ಕು ಮತ ಸೆಳೆಯಲಾಗದ, ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ ವ್ಯಕ್ತಿ ಸಂತೋಷ್ ಸಭೆ ನಡೆಸುವ ದುರ್ಗತಿ ಬಿಜೆಪಿಗೆ ಬಂದಿದೆ ಎಂದು ಕರ್ನಾಟಕ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಇತ್ತೀಚಿಗೆ ಬಿಜೆಪಿಯ ಶಾಸಕರು ಯಡಿಯೂರಪ್ಪನವರ ಮನೆಯಲ್ಲಿ ಸಭೆ ಸೇರಿ ನೀವೇ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದರು. ಬಿಜೆಪಿ ಶಾಸಕರೆಲ್ಲ ಯಡಿಯೂರಪ್ಪ ಹಿಂದೆ ಹೋಗಿದ್ದೇ ತಡ ಕುಪಿತರಾದ ಬಿ.ಎಲ್ ಸಂತೋಷ್ ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ ನಡೆಸಿದ್ದಾರೆ. 

ಚುನಾವಣೆಯ ತಂತ್ರಗಾರಿಕೆ ಮಕಾಡೆ ಮಲಗಿ ಹೀನಾಯ ಸೋಲು ಅನುಭವಿಸಿದಾಗ ಇದೇ  ಸಂತೋಷ್ ಗಂಟು ಮೂಟೆ ಕಟ್ಟಿಕೊಂಡು ನಾಪತ್ತೆಯಾಗಿದ್ದರು, ಈಗ BSY ಅವರಿಗೆ ಸೆಡ್ಡು ಹೊಡೆಯಲು ಮತ್ತೆ ಪ್ರತ್ಯಕ್ಷರಾಗಿ ಸಭೆ ನಡೆಸಿದ್ದಾರೆ. ಅದೇನೇ ಮಾಡಿದರೂ ಬಿಜೆಪಿಗೆ ಮತ್ತೆ ಜೀವ ಬರುವುದಿಲ್ಲ! ಎಂದು ಟೀಕಿಸಿ ಬರೆದಿದ್ದಾರೆ. ಬಿಜೆಪಿ ಪಕ್ಷಕ್ಕೆ ಸಭೆ ಕರೆಯಲು ಒಬ್ಬ ಅಧ್ಯಕ್ಷ ದಿಕ್ಕಿಲ್ಲ, ಬಿಜೆಪಿ ಶಾಸಕರ ಸಭೆ ನಡೆಸಲು ಒಬ್ಬ ಶಾಸಕಾಂಗ ಪಕ್ಷದ ನಾಯಕನಿಲ್ಲ. ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ, ನಾಲ್ಕು ಮತಗಳನ್ನು ಸೆಳೆಯಲು ಶಕ್ತಿ ಇಲ್ಲದ ಬಿ.ಎಲ್ ಸಂತೋಷ್ ಸಭೆ ನಡೆಸುವ ದುರ್ಗತಿ ಬಂದಿದೆ ಎಂದರೆ ಬಿಜೆಪಿ ಅದೆಷ್ಟು ರಾಜಕೀಯ ದಿವಾಳಿಯಾಗಿರಬಹುದು! ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆಯುವುದಕ್ಕೆ ಮಾತ್ರ ಈ ಸಭೆ ಸೀಮಿತವಾಗಿದೆ. 

ಸುಪ್ರೀಂಕೋರ್ಟ್​ನಲ್ಲಿ ನಾಳೆ ಕಾವೇರಿ ನೀರು ವಿಚಾರಣೆ ಅನುಮಾನ?: ಯಾಕೆ ಗೊತ್ತಾ!

ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಸಭೆ ನಡೆಸಬೇಕಿತ್ತು, ನೂತನ ರಾಜ್ಯಾಧ್ಯಕ್ಷರ ನೇಮಕಕ್ಕಾದರೂ ಸಭೆ ನಡೆಸಬೇಕಿತ್ತು. ಆದರೆ ಒಬ್ಬ ವ್ಯಕ್ತಿಯ ಪ್ರತಿಷ್ಠೆಯ ಹಪಹಪಿಯನ್ನು ಸಂತೈಸಲು ಸಭೆ ನಡೆಸಿದೆ. ಬಿಜೆಪಿಯ ಅಸಮಧಾನಿತರು ಈ ಸಭೆಯಿಂದ ದೂರ ಉಳಿಯುವ ಮೂಲಕ #BJPvsBJP ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ ಹಾಗೂ @blsanthosh ಅವರಿಗೆ ನಯಾಪೈಸೆ ಕಿಮ್ಮತ್ತಿಲ್ಲ ಎಂಬುದನ್ನು ಅನಾವರಣಗೊಳಿಸಿದೆ ಎಂದಿದೆ. ಬಿಜೆಪಿ ಬೆಂಗಳೂರು ಕಚೇರಿಯಲ್ಲಿ ಸಂತೋಷ್ ಸಭೆ ನಡೆಸಿರುವುದನ್ನು ಬಿಜೆಪಿ ಫೋಟೊ ಸಹಿತ ಟ್ವೀಟ್ ಮಾಡಿತ್ತು.‌ ಅದರ ಬೆನ್ನಲ್ಲೇ ಅದೇ ಫೋಟೊ ಮುಂದಿಟ್ಟು ಕಾಂಗ್ರೆಸ್ ಟ್ವೀಟ್ ನಲ್ಲೇ ತಿವಿದಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!