Morey Passes Away ಜನ್ಮದಿನದಂದೇ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ನಿಧನ

Published : Dec 09, 2021, 11:49 PM IST
Morey Passes Away ಜನ್ಮದಿನದಂದೇ  ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ನಿಧನ

ಸಾರಾಂಶ

* ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ನಿಧನ * ಮಾಜಿ ಸಚಿವ ಎಸ್. ಆರ್‌. ಮೋರೆ‌ ಜನ್ಮದಿನದಂದೇ ವಿಧಿವಶ * 4 ಬಾರಿ ಧಾರವಾಡದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಮೋರೆ

ಧಾರವಾಡ, (ಡಿ.09): ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ (Congress) ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎಸ್.ಆರ್‌.ಮೋರೆ‌(SR Morey) ವಿಧಿವಶರಾಗಿದ್ದಾರೆ.

ಇಂದು (ಡಿ.09) ಎಸ್.ಆರ್‌. ಮೋರೆ ಅವರು  ಧಾರವಾಡದ (Dharwad) ಎಸ್‌ಡಿ‌ಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 
82 ವರ್ಷದ ಎಸ್.ಆರ್‌. ಮೋರೆ‌ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ (Hospital) ದಾಖಲಾಗಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ವಿಧಿಯಾಟವೆಂಬಂತೆ ಇಂದು ಜನ್ಮದಿನದಂದೇ(Birthday) ಎಸ್.ಆರ್‌.ಮೋರೆ‌ ನಿಧನ ಹೊಂದಿದ್ದಾರೆ.

RSS Leader Passes Away : ಬಿಜೆಪಿ ಭೀಷ್ಮ ಉರಿಮಜಲು ರಾಮ್ ಭಟ್ ನಿಧನ

ಎಸ್. ಆರ್‌. ಮೋರೆ ಅವರು 4 ಬಾರಿ ಧಾರವಾಡದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಬಂಗಾರಪ್ಪ ಸರ್ಕಾರದಲ್ಲಿ ಸಹಕಾರಿ ಸಚಿವರಾಗಿದ್ದರು. ಧರಂಸಿಂಗ್ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದರು. 

ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಇನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಅವರು  ಮಾಜಿ ಸಚಿವ ಎಸ್. ಆರ್. ಮೋರೆಯವರ ಧಾರವಾಡದ ನಿವಾಸಕ್ಕೆ ಭೇಟಿ ನೀಡಿ ಅವರ  ಅಂತಿಮ ದರ್ಶನ ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಸಿಎಂ ಬೊಮ್ಮಾಯಿ ಸಂತಾಪ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಎಸ್.ಆರ್‌.ಮೋರೆ‌ ನಿಧನಕ್ಕೆ ಸಂತಾಪ ಸೂಚಿಸಿದ್ದು. ರಾಜ್ಯದ ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಎಸ್.ಆರ್. ಮೋರೆ ಅವರು ನಿಧನದ ಸುದ್ದಿ ತುಂಬಾ ದುಃಖದ ವಿಷಯ. ದೇವರು ಅವರ ಆತ್ಮಕ್ಕೆ ಸದ್ಗತಿ ನೀಡಿ, ಕುಟುಂಬಸ್ಥರು ಹಾಗೂ ಆಪ್ತರಿಗೆ ದುಃಖ ಭರಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಡಿಕೆ ಶಿವಕುಮಾರ್
ಹಿರಿಯ ಕಾಂಗ್ರೆಸ್ ನಾಯಕರೂ, ಮಾಜಿ‌ ಸಚಿವರೂ ಆಗಿದ್ದ ಶ್ರೀ ಎಸ್.ಆರ್ ಮೋರೆ ಅವರ ನಿಧನವು ಮನಸ್ಸಿಗೆ ನೋವನ್ನುಂಟುಮಾಡಿದೆ. 4 ಬಾರಿ ಧಾರವಾಡ ವಿಧಾನಸಭೆಯಿಂದ ಆಯ್ಕೆಯಾಗಿ, ಜನಪರ ಕಾರ್ಯಗಳ ಮೂಲಕ ಛಾಪು ಮೂಡಿಸಿದ್ದ ಶ್ರೀಯುತರ ನಿಧನವು ನಾಡಿಗೆ ಅಪಾರ ನಷ್ಟವನ್ನುಂಟುಮಾಡಿದೆ. ಅವರ ಕುಟುಂಬ ವರ್ಗಕ್ಕೆ ಸಂತಾಪಗಳನ್ನು ಸೂಚಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಂತಾಪ
ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಮಾಜಿ ಶಾಸಕರು, ರಾಜ್ಯದ ಮಾಜಿ ಸಚಿವರು ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ಎಸ್. ಆರ್. ಮೋರೆ ಅವರು ನಿಧನರಾಗಿದ್ದು ತುಂಬಾ ವಿಷಾದನೀಯ ಸಂಗತಿ.

ಜಗದೀಶ್ ಶೆಟ್ಟರ್
ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಮಾಜಿ ಶಾಸಕರು, ರಾಜ್ಯದ ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಎಸ್.ಆರ್. ಮೋರೆ ಅವರು ವಿಧಿವಶರಾದ ಸುದ್ದಿ ತಿಳಿದು ದುಃಖವಾಯಿತು. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಿ, ಕುಟುಂಬಸ್ಥರು ಹಾಗೂ ಆಪ್ತ ಬಳಗಕ್ಕೆ ದುಃಖ ಭರಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುವೆ.

ಸಲೀಂ ಅಹಮ್ಮದ್
ಮಾಜಿ ಸಚಿವರು ಹಾಗೂ ಹುಬ್ಬಳ್ಳಿ- ಧಾರವಾಡ ಭಾಗದ ಪ್ರಭಾವಿ ರಾಜಕಾರಣಿ ಎಸ್. ಆರ್. ಮೋರೆಯವರು ನಿಧನರಾದ ಸುದ್ದಿ ಕೇಳಿ ನೋವಾಯಿತು. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬದವರಿಗೆ ಅಭಿಮಾನಿಗಳಿಗೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ