
ಕುಷ್ಟಗಿ (ಮೇ.27): ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ದೇವರೇ ಈ ಭೂಮಿಗೆ ಕಳುಹಿಸಿದ್ದಾನೆ ಎಂದು ಹೇಳಿಕೊಂಡಿದ್ದಾರೆ. ಬಹುಶಃ ಭಾರತದಲ್ಲಿ ಬೆಲೆ ಏರಿಸಲು ದೇವರು ಇವರನ್ನು (ಮೋದಿ) ಕಳುಹಿಸಿರಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ವ್ಯಂಗ್ಯವಾಡಿದರು.
ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಪರವಾಗಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನವರು 50 ವರ್ಷ ಆಡಳಿತ ಮಾಡಿದರೂ ಒಮ್ಮೆಯು ನಮ್ಮನ್ನು ದೇವರು ಕಳುಹಿಸಿದ್ದಾರೆ ಅಂತ ಹೇಳಿಕೊಂಡಿಲ್ಲ. ನಮ್ಮನ್ನು ಕಳುಹಿಸಿದವರು ಮತದಾರರು, ನಾವು ಅವರ ಪರವಾಗಿ ಕೆಲಸ ಮಾಡಬೇಕು ಎಂದರು.
ಬಿಜೆಪಿಯವರು ಜನರನ್ನು ಖರೀದಿ ತೆಗೆದುಕೊಂಡಿದ್ದಾರೆ ಎನ್ನುವ ರೀತಿ ಮಾತನಾಡುತ್ತಾರೆ. ಆದರೆ ನಾವು ಸತ್ಯ ಮಾತನಾಡಲು ಪ್ರಯತ್ನ ಮಾಡುತ್ತೇವೆ. ಕಾಂಗ್ರೆಸ್ ಮತದಾರರನ್ನು ದೇವರನ್ನಾಗಿ ಕಾಣುತ್ತದೆ ಎಂದರು.
ನರೇಂದ್ರ ಮೋದಿ ಅಹಂಕಾರದ ಕೊನೆ ಹಂತ ಇದು ಅದಕ್ಕೆ ಏನೇನೋ ಮಾತಾಡ್ತಾರೆ: ಶಿವರಾಜ ತಂಗಡಗಿ ವಾಗ್ದಾಳಿ
ಈಶಾನ್ಯ ಪದವೀಧರ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಅವರಿಗೆ ಮತ ನೀಡಬೇಕು ಎಂದು ವಿನಂತಿಸಿಕೊಂಡರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪುರ, ಮಾಜಿ ಸಂಸದ ಸಂಗಣ್ಣ ಕರಡಿ ಮಾತನಾಡಿದರು. ಈ ಸಂದರ್ಭ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಇದ್ದರು. 26ಕೆಎಸಟಿ2: ಕುಷ್ಟಗಿ ಪಟ್ಟಣದ ಅಮರೇಗೌಡ ಬಯ್ಯಾಪುರ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಚಿವ ಶಿವರಾಜ ತಂಗಡಗಿ ಮಾತನಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.