ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಪರ ದನಿ ಎತ್ತಿದ ಸಂಸದ ಪ್ರತಾಪ ಸಿಂಹ!

By Kannadaprabha News  |  First Published Jun 4, 2024, 7:31 AM IST

ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರು ಬಿಜೆಪಿಯ ಉಚ್ಚಾಟಿತ ಮಾಜಿ ಶಾಸಕ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ. ರಘುಪತಿ ಭಟ್ ಪರ ಪೋಸ್ಟ್ ಮಾಡಿ, ಪಕ್ಷದ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.


 ಮೈಸೂರು/ಬೆಂಗಳೂರು (ಜೂ.4): ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರು ಬಿಜೆಪಿಯ ಉಚ್ಚಾಟಿತ ಮಾಜಿ ಶಾಸಕ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ. ರಘುಪತಿ ಭಟ್ ಪರ ಪೋಸ್ಟ್ ಮಾಡಿ, ಪಕ್ಷದ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.

ತಮ್ಮ ಸಾಮಾಜಿಕ ಮಾಧ್ಯಮದ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರತಾಪ್ ಸಿಂಹ, ಬಿಜೆಪಿಯ ಟಿಕೆಟ್ ಸಿಗದೆ ರಘುಪತಿ ಭಟ್‌ ಅವರು ಬುರ್ಖಾ ಸ್ಟೂಡೆಂಟ್ ನಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಬಂದಿದೆ. ಉಡುಪಿಯ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಮವಸ್ತ್ರ ಸಂಹಿತೆಯನ್ನು ಮುರಿದು ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿಯ ವಿರುದ್ಧ ಹೋರಾಡಿದ ರಘುಪತಿ ಭಟ್ಟರಿಗೆ ಎಂಎಲ್‌ಎ ಟಿಕೇಟ್‌ ಸಿಗಲಿಲ್ಲ, ಎಂಎಲ್‌ಸಿ ಟಿಕೇಟ್‌ ನ್ನೂ ಪಕ್ಷ ಕೊಡಲಿಲ್ಲ. ಸಾಲದೆಂಬಂತೆ ಪಕ್ಷದಿಂದಲೂ ಉಚ್ಚಾಟನೆಗೆ ಒಳಗಾಗಿ ಬುರ್ಖಾ ಸ್ಟೂಡೆಂಟ್ ಆಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ ಎಂದು ಪೋಸ್ಟ್ ಮಾಡಿದ್ದಾರೆ.

Tap to resize

Latest Videos

undefined

'ಗೆಲ್ಲುತ್ತೀ..' ಪಂಜುರ್ಲಿ ದೈವ ಹೇಳಿದೆ, ಸ್ಪರ್ಧೆಯಿಂದ ಹಿಂದೆ ಸರಿಯೊಲ್ಲ: ರಘುಪತಿ ಭಟ್

ಈ ಪೋಸ್ಟ್ ಕುರಿತಾಗಿ ಹಲವಾರು ಜನರು ಪ್ರತಿಕ್ರಿಯಿಸಿದ್ದು, ಹಿಂದೂತ್ವಕ್ಕೆ ಹೋರಾಡಿದವರನ್ನ ಬಿಜೆಪಿ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ ಅದಕ್ಕೆ ಉದಾಹರಣೆಯಾಗಿ ಸಂಸದ ಅನಂತಕುಮಾರ ಹೆಗ್ಡೆ, ಕೆಎಸ್‌ ಈಶ್ವರಪ್ಪ, ಸಂಸದ ಪ್ರತಾಪ್ ಸಿಂಹ, ರಘುಪತಿ ಭಟ್ ಅವರು ಟಿಕೆಟ್ ವಂಚಿತರಾಗಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

click me!