ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಬೆಳೆ ಹಾನಿ, ಜಂಟಿ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

Published : Oct 03, 2025, 06:19 AM IST
CM Siddaramaiah

ಸಾರಾಂಶ

ಹೆಚ್ಚಿನ ಮಳೆ ಇರುವುದರಿಂದ ಬೆಳೆ ಹಾನಿಯ ಜಂಟಿ ಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಜಂಟಿ ಸಮೀಕ್ಷೆಯ ನಂತರ ಬೆಳೆ ಹಾನಿಯಾದ ಎಲ್ಲಾ 10 ಲಕ್ಷ ಹೆಕ್ಟೇರ್‌ಗೂ ಬೆಳೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು (ಅ.03): ಹೆಚ್ಚಿನ ಮಳೆ ಇರುವುದರಿಂದ ಬೆಳೆ ಹಾನಿಯ ಜಂಟಿ ಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಜಂಟಿ ಸಮೀಕ್ಷೆಯ ನಂತರ ಬೆಳೆ ಹಾನಿಯಾದ ಎಲ್ಲಾ 10 ಲಕ್ಷ ಹೆಕ್ಟೇರ್‌ಗೂ ಬೆಳೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದಸರಾ ವಿಜಯದಶಮಿ ಮೆರವಣಿಗೆಗೆಯಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿದೆ. ಎಲ್ಲಾ ಜಲಾಶಯಗಳು ತುಂಬಿ, ಉತ್ತಮ ಬೆಳೆಯೂ ಆಗುತ್ತಿದೆ ಎಂದರು. ಆದರೆ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದ ರಾಜ್ಯದಲ್ಲಿ ಸುಮಾರು 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ.

ರೈತರಿಗೆ ಸಮೀಕ್ಷೆ ನಡೆಸಿ ಬೆಳೆ ಪರಿಹಾರ ನೀಡುವುದಾಗಿ ಕಲ್ಬುರ್ಗಿಯ ಭೇಟಿ ಸಂದರ್ಭದಲ್ಲಿ ತಿಳಿಸಿದ್ದೆ. ಸರ್ಕಾರ ಮತ್ತು ಎನ್‌ಡಿಆರ್‌ಎಫ್ ಸೇರಿದಂತೆ ಖುಷ್ಕಿ ಜಮೀನಿನ ತಲಾ ಹೆಕ್ಟೇರ್‌ಗೆ ₹17000, ನೀರಾವರಿ ಜಮೀನಿಗೆ ₹17500 ಮತ್ತು ಬಹುಬೆಳೆ ಬೆಳೆಯುವ ಜಮೀನಿಗೆ ₹31000 ಪರಿಹಾರ ನೀಡುವುದಾಗಿ ತಿಳಿಸಲಾಗಿದೆ. ಆದರೆ, ಹೆಚ್ಚಿನ ಮಳೆಯಿರುವುದರಿಂದ ಬೆಳೆ ಹಾನಿಯ ಜಂಟಿ ಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆ ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು.

ಬಿಜೆಪಿಗರು ಕೇಂದ್ರ ಗಣತೀನೂ ವಿರೋಧಿಸುತ್ತಾರಾ?

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಬಹಿಷ್ಕರಿಸುವಂತೆ ಕರೆ ನೀಡಿರುವ ಬಿಜೆಪಿ ನಾಯಕರು ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ. ರಾಜ್ಯ ಸರ್ಕಾರದ ಸಮೀಕ್ಷೆ ಬಗ್ಗೆ ಆಕ್ಷೇಪಿಸುತ್ತಿರುವವರು, ಕೇಂದ್ರ ಸರ್ಕಾರ ನಡೆಸುವ ಜಾತಿ ಗಣತಿಯನ್ನೂ ವಿರೋಧಿಸುತ್ತಾರಾ ಎಂದು ಪ್ರಶ್ನಿಸಿದ್ದಾರೆ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವಿರುದ್ಧವಾಗಿ ಮಾತನಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಪತ್ರಿಕಾ ಹೇಳಿಕೆ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಾರಂಭಿಸುತ್ತಿದ್ದಂತೆಯೇ ‘ಸಬ್‌ ಕಾ ಸಾಥ್ ಸಬ್‌ ಕಾ ವಿಕಾಸ್‌’ ಎಂದು ಘೋಷಣೆ ಕೂಗುವವರ ಆಂತರ್ಯದ ನಿಜ ಬಣ್ಣ ಬಯಲಾಗುತ್ತಿದೆ.

ರಾಜ್ಯ ಬಿಜೆಪಿ ನಾಯಕರು ಒಬ್ಬೊಬ್ಬರಾಗಿ ನಮ್ಮ ಸಮೀಕ್ಷೆ ಬಹಿಷ್ಕರಿಸುವಂತೆ ಕರೆ ನೀಡುತ್ತಾ, ಸಾರ್ವಜನಿಕರೆದುರು ಬೆತ್ತಲಾಗುತ್ತಿದ್ದಾರೆ ಎಂದಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಒಂದು ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ. ರಾಜ್ಯ ಏಳು ಕೋಟಿ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿದೆ. ಇದು ಯಾರ ವಿರುದ್ಧವೂ ಅಲ್ಲ, ಎಲ್ಲರ ಪರ ಸಮೀಕ್ಷೆ ಮಾಡಲಾಗುತ್ತಿದೆ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆ ಸಾಧಿಸಿ ಸರ್ವರಿಗೂ ಸಮಪಾಲು, ಸಮಬಾಳು ನೀಡುವುದೇ ಇದರ ಮುಖ್ಯ ಉದ್ದೇಶ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ನಡೆಸುವ ಸಮೀಕ್ಷೆಯಿಂದ ಕೇವಲ ದಲಿತ, ಹಿಂದುಳಿದ ಜಾತಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸ್ಥಿತಿಗತಿ ಮಾತ್ರವಲ್ಲ, ಮುಂದುವರಿದ ಜಾತಿಗಳಲ್ಲಿನ ಬಡವರು ಮತ್ತು ಅವಕಾಶ ವಂಚಿತರ ಬಗ್ಗೆಯೂ ತಿಳಿಯಲಿದೆ. ಈ ವಾಸ್ತವಸ್ಥಿತಿ ಅರಿಯುವುದು ಬಿಜೆಪಿ ಅವರಿಗೆ ಬೇಡವಾಗಿದೆ. ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಎಲ್ಲರಿಗೂ ಸಿಗಬಾರದು. ಉಳ್ಳವರ ಕೈಯಲ್ಲೇ ಅದು ಇರಬೇಕು. ಹಿಂದುಳಿದವರು ಹಿಂದೆಯೇ ಉಳಿಯಬೇಕು. ಮಹಿಳೆಯರು ಅವಕಾಶ ವಂಚಿತರಾಗಿಯೇ ಇರಬೇಕು. ವರ್ಣ ಮತ್ತು ವರ್ಗಗಳ ನಡುವಿನ ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದವಾಗಿದ್ದು, ಬಿಜೆಪಿ ನಾಯಕರದ್ದು ಅದೇ ಮನುವಾದಿ ಮನಸ್ಥಿತಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ
ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು