ಲೋಕಸಭೆ ಚುನಾವಣೆ ಹೊತ್ತಲ್ಲಿ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯ ಕೂಗು ಎದ್ದಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ದಲಿತ ಮುಖ್ಯಮಂತ್ರಿ ಬೇಡಿಕೆ ಇಂದು ನಿನ್ನೆಯದಲ್ಲ. ದಶಕಗಳಿಂದ ದಲಿತ ಸಿಎಂ ಕೂಗು ಇದೆ ಎಂದು ಗುರುವಾರ ಹೇಳಿದ್ದಾರೆ.
ಬೆಳಗಾವಿ (ಮಾ.7): ಲೋಕಸಭೆ ಚುನಾವಣೆ ಹೊತ್ತಲ್ಲಿ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯ ಕೂಗು ಎದ್ದಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ದಲಿತ ಮುಖ್ಯಮಂತ್ರಿ ಬೇಡಿಕೆ ಇಂದು ನಿನ್ನೆಯದಲ್ಲ. ದಶಕಗಳಿಂದ ದಲಿತ ಸಿಎಂ ಕೂಗು ಇದೆ ಎಂದು ಗುರುವಾರ ಹೇಳಿದ್ದಾರೆ.
ಕಾಂಗ್ರೆಸ್ ಮಾತ್ರವಲ್ಲ, ಬಿಜೆಪಿ ಜೆಡಿಎಸ್ ನಲ್ಲೂ ದಲಿತ ಸಿಎಂ ಕೂಗು ಇದೆ. ಆದರೆ ಇದುವರೆಗೆ ಯಾವುದೇ ಪಕ್ಷದಲ್ಲೂ ದಲಿತ ವ್ಯಕ್ತಿ ಮುಖ್ಯಮಂತ್ರಿಯಾಗಿಲ್ಲ. ಈ ವಿಷಯದಲ್ಲಿ ನಮ್ಮ ಪಕ್ಷ 99 ರವರೆಗೆ ಬಂದು ಔಟಾಗಿಬಿಡುತ್ತದೆ. ಸೆಂಚುರಿ ಬಾರಿಸಲ್ಲ ಎಂದು ಸತೀಶ್ ಜಾರಕಿಹೊಳಿ ನಗುತ್ತಾ ಹೇಳಿದ್ದಾರೆ.
ಕಾಂಗ್ರೆಸ್ ಉದ್ದೇಶಿಸಿ ದಲಿತ ಸಿಎಂ ಹೇಳಿಕೆ ನೀಡಿಲ್ಲ: ಸಚಿವ ಮಹದೇವಪ್ಪ
ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಆಕಾಂಕ್ಷೆಯನ್ನು ಮತ್ತೊಮ್ಮೆ ತೇಲಿಬಿಟ್ಟಿರುವುದರಿಂದ ದಲಿತ ಸಿಎಂ ವಿಷಯವನ್ನು ಮುನ್ನೆಲೆಗೆ ತರಲಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ, ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ 20-25 ವರ್ಷಗಳಿಂದ ಮುಖ್ಯಮಂತ್ರಿಯಾಗುವ ಕನಸು ಹೊತ್ತಿದ್ದಾರೆ. ಈ ವಿಷಯವೇ ಬೇರೆ. ಖರ್ಗೆ ಕಾಲದಿಂದಲೂ ದಲಿತ ಸಿಎಂ ಬೇಡಿಕೆ ಈಡೇರಿಲ್ಲ ಎಂದರು.
ದಲಿತ ಸಿಎಂಗೆ ಜಾತಿ ವ್ಯವಸ್ಥೆಯೇ ಅಡ್ಡಗಾಲು: ಡಾ.ಪಿ.ಮೂರ್ತಿ ಬೇಸರ
2013ರಲ್ಲಿ ಜಿ ಪರಮೇಶ್ವರ್ ಅವರು ಮುಖ್ಯಮಂತ್ರಿಯಾಗಬೇಕು ಎಂಬ ಕೂಗು ಇತ್ತು. ಆದರೆ ಅವರಿಗೂ ಸಿಎಂ ಆಗುವ ಭಾಗ್ಯ ಸಿಗಲಿಲ್ಲ. ಪರಿಶಿಷ್ಟರು ಕಾಂಗ್ರೆಸ್ ಗೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ. ಅವರಿಗೆ ದೊಡ್ಡ ಸ್ಥಾನ ಸಿಗಬೇಕು. ಆದರೆ ಹೈಕಮಾಂಡ್ ಮೇಲೆ ಪ್ರಭಾವ ಬೀರಲು ನಾವು ವಿಫಲವಾಗಿದ್ದೇವೆ. ಲೋಕಸಭೆ ಚುನಾವಣೆ ನಂತರ ಈ ಕುರಿತು ಚರ್ಚಿಸುತ್ತೇವೆ ಎಂದು ಲೋಕೋಪಯೋಗಿ ಸಚಿವರು ತಿಳಿಸಿದ್ದಾರೆ.