
ಬೆಂಗಳೂರು(ಜು.31): ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು(ಬುಧವಾರ) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದು, ಮೇಕೆದಾಟು, ಭದ್ರಾ ಮೇಲ್ದಂಡೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳು ಹಾಗೂ ಬೆಂಗಳೂರು ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದಿಂದ ಸೂಕ್ತ ನೆರವು ನೀಡುವಂತೆ ಕೋರಲಿದ್ದಾರೆ.
ಬೆಳಗ್ಗೆ 10.30ಕ್ಕೆ ಪ್ರಧಾನಿ ಅವರ ಭೇಟಿಗೆ ಅವಕಾಶ ಕೋರಲಾಗಿದೆ. ಹಾಗಾಗಿ, ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲೇ ಉಳಿ ದಿದ್ದಾರೆ. ಪ್ರಧಾನಿ ಕಚೇರಿಯಿಂದ ಅನು ಮತಿ ಸಿಕ್ಕ ಕೂಡಲೇ ಭೇಟಿ ಮಾಡಲಿದ್ದಾರೆ.
ಸಿಡಿ ಶಿವಕುಮಾರನಿಂದ ಸರ್ಕಾರ ಹಾಳಾಗಿದೆ; ರಾಜ್ಯ ದಿವಾಳಿಯಾಗಿದೆ: ಡಿಕೆಶಿ ವಿರುದ್ಧ ಮತ್ತೆ ಹರಿಹಾಯ್ದ ರಮೇಶ್ ಜಾರಕಿಹೊಳಿ
ಬೆಂಗಳೂರಿನ ಫೆರಿಫೆರಲ್ ರಿಂಗ್ ರಸ್ತೆ ಯೋಜನೆಯನ್ನು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಆಗಿ ಪರಿವರ್ತಿಸುವ ಯೋಜನೆ ಇದ್ದು, ಇದಕ್ಕೆ ಕೇಂದ್ರದ ಭೂಸಾರಿಗೆ ಇಲಾಖೆ ಯಿಂದ ಅಗತ್ಯ ನೆರವು ನೀಡು ವಂತೆ ಕೋರಲಿದ್ದಾರೆ. ಅದೇ ರೀತಿ, ಕಾವೇರಿ ನದಿಗೆ ಕಟ್ಟಲು ಉದ್ದೇಶಿಸಿರುವ ಮೇಕೆದಾಟು ಸಮತೋಲಿತ ಅಣೆಕಟ್ಟು ಯೋಜನೆಗೆ ಅನುಮತಿ ನೀಡಬೇಕು. ಇದು ರಾಜ್ಯಕ್ಕಿಂತ ತಮಿಳುನಾಡಿಗೇ ಹೆಚ್ಚಿನ ಉಪಯೋಗ ವಾಗಲಿದೆ ಎಂಬುದನ್ನು ಮನವರಿಕೆ ಮಾಡಿ ಕೊಡಲಿದ್ದಾರೆ. ಅದೇ ರೀತಿ, ಭದ್ರಾ ಮೇಲ್ದಂಡೆ ಯೋಜನೆಗೆ ಸಹಾಯ ಬಯಸಲಿದ್ದಾರೆ ಎಂದು ತಿಳಿದುಬಂದಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.