ರಾಜ್ಯದ ಎಲ್ಲ ಜಾತಿ, ಧರ್ಮದ ಜನರು ನಮಗೆ ಮತ ನೀಡಿ ಜನರ ಸೇವೆ ಮಾಡಲು ಅವಕಾಶ ನೀಡಿದ್ದಾರೆ. ಆ ಕೆಲಸವನ್ನು ಮುಂದುವರೆಸಿಕೊಂಡು ಹೋಗುತ್ತೇವೆ: ಡಿ.ಕೆ.ಶಿವಕುಮಾರ್
ಕುದೂರು(ಅ.07): ಗ್ಯಾರಂಟಿ ಘೋಷಣೆಗಳಿಂದ ಪಂಜಾಬ್ ಸರ್ಕಾರ ದಿವಾಳಿಯಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರಾಕರಿಸಿದರು.
ಕುದೂರಿನ ಕೆಪಿಎಸ್ ಶಾಲಾ ರಂಗಮಂದಿರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಹಕ್ಕು ಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಮಾಧ್ಯಮ ಮಿತ್ರರು ಗ್ಯಾರಂಟಿ ಘೋಷಣೆಗಳಿಂದ ಪಂಜಾಬ್ ಸರ್ಕಾರ ದಿವಾಳಿಯಾಗಿದೆ. ಅದೇ ರೀತಿ ಕರ್ನಾಟಕವೂ ದಿವಾಳಿಯಾಗುತ್ತದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆಯಲ್ಲ ಎಂಬ ಪ್ರಶ್ನೆಗೆ ಏನನ್ನೂ ಉತ್ತರಿಸಲಿಲ್ಲ.
ಉದ್ಯೋಗ ಸೃಷ್ಟಿ ಉದ್ದೇಶದಿಂದ ಸೂಕ್ತ ಸ್ಥಳದಲ್ಲಿ ಮದ್ಯದಂಗಡಿ ತೆರೆಯಲು ಚಿಂತನೆ: ಡಿಕೆಶಿ
30 ವರ್ಷಗಳಿಂದ ಹೊಸ ಮದ್ಯದ ಅಂಗಡಿ ತೆರೆಯಲು ಅವಕಾಶ ನೀಡಿಲ್ಲ. ಕೆಲ ಮದ್ಯದ ಅಂಗಡಿಯವರು 4 - 5 ಕೋಟಿ ರುಪಾಯಿಗೆ ಪರವಾನಗಿ ಮಾರಾಟ ಮಾಡುತ್ತಿದ್ದಾರೆ. ಹೆಚ್ಚಿನ ಜನರಿಗೆ ಉದ್ಯೋಗಾವಕಾಶ ಕಲ್ಪಿಸಬೇಕಿದೆ. ಎಲ್ಲಿ ತೆರೆಯಬೇಕು, ಹೇಗೆ ತೆರೆಯಬೇಕು ಎಂಬುದನ್ನು ತೀರ್ಮಾನ ಮಾಡುತ್ತೇವೆ. ಪ್ರತಿ ಹಳ್ಳಿಗಳಲ್ಲಿ ಮದ್ಯದಂಗಡಿ ತೆರೆಯುತ್ತಿಲ್ಲ. ಮದ್ಯ ಸೇವಿಸುವುದನ್ನು ನಾವು ನೀವು ನಿಲ್ಲಿಸಲು ಆಗುತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರಾಜ್ಯದ ಎಲ್ಲ ಜಾತಿ, ಧರ್ಮದ ಜನರು ನಮಗೆ ಮತ ನೀಡಿ ಜನರ ಸೇವೆ ಮಾಡಲು ಅವಕಾಶ ನೀಡಿದ್ದಾರೆ. ಆ ಕೆಲಸವನ್ನು ಮುಂದುವರೆಸಿಕೊಂಡು ಹೋಗುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.