
ಬೆಂಗಳೂರು ಆ.8): ನೋಡಿಪಾ.. ಅದೇನೋ ಹೇಳ್ತಾರಲ್ಲ ದಿನಾ ಸಾಯೋರಿಗೆ ಅಳೋರ್ಯಾರು ಅಂತಾ. ಇವರದೆಲ್ಲ ದಿನಾ ಗೋಳು ಇದ್ದಿದ್ದೆ ಎಂದು ಮುಡಾ, ವಾಲ್ಮೀಕಿ ಹಗರಣ ವಿಚಾರಕ್ಕೆ ಪ್ರತಿಪಕ್ಷಗಳ ಆರೋಪಗಳಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಲೇವಡಿ ಮಾಡಿದರು.
ನಾವು ಇವರ ವಿರುದ್ಧ ಹೋರಾಟ ಮಾಡಿಕೊಂಡೇ ಈ ಸ್ಥಾನಕ್ಕೆ ಬಂದಿದ್ದೇವೆ. ಹಾಗಂತ ಇಲ್ಲಿಗೆ ನಿಲ್ಲಿಸೋದಿಲ್ಲ. ಮುಂದೆಯೂ ಹೋರಾಟ ಮಾಡುತ್ತೇವೆ. ದೇವೇಗೌಡರ ಕುಟುಂಬದ ದಾಖಲೆ ಬಿಚ್ಚಿಡುವ ಕೆಲಸ ಮಾಡಲೇಬೇಕಾಗುತ್ತದೆ. ಇದಕ್ಕೆಲ್ಲ ಒಳ್ಳೆಯ ಟೈಮ್, ಮುಹೂರ್ತ ಬೇಕು. ಶುಭ ವಾರ, ಶುಭ ನಕ್ಷತ್ರ ನೋಡಬೇಕಾಗುತ್ತೆ. ನಾವು ಈಗಾಗಲೇ ಅವರಿಗೆ ಹೇಳಿದ್ದೇವೆ. ನಮ್ಮದೇನಿದೆ ಅನ್ನೋದು ಮೊದಲು ಬಿಚ್ಚಿ, ಅನಂತರ ನಿಮ್ಮದು ಬಿಚ್ಚುತ್ತೇವೆ ಅಂತಾ. ನಾನು ಈ ಹಿಂದೆಯೇ ಎರಡು ಬಾರಿ ಬಹಿರಂಗ ಚರ್ಚೆಗೆ ಕರೆದಿದ್ದೇನೆ ಅವರು ಬರಲಿಲ್ಲ. ಈಗ ಅವರಣ್ಣ ರೇವಣ್ಣ ಇದ್ದಾರೆ ಅವರನ್ನೇ ಕಳಿಸಲಿ. ಟಿವಿಯಲ್ಲಿ ಬೇಡ, ಅಧಿವೇಶನದಲ್ಲಿ ಚರ್ಚೆ ಮಾಡೋಣ. ಈ ವಿಚಾರ ಮುಂದಿನ ಜನರೇಷನ್‌ಗೆ ಕೂಡ ಗೊತ್ತಾಗಬೇಕು ಎಂದು ಸವಾಲು ಹಾಕಿದರು.
ಎನ್‌ಡಿಎ ಸರ್ಕಾರಕ್ಕೆ ಅಲ್ಪಸಂಖ್ಯಾತರ ಮೇಲೆ ಕೋಪ ಇದೆ: ವಕ್ಫ್ ಕಾಯ್ದೆ ತಿದ್ದುಪಡಿ ವಿಚಾರಕ್ಕೆ ಸಿಎಂ ಕಿಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.