ಹರ್ಯಾಣ ಕಾಂಗ್ರೆಸ್‌ ಸೋಲಿಗೂ ಮುಡಾ ಕೇಸಿಗೂ ಸಂಬಂಧ?: ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

By Kannadaprabha NewsFirst Published Oct 9, 2024, 6:30 AM IST
Highlights

ರಾಜ್ಯದಲ್ಲಿ ಯಾವ ಬದಲಾವಣೆಯೂ ಆಗುವುದಿಲ್ಲ. 50-50 ಅಧಿಕಾರ ಹಂಚಿಕೆ ಸಂಗತಿ ಬೇರೆ ವಿಚಾರ. ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರವೇ ಇರುತ್ತದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮುಂದುವರೆಯುತ್ತಾರೆ ಎಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್. 

ರಾಯಚೂರು(ಅ.09): ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲಿಗೂ ಹಾಗೂ ರಾಜ್ಯದ ಮುಡಾ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. 

ಜಿಲ್ಲೆಯ ಸಿಂಧನೂರು ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರೈತ ದಸರಾ ಉತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಯಾವ ಬದಲಾವಣೆಯೂ ಆಗುವುದಿಲ್ಲ. 50-50 ಅಧಿಕಾರ ಹಂಚಿಕೆ ಸಂಗತಿ ಬೇರೆ ವಿಚಾರ. ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರವೇ ಇರುತ್ತದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮುಂದುವರೆಯುತ್ತಾರೆ ಎಂದರು. 

Latest Videos

ಬೈಎಲೆಕ್ಷನ್‌ನಿಂದ ಡಿಕೆಶಿಗೆ ಚನ್ನಪಟ್ಟಣ ನೆನಪಾಗ್ತಿದೆ: ಎಚ್.ಡಿ.ಕುಮಾರಸ್ವಾಮಿ

ಹರಿಯಾಣದಲ್ಲಿ ನಮ್ಮ ಪಕ್ಷಕ್ಕೆ ಹಿನ್ನಡೆ ಉಂಟಾಗಿರುವುದಕ್ಕೆ ರಾಜ್ಯದ ಮುಡಾ ಪ್ರಕರಣ ಕೂಡ ಒಂದು ಕಾರಣವಾಗಿದೆಯೇ ಎಂಬ ಆಪಾದನೆ ಕುರಿತ ಪ್ರಶ್ನೆಗೆ, ಯಾವ ಕಾಂಗ್ರೆಸ್ ನಾಯಕರೂ ಚುನಾವಣೆ ಸೋಲಿನ ಕುರಿತು ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೂ ಆ ಸೋಲಿಗೂ ಸಂಬಂಧವಿಲ್ಲ. ಈಗಾಗಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಎಂದರು.

ಕಾಶ್ಮೀರ ಫಲಿತಾಂಶ ಬದಲಾವಣೆಯ ಬೆಳಕು: 

ಹರ್ಯಾಣ ಮತ್ತು ಜಮ್ಮು-ಕಾಶ್ಮೀರ ಚುನಾವಣಾ ಫಲಿತಾಂಶ ದೇಶದ ಜನರ ಭಾವನೆಯನ್ನು ಪ್ರತಿಬಿಂಬಿಸಿದ್ದು, ದೇಶದಲ್ಲಿ ಬದಲಾವಣೆಯ ಬೆಳಕು ಕಾಣುವಂತಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಎಲ್ಲದಕ್ಕೂ ಒಂದು ಕಾಲ ಎಂಬುದಿರುತ್ತದೆ. ಸದ್ಯ ಎನ್‌ಡಿಎ ಸರ್ಕಾರಕ್ಕೆ ಅವಕಾಶ ನೀಡಿದ್ದಾರೆ. ಆದರೆ, ದೇಶದೆಲ್ಲೆಡೆ ಬದಲಾ ವಣೆಯಾಗುತ್ತಿದೆ ಎಂದರು.

click me!