ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ (ಇನ್ ಹೆರಿಟೆನ್ಸ್) ಹಾಕಲ್ಲ, ಬರ್ತ್ ಟ್ಯಾಕ್ಸ್ ಹಾಕಲ್ಲ. ಸ್ಯಾಮ್ ಪಿತ್ರೋಡಾ ಅವರ ಹೇಳಿಕೆ ವೈಯಕ್ತಿಕ, ಅದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ. ಅಂತಹ ಯಾವುದೂ ಕೂಡ ನಮ್ಮ ಪಕ್ಷದಲ್ಲಿ ತೀರ್ಮಾನ ಆಗಿಲ್ಲ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರು(ಏ.25): ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ (ಇನ್ ಹೆರಿಟೆನ್ಸ್) ಹಾಕಲ್ಲ, ಬರ್ತ್ ಟ್ಯಾಕ್ಸ್ ಹಾಕಲ್ಲ. ಸ್ಯಾಮ್ ಪಿತ್ರೋಡಾ ಅವರ ಹೇಳಿಕೆ ವೈಯಕ್ತಿಕ, ಅದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ. ಅಂತಹ ಯಾವುದೂ ಕೂಡ ನಮ್ಮ ಪಕ್ಷದಲ್ಲಿ ತೀರ್ಮಾನ ಆಗಿಲ್ಲ. ಪಕ್ಷದ ಪ್ರಣಾಳಿಕೆಯಲ್ಲಿರುವ ಅಂಶಗಳು ಮಾತ್ರ ಕಾಂಗ್ರೆಸ್ ನವು. ಅದರಿಂದ ಆಚೆಗಿನವೈಯ ಕ್ತಿಕ ಹೇಳಿಕೆಗಳಿಗೂ ನಮಗೂ ಸಂಬಂಧವಿಲ್ಲ' ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇದೇ ವೇಳೆ, 'ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಲಿನ ಅರಿವಾಗಿದೆ. ಹೀಗಾಗಿ ಕಾಂಗ್ರೆಸ್ ವಿರುದ್ಧ ಸುಳ್ಳು ಟೀಕೆ ಮಾಡುತ್ತಿದ್ದಾರೆ' ಎಂದು ಆರೋಪಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿತ್ರಾರ್ಜಿತ ಆಸ್ತಿಯಲ್ಲಿ ಶೇ.45 ರಷ್ಟು ಆಸ್ತಿ ಸರ್ಕಾರಕ್ಕೆ ನೀಡಬೇಕು ಎಂಬುದು ಶುದ್ಧ ಸುಳ್ಳು. ಡೆತ್ ಟ್ಯಾಕ್ಸ್, ಬರ್ತ್ ಟ್ಯಾಕ್ಸ್ ಯಾವುದೂ ಇಲ್ಲ. ಸ್ಯಾಮ್ ಪಿತ್ರೋಡಾ ಏನು ಹೇಳಿದ್ದಾರೆ ಗೊತ್ತಿಲ್ಲ, ಏನೇ ಹೇಳಿದ್ದರೂ ಅದು ಅವರ ವೈಯಕ್ತಿಕ ಹೇಳಿಕೆ. ಅದಕ್ಕೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ಕಾಂಗ್ರೆಸ್ ಅಜೆಂಡಾ ಬಟಾಬಯಲು: ಅಮಿತ್ ಶಾ
ಪ್ರಧಾನಿ ಸುಳ್ಳಿನ ಟೀಕೆ:
ಪ್ರಧಾನ ಮಂತ್ರಿಗಳು ಹತಾಶೆ ಹೇಳಿಕೆ ನೀಡುತ್ತಿದ್ದಾರೆ. ತಮಿಳುನಾಡು, ಕೇರಳ, ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಅವರ ಪಕ್ಷದ ನೆಲೆ ಇಲ್ಲ. ಹೀಗಾಗಿ ಆಂಧ್ರದಲ್ಲಿ ಟಿಡಿಪಿ ಜತೆ ಮೈತ್ರಿ ಮಾಡಿಕೊಂಡಿ ದ್ದಾರೆ. ಕರ್ನಾಟಕದಲ್ಲಿ ಅವರ ಸರ್ಕಾರ ಇಲ್ಲ. ಕರ್ನಾಟಕ ದಲ್ಲೂ ಅವರು ಎರಡಂಕಿ ಸ್ಥಾನ ಪಡೆಯಲ್ಲ. ಹೀಗಾಗಿ ಹತಾಶೆಯಿಂದ ಮಂಗಳಸೂತ್ರದ ಬಗ್ಗೆ ಮಾತನಾಡುತ್ತಿ ದ್ದಾರೆ ಎಂದು ಹೇಳಿದರು.
ಮೋದಿ ಅವರು ಪ್ರಧಾನಿ ಆದಾಗ 2,800 ರು. ಇದ್ದ ಒಂದು ಗ್ರಾಂ ಚಿನ್ನ ಈಗ 7,500 ಆಗಿದೆ. ನಮ್ಮ ಮಹಿಳೆಯರು ಮಂಗಳಸೂತ್ರ ಹಾಕಲಾಗದಂತೆ ಬಿಜೆಪಿಯವರು ಬೆಲೆ ಏರಿಕೆ ಮಾಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಅವರು ಕಿಡಿ ಕಾರಿದರು.