
ಮಂಡ್ಯ(ಆ.07): ಬಿಜೆಪಿ-ಜೆಡಿಎಸ್‌ನವರು ನಡೆಸುತ್ತಿರುವುದು ಪಾದಯಾತ್ರೆಯಲ್ಲ, ಅದು ಅವರ ಪಾಪ ವಿಮೋಚನಾ ಯಾತ್ರೆ. ಭ್ರಷ್ಟಾಚಾರದ ಪಾಪಗಳಿಂದ ವಿಮೋಚನೆಗೊಳ್ಳಲು ಅವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.
ಮಂಗಳವಾರ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಸಮಾವೇಶ ಉದ್ಘಾಟಿಸಿ ಮಾತನಾಡಿ, ವಿಪಕ್ಷಗಳು ನಡೆಸುತ್ತಿರುವ ಪಾದಯಾತ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ವಿರುದ್ಧ ಅಲ್ಲ. ಬದಲಾಗಿ ಸರ್ಕಾರದ ವಿರುದ್ಧ ಎಂದು ತಿಳಿಸಿದ್ದಾರೆ.
ಸಂಸತ್ ಅಧಿವೇಶನದ ಬಳಿಕ ಸಿದ್ದು ಪ್ರಾಸಿಕ್ಯೂಷನ್ ಭವಿಷ್ಯ ನಿರ್ಧಾರ?
ಗ್ಯಾರಂಟಿ ಯೋಜನೆ ನಿಲ್ಲಿಸಿ ಸರ್ಕಾರ ಉರುಳಿಸುವುದು ಅವರ ಉದ್ದೇಶ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಉರುಳಿಸುವುದು ಅವರ ಹಣೆಯಲ್ಲೇ ಬರೆದಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.