* ಕೊರೋನಾ ಭೀತಿ ಮಧ್ಯೆಯೇ ರಾಜ್ಯದಲ್ಲಿ ಚುನಾವಣೆ
* ರಾಜ್ಯದ ಮೂರು ನಗರ ಪಾಲಿಕೆಗಳಿಗೆ ಚುನಾವಣೆ ಮುಹೂರ್ತ ಫಿಕ್ಸ್
* ಎಲೆಕ್ಷನ್ ದಿನಾಂಕ ಪ್ರಕಟಿಸಿದ ರಾಜ್ಯ ಚುನಾವಣಾ ಆಯೋಗ
ಬೆಂಗಳೂರು, (ಆ.11): ಕೊರೋನಾ ಭೀತಿ ಹಿನ್ನೆಲೆಯಲ್ಲಿ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನ ಮುಂದೂಡಲಾಗಿದೆ. ಆದ್ರೆ, ಇದರ ಮಧ್ಯೆಯೇ ಇದೀಗ ರಾಜ್ಯದ ಮೂರು ನಗರ ಪಾಲಿಕೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ.
ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ನಗರ ಪಾಲಿಕೆಗಳಿಗೆ ರಾಜ್ಯ ಚುನಾವಣಾ ಆಯೋಗ ಇಂದು (ಆ.11) ಚುನಾವಣಾ ದಿನಾಂಕ ಘೋಷಣೆ ಮಾಡಿದೆ.
ಜಿಲ್ಲಾ, ತಾಲೂಕು ಪಂಚಾಯಿತಿ ಕ್ಷೇತ್ರಗಳ ಸಂಖ್ಯೆ ಪ್ರಕಟಿಸಿದ ಚುನಾವಣಾ ಆಯೋಗ
ಆಗಸ್ಟ್ 16 ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಆಗಸ್ಟ್ 23 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ. ಸೆಪ್ಟೆಂಬರ್ 6 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ಆ.16ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅದೇ ದಿನದಿಂದ ಮೂರು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.
ಒಂದೆಡೆ ಕೊರೋನಾ ಮೂರನೇ ಅಲೆ ಭೀತಿ ಶುರುವಾಗಿದೆ. ಇದರಿಂದ ಈಗಾಗಲೇ ನಡೆಯಬೇಕಿದ್ದ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಮುಂದೂಡಲಾಗಿದೆ. ರಾಜ್ಯ ಸರ್ಕಾರವೇ ಚುನಾವಣೆ ನಡೆಸದಂತೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಆಯೋಗ ಕ್ಷೇತ್ರಗಳ ಮೀಸಲಾತಿ ಪ್ರಕಟಿಸಿದರೂ ಚುನಾವಣೆ ದಿನಾಂಕ ಪ್ರಕಟಿಸಿಲ್ಲ.
ಈಗ ಈ ಮಹಾನಗರ ಪಾಲಿಕೆಗಳಿಗೆ ಕರ್ನಾಟಕ ಚುನಾವಣೆ ಆಯೋಗ ಎಲೆಕ್ಷನ್ ಘೋಷಣೆ ಮಾಡಿದೆ ಅಂದ್ರೆ, ನೆಕ್ಸ್ಟ್ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ನಿಗದಿ ಮಾಡುವ ಎಲ್ಲಾ ಸಾಧ್ಯತೆಗಳಿವೆ.