ಉತ್ತರ ಕನ್ನಡ: ಚುನಾವಣೆ ನಾಮಪತ್ರ, ರೂಪಾಲಿ ನಾಯ್ಕ್ ಭರ್ಜರಿ ಬಲ ಪ್ರದರ್ಶನ

Published : Apr 18, 2023, 10:57 AM IST
ಉತ್ತರ ಕನ್ನಡ: ಚುನಾವಣೆ ನಾಮಪತ್ರ, ರೂಪಾಲಿ ನಾಯ್ಕ್ ಭರ್ಜರಿ ಬಲ ಪ್ರದರ್ಶನ

ಸಾರಾಂಶ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಉತ್ತರಕನ್ನಡ ಜಿಲ್ಲೆಯಲ್ಲಿ ನಾಮಪತ್ರ ಸಲ್ಲಿಕೆಯ ಹಬ್ಬ ಸಕ್ಕತ್ ಜೋರಾಗಿತ್ತು. ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ರಾಜಕೀಯ ಘಟಾನುಘಟಿಗಳು ತಮ್ಮ ಬಲಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 

ಉತ್ತರ ಕನ್ನಡ (ಏ.18) : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಉತ್ತರಕನ್ನಡ ಜಿಲ್ಲೆಯಲ್ಲಿ ನಾಮಪತ್ರ ಸಲ್ಲಿಕೆಯ ಹಬ್ಬ ಸಕ್ಕತ್ ಜೋರಾಗಿತ್ತು. ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ರಾಜಕೀಯ ಘಟಾನುಘಟಿಗಳು ತಮ್ಮ ಬಲಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 

ಕಾರವಾರ ಮತಕ್ಷೇತ್ರ(Karwar constituency)ದಲ್ಲಿ ಈ ಬಾರಿ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರಾನೇರ ಹಣಾಹಣಿ ಎನ್ನುವಂತಾಗಿದ್ದು, ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್ (Roopali naik MLA) ತಮ್ಮ ವಿರೋಧಿಗಳು ಹುಬ್ಬೇರಿಸುವಂತೆ ಬಲಪ್ರದರ್ಶನ ನಡೆಸಿದ್ದಾರೆ. ಈ ಕುರಿತ ಒಂದು ಸ್ಟೋರಿ ಇಲ್ಲಿದೆ 

 

ಶಿರಸಿ: ಬಿಜೆಪಿ ಆಂತರಿಕ ಸಮೀಕ್ಷೆ: ಕಾರ್ಯಕರ್ತರಿಂದಲೂ ರೂಪಾಲಿ ನಾಯ್ಕ್ ಪರ ಬ್ಯಾಟಿಂಗ್

ರಾಜ್ಯದಲ್ಲಿ ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆ(Karnataka assembly election 2023) ಹಿನ್ನಲೆಯಲ್ಲಿ  ಉತ್ತರಕನ್ನಡ ಜಿಲ್ಲೆಯಲ್ಲಿ ಹಲವು ರಾಜಕೀಯ ಘಟಾನುಘಟಿಗಳು ತಮ್ಮ ಬಲಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಬಾರಿ ಜಿದ್ದಾಜಿದ್ದಿನ ಕ್ಷೇತ್ರವೆಂದೇ ಗುರುತಿಸಿಕೊಂಡಿರುವ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಂತೂ ಎರಡು ರಾಷ್ಟ್ರೀಯ ಪಕ್ಷಗಳ ನಾಯಕರು ತಮ್ಮ ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಬಲ ಪ್ರದರ್ಶನಕ್ಕಿಳಿದಿದ್ದಾರೆ. 

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಕೋಡಿಭಾಗ್ ಖಾಪ್ರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆ ಮೂಲಕ ಬಲಪ್ರದರ್ಶನ ನಡೆಸಿದರೆ, ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್ ಕಾರವಾರ ಮಾಲಾದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆ ನಡೆಸಿ ಇಡೀ ಕಾರವಾರವನ್ನೇ ಕೇಸರಿಮಯವನ್ನಾಗಿಸಿದರು. ಸತೀಶ್ ಪರವಾಗಿ ಸುಮಾರು 3-4 ಸಾವಿರ ಜನರು ಸೇರಿದ್ರೆ, ರೂಪಾಲಿ ಪರವಾಗಿ ಸುಮಾರು 6-7 ಸಾವಿರ ಜನರು ಮೆರವಣಿಗೆಯಲ್ಲಿ ಜಮಾವಣೆಗೊಂಡಿದ್ದರು. 

ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತಿಯಲ್ಲಿ ಮಾಲಾದೇವಿಗೆ ಪೂಜೆ ಸಲ್ಲಿಸಿ, ನಂತರ ಕಾರವಾರ ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಮೂಲಕ ಸಂಚರಿಸಿ ನಗರಸಭೆ ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಅಂದಹಾಗೆ, ಈ ಹಿಂದೆ ಕಾರವಾರಲ್ಲಿ ಈ ಬಾರಿಯ ಚುನಾವಣೆ ಘಟಾನುಘಟಿಗಳ ತ್ರಿಕೋನ ಸ್ಪರ್ಧೆ ಎನ್ನಲಾಗಿತ್ತು. ಆದರೆ, ಕೊನೇ ಸಂದರ್ಭದಲ್ಲಿ ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಕಣದಿಂದ ಹೊರಕ್ಕೆ ಜಾರಿದ ಹಿನ್ನೆಲೆ ಈ ಬಾರಿಯ ಚುನಾವಣೆ  ಹಾಲಿ ಶಾಸಕಿ ರೂಪಾಲಿ ನಾಯ್ಕ ಹಾಗೂ ಮಾಜಿ ಶಾಸಕ ಸತೀಶ್ ಸೈಲ್ ನಡುವೆ ಎನ್ನಲಾಗಿದೆ. ಈ ನಡುವೆ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆ ಚೈತ್ರಾ ಕೊಠಾರ್‌ಕರ್ ಮೊನ್ನೆಯಷ್ಟೇ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದು, ರೂಪಾಲಿ ನಾಯ್ಕ್ ವಿರುದ್ಧ ಸೆಣೆಸಾಡಲು ಅವರು ಕೂಡಾ ತಯಾರಿ ನಡೆಸುತ್ತಿದ್ದಾರೆ. ಈ ಬಾರಿಯ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಪಾಲಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ನಾಮಪತ್ರ ಸಲ್ಲಿಕೆಯ ವೇಳೆಯೇ 
ಶಾಸಕಿ ರೂಪಾಲಿ ನಾಯ್ಕ್ ಮಾತ್ರ ಅಧಿಕ ಜನರನ್ನು ಸೇರಿಸಿ ತಮ್ಮ ಬಲಪ್ರದರ್ಶನ ತೋರಿದ್ದಾರೆ. ಇನ್ನು ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಚೆಂಡೆ ವಾದ್ಯ, ಡೊಳ್ಳು, ಡಿ.ಜೆ ಮ್ಯೂಸಿಕ್ ಗಳಿಗೆ ಪಕ್ಷದ ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೂಪಾಲಿ ನಾಯ್ಕ್, ಬಾರಿ ಗೆಲುವು ತನ್ನದೇ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ಮಾಜಿ ಶಾಸಕ ಸತೀಶ್ ಸೈಲ್ ಕಾಂಗ್ರೆಸ್ ಪಕ್ಷದಿಂದ ತನ್ನ ಬೆಂಬಲಿಗರ ಜತೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಉತ್ತರ ಕನ್ನಡ: ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ 2000 ಮೀನುಗಾರರು!

ಜಿಲ್ಲೆಯಲ್ಲಿ 9ನೇ ಬಾರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹಳಿಯಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರೆ, ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೇ, ಮಾಜಿ ಶಾಸಕ ಮಂಕಾಳ ವೈದ್ಯ, ಕುಮಟಾ ಶಾಸಕ ದಿನಕರ ಶೆಟ್ಟಿ, ಶಿರಸಿಯಲ್ಲಿ ಭೀಮಣ್ಣ ನಾಯ್ಕ, ಯಲ್ಲಾಪುರದಲ್ಲಿ ವಿ.ಎಸ್ ಪಾಟೀಲ್ ಕೂಡಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಒಟ್ಟಿನಲ್ಲಿ ನಾಮಪತ್ರ ಸಲ್ಲಿಕೆ ಮೂಲಕ ಅಭ್ಯರ್ಥಿಗಳು ಶಕ್ತಿ ಪ್ರದರ್ಶನಕ್ಕೆ ಇಳಿದಿದ್ದು, ಇದು ಚುನಾವಣೆಯಲ್ಲಿ ಅಭ್ಯರ್ಥಿಗಳ ಪಾಲಿಗೆ ಎಷ್ಟರ ಮಟ್ಟಿಗೆ ಪಾಸಿಟಿವ್ ಆಗಲಿದೆ ಎಂದು ಕಾದು ನೋಡಬೇಕಷ್ಟೇ.

ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ಭರತ್‌ರಾಜ್ ಕಲ್ಲಡ್ಕ ಜತೆ ಕ್ಯಾಮೆರಾಮ್ಯಾನ್ ಗಿರೀಶ್ ನಾಯ್ಕ್, ಏಷಿಯಾನೆಟ್ ಸುವರ್ಣ ನ್ಯೂಸ್ ಕಾರವಾರ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ