ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಹೊಸದಾಗಿ ಉದಯಿಸಿದ ಮಸ್ಕಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಕ್ಷೇತ್ರ. ಕ್ಷೇತ್ರ ಪುನರ್ ವಿಂಗಡಣೆ ಬಳಿಕ 2008ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಮಾವ ಮಹಾದೇವಪ್ಪ ಗೌಡರನ್ನು ಮನವೊಲಿಸಿ ಸ್ಪರ್ಧಿಸದಂತೆ ಮಾಡುವಲ್ಲಿ ಯಶಸ್ವಿಯಾಗಿದ್ದ ಪ್ರತಾಪಗೌಡರು.
ರಾಮಕೃಷ್ಣ ದಾಸರಿ
ರಾಯಚೂರು (ಮಾ.25): ಎರಡು ವರ್ಷಗಳ ಹಿಂದೆ, 2019ರಲ್ಲಿ ನಡೆದಿದ್ದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದು ಮೊದಲ ಸಲ ಶಾಸಕರಾಗಿ ಆಯ್ಕೆಯಾಗಿರುವ ಆರ್.ಬಸನಗೌಡ ತುರ್ವಿಹಾಳ ಅವರನ್ನು ಸಾರ್ವತ್ರಿಕ ಚುನಾವಣೆಯಲ್ಲಿ ಮಣಿಸಿ ತಿರುಗೇಟು ನೀಡಲು ಬಿಜೆಪಿ ಪಣತೊಟ್ಟಿದ್ದು, ಆ ನಿಟ್ಟಿನಲ್ಲಿ ಪಕ್ಷದ ಸಂಭಾವ್ಯ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ರಣತಂತ್ರ ರೂಪಿಸುತ್ತಿದ್ದಾರೆ.
undefined
ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಹೊಸದಾಗಿ ಉದಯಿಸಿದ ಮಸ್ಕಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಕ್ಷೇತ್ರ. ಕ್ಷೇತ್ರ ಪುನರ್ ವಿಂಗಡಣೆ ಬಳಿಕ 2008ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಮಾವ ಮಹಾದೇವಪ್ಪ ಗೌಡರನ್ನು ಮನವೊಲಿಸಿ ಸ್ಪರ್ಧಿಸದಂತೆ ಮಾಡುವಲ್ಲಿ ಯಶಸ್ವಿಯಾಗಿದ್ದ ಪ್ರತಾಪಗೌಡರು, ನಂತರ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ 2013ರಲ್ಲಿ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದರು. ಆಗ ಕೆಜೆಪಿಯಿಂದ ಸ್ಪರ್ಧಿಸಿದ್ದ ಮಾವ ಮಹಾದೇವಪ್ಪ ಗೌಡರನ್ನು 19,147 ಮತಗಳ ಅಂತರದಿಂದ ಸೋಲಿಸಿ, ಎರಡನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು.
ಧ್ರುವನಾರಾಯಣ ಪುತ್ರಗೆ ಅನುಕಂಪ ‘ಕಾಂಗ್ರೆಸ್’ ಹಿಡಿಯುವುದೇ?: ಬಿಜೆಪಿಯಿಂದ ಹರ್ಷವರ್ಧನ್ ಸ್ಪರ್ಧೆ
2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆದ್ದು ಹ್ಯಾಟ್ರಿಕ್ ಬಾರಿಸಿದ್ದ ಪ್ರತಾಪಗೌಡ ಪಾಟೀಲ್, ಬಳಿಕ, ಮುಂಬೈ ತಂಡದಲ್ಲಿ ಗುರುತಿಸಿಕೊಂಡು ‘ಆಪರೇಷನ್ ಕಮಲ’ಕ್ಕೆ ಒಳಗಾಗಿ 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡರು. 2018ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ, ಕೇವಲ 213 ಮತಗಳ ಅಂತರದಲ್ಲಿ ಪರಾಭವಗೊಂಡಿದ್ದ ಆರ್.ಬಸನಗೌಡ ತುರ್ವಿಹಾಳ, 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ, ಪ್ರತಾಪಗೌಡರ ವಿರುದ್ಧ ಸುಮಾರು 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಮೊದಲ ಸಲ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಈ ಬಾರಿ ಆರ್.ಬಸನಗೌಡ ತುರ್ವಿಹಾಳ ಅವರು ಕಾಂಗ್ರೆಸ್‌ನಿಂದ ಟಿಕೆಟ್ ಆಕಾಂಕ್ಷಿ. ಪ್ರತಾಪಗೌಡ ಪಾಟೀಲ್ ಅವರು ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿ. ಬಹುಶ: ಇವರಿಗೇ ಆಯಾ ಪಕ್ಷಗಳ ಟಿಕೆಟ್ ಬಹುತೇಕ ಗ್ಯಾರಂಟಿ. ಜೆಡಿಎಸ್, ಇನ್ನೂ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಇನ್ನು, ಗಾಲಿ ಜನಾರ್ಧನ ರೆಡ್ಡಿ ಅವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ದಿ.ಶೇಖರಪ್ಪ ತಳವ ಅವರ ಧರ್ಮಪತ್ನಿ, ಶರಣಮ್ಮ ಅವರು ಸ್ಪರ್ಧಿಸುವ ಸಾಧ್ಯತೆಗಳಿವೆ. ಗಾಲಿ ಜನಾರ್ಧನ ರೆಡ್ಡಿಗೆ ಈ ಭಾಗದಲ್ಲಿ ಹೆಚ್ಚಿನ ಬೆಂಬಲಿಗರು, ಅಭಿಮಾನಿಗಳು ಇರುವುದರಿಂದ ಮತಗಳ ವಿಭಜನೆಯ ಭೀತಿ ರಾಷ್ಟ್ರೀಯ ಪಕ್ಷಗಳಿಗೆ ಎದುರಾಗಿದೆ.
ಕ್ಷೇತ್ರದ ಹಿನ್ನೆಲೆ: 2008ರಿಂದೀಚೆಗೆ ಇಲ್ಲಿ 1 ಉಪಚುನಾವಣೆ ಸೇರಿ ಒಟ್ಟು 4 ಚುನಾವಣೆಗಳು ನಡೆದಿವೆ. ಅದರಲ್ಲಿ ಮೂರು ಸಲ ಪ್ರತಾಪಗೌಡ ಪಾಟೀಲ್, ಒಂದು ಸಲ ಆರ್.ಬಸನಗೌಡ ತುರ್ವಿಹಾಳ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2008ರಲ್ಲಿ ಬಿಜೆಪಿಯಿಂದ ಹಾಗೂ 2013 ಮತ್ತು 2018ರಲ್ಲಿ ಕಾಂಗ್ರೆಸ್‌ನಿಂದ ಪ್ರತಾಪಗೌಡ ಪಾಟೀಲ್ ಶಾಸಕರಾಗಿ ಆಯ್ಕೆಯಾಗಿದ್ದು, 2019ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಆರ್.ಬಸನಗೌಡ ತುರ್ವಿಹಾಳ ಮೊದಲ ಬಾರಿ ವಿಜಯದ ನಗೆ ಬೀರಿದ್ದಾರೆ.
ಸ್ಪರ್ಧೆ ಹೆಸರಲ್ಲಿ ಸಿದ್ದರಾಮಯ್ಯ ಪ್ರಚಾರ ಪಡೆಯುತ್ತಿದ್ದಾರೆ: ಬಿ.ಎಸ್.ಯಡಿಯೂರಪ್ಪ
ಜಾತಿ ಲೆಕ್ಕಾಚಾರ: ಮಸ್ಕಿ ಕ್ಷೇತ್ರದಲ್ಲಿ 2,70, 515 ಮತದಾರರಿದ್ದು, ಈ ಪೈಕಿ, 28 ಸಾವಿರ ಲಿಂಗಾಯತರು, 36 ಸಾವಿರ ಪರಿಶಿಷ್ಟ ಜಾತಿ, 48 ಸಾವಿರ ಪರಿಶಿಷ್ಟ ಪಂಗಡ, 26 ಸಾವಿರ ಕುರುಬರು, 21 ಸಾವಿರ ಅಲ್ಪಸಂಖ್ಯಾತರು ಇದ್ದಾರೆ. ಹೀಗಾಗಿ, ಇಲ್ಲಿ ಅಹಿಂದ ಮತಗಳೇ ನಿರ್ಣಾಯಕ.