
ಬೆಂಗಳೂರು (ಏ.08): ಪ್ರಸಕ್ತ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿಯ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಹುತೇಕ ಭಾನುವಾರ ರಾತ್ರಿ ಅಂತಿಮಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳ ಪ್ರವಾಸದಲ್ಲಿರುವುದರಿಂದ ಭಾನುವಾರ ಸಂಜೆ ದೆಹಲಿಗೆ ವಾಪಸಾಗಲಿದ್ದಾರೆ. ಹೀಗಾಗಿ, ಭಾನುವಾರ ರಾತ್ರಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸಭೆ ನಡೆದು ಅಭ್ಯರ್ಥಿಗಳ ಪಟ್ಟಿಅಂತಿಮಗೊಳಿಸಲಾಗುತ್ತದೆ. ಸೋಮವಾರ ಪಟ್ಟಿಪ್ರಕಟಗೊಳಿಸುವ ಸಂಭವವಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಮೊದಲ ಪಟ್ಟಿಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಇರಲಿದೆ. ಕೆಲವು ಹಾಲಿ ಶಾಸಕರನ್ನು ಮೊದಲ ಪಟ್ಟಿಯಿಂದ ಕೈಬಿಟ್ಟು ಎರಡನೇ ಪಟ್ಟಿಗೆ ಪರಿಗಣಿಸಬಹುದು ಎಂಬ ಮಾತೂ ಕೇಳಿಬರುತ್ತಿದೆ. ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸೇರಿದಂತೆ ಹಲವು ರಾಜ್ಯ ನಾಯಕರು ಶುಕ್ರವಾರ ಸಂಜೆ ದೆಹಲಿ ತಲುಪಿದರು. ಅದರ ಬೆನ್ನಲ್ಲೇ ಕೆಲಹೊತ್ತು ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಸಮಾಲೋಚನೆಯನ್ನೂ ನಡೆಸಿದರು.
ಕ್ರೈಸ್ತ ಮಿಷನರಿಗಳಿಗಿಂತ ದಕ್ಷಿಣದ ಹಿಂದು ಶ್ರೀಗಳ ಸೇವೆ ಅಧಿಕ: ಮೋಹನ್ ಭಾಗವತ್
ಭಾನುವಾರದ ಸಭೆಗೆ ಪೂರಕವಾಗಿ ಶನಿವಾರವೂ ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ ಸರಣಿ ಸಭೆಗಳು ನಡೆಯಲಿವೆ. ಈ ವೇಳೆ 75 ವರ್ಷ ವಯಸ್ಸಾದವರಿಗೆ ಟಿಕೆಟ್ ನೀಡಬೇಕೆ ಅಥವಾ ಬೇಡವೆ? ಮೂರು ಅಥವಾ ಅದಕ್ಕೂ ಹೆಚ್ಚು ಬಾರಿ ಶಾಸಕರಾದವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಅವಕಾಶ ನೀಡಬೇಕೆ ಅಥವಾ ಬೇಡವೆ ಎಂಬಿತ್ಯಾದಿ ಅಂಶಗಳ ಬಗ್ಗೆ ಚರ್ಚೆ ನಡೆದು ಸ್ಪಷ್ಟನಿಲುವು ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಸದ್ಯದ ರಾಜಕೀಯ ಬೆಳವಣಿಗೆಯನ್ನು ಗಮನಿಸಿದರೆ ಗೆಲ್ಲುವ ಮಾನದಂಡವೊಂದೇ ಪ್ರಮುಖವಾಗುವ ಸಾಧ್ಯತೆ ಹೆಚ್ಚಿದೆ.
ಕಾಂಗ್ರೆಸ್ ಬಂಡಾಯ ತೀವ್ರ: 2ನೇ ಟಿಕೆಟ್ ಪಟ್ಟಿ ಪ್ರಕಟ ಬೆನ್ನಲ್ಲೇ ತಲೆನೋವು
ಅಂದರೆ, ಯಾವುದೇ ಹೊಸ ಪ್ರಯೋಗಕ್ಕೆ ಅವಕಾಶ ಕೊಡದೆ ಯಾರಿಗೆ ಗೆಲ್ಲುವ ಸಾಮರ್ಥ್ಯ ಇದೆಯೊ ಅಂಥವರಿಗೇ ಮಣೆ ಹಾಕಿ ಟಿಕೆಟ್ ನೀಡಲಾಗುತ್ತದೆ. ಸಮರ್ಥ ಅಭ್ಯರ್ಥಿಗಳು ಇಲ್ಲದ ಕ್ಷೇತ್ರಗಳಲ್ಲಿ ಮಾತ್ರ ಹೊಸ ಮುಖಗಳಿಗೆ ಅವಕಾಶ ನೀಡಬಹುದು ಎಂದು ಮೂಲಗಳು ತಿಳಿಸಿವೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.