
ಗದಗ (ಏ.30): ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ 80 ಕೋಮು ಗಲಭೆಗಳಾಗಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗಂಭೀರವಾಗಿ ಆರೋಪಿಸಿದರು. ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಡಂಬಳದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಕಳಕಪ್ಪ ಬಂಡಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಕೋಮುಗಲಭೆಯಿಂದ ಹಲವರು ಮೃತರಾಗಿದ್ದರಲ್ಲದೆ ಹಲವೆಡೆ ದ್ವೇಷದ ವಾತಾವರಣ ಬಹು ದಿನದವರೆಗೆ ಇತ್ತು ಎಂದರು. ವಿಧ್ವಂಸಕ ಕೃತ್ಯ ಎಸಗಿ ದೇಶದ ಭದ್ರತೆ ಮತ್ತು ಐಕ್ಯತೆಗೆ ಧಕ್ಕೆ ತರುವ ಪಿಎಫ್‌ಐ ಸಂಘಟನೆಗೆ ಕಾಂಗ್ರೆಸ್ ಬೆಂಬಲವಿದೆ.
ಈ ವಿಷಯ ಈ ಹಿಂದೆ ನಡೆದಿರುವ ಹಲವು ಘಟನೆಗಳಲ್ಲಿ ಸಾಬೀತಾಗಿದೆ. ಪಿಎಫ್‌ಐ ಕಾರ್ಯಕರ್ತರ ಮೇಲಿನ ಪ್ರಕರಣವನ್ನು ಸಿದ್ದರಾಮಯ್ಯ ಸರ್ಕಾರ ಹಿಂಪಡೆದು ಪಿಎಫ್‌ಐ ಸಂಘಟನೆಗೆ ಬೆಂಬಲ ನೀಡಿತ್ತು. ಇದರಿಂದಾಗಿ 2013ರಿಂದ 2018ರಲ್ಲಿ ಹಲವು ಹಿಂದುಗಳ ಹತ್ಯೆಯಾಯಿತು. ಸಮಾಜಘಾತುಕ ಸಂಘಟನೆಗೆ ಬೆಂಬಲ ನೀಡುವ ಕಾಂಗ್ರೆಸ್‌ಗೆ ಮತ ಹಾಕಬೇಡಿ ಎಂದರು. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ಚುನಾವಣೆ ಭಾಷೆ ಬದಲಾಗಿದೆ. ಜಾತಿ ಜಾತಿ ಮಧ್ಯೆ ದ್ವೇಷ ಹರಡಿ ಚುನಾವಣೆ ಮಾಡಲು ಸಾಧ್ಯವಿಲ್ಲ. ವಿಕಸನ ಮಾಡಿ ರಾಜನೀತಿ ಮಾಡುವುದನ್ನು ಕಲಿಸಿದ್ದಾರೆ ಎಂದರು.
ಕಾಂಗ್ರೆಸ್ ಕಿತ್ತೊಗೆದು ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ
ಕರ್ನಾಟಕದಲ್ಲಿ ನಮ್ಮ ಸರ್ಕಾರ ಈಗಾಗಲೇ ಹಲವು ವರ್ಷಗಳ ಬೇಡಿಕೆಯಾಗಿದ್ದ ಮೀಸಲಾತಿ ಹೆಚ್ಚಿಸಿದೆ. ಆದರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಮ್ಮ ಸರ್ಕಾರ ಬಂದರೆ ಮರಳಿ ಮೀಸಲಾತಿ ಕೊಡುತ್ತೇವೆ ಎನ್ನುತ್ತಿದ್ದು, ಯಾರ ಮೀಸಲಾತಿ ಕಿತ್ತುಕೊಂಡು ಅವರಿಗೆ ಕೊಡುತ್ತೀರಿ ಎಂದು ಸ್ಪಷ್ಟಪಡಿಸಿ ಎಂದು ಇದೇ ವೇಳೆ ನಡ್ಡಾ ಪ್ರಶ್ನಿಸಿದರು. ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಸಂವಿಧಾನದಲ್ಲಿ ಇಲ್ಲ. ಈ ವ್ಯವಸ್ಥೆಯನ್ನು ಸುಪ್ರೀಂ ಕೋರ್ಟ್ ವಿರೋಧಿಸಿದೆ. ಸಾಮಾಜಿಕ ನ್ಯಾಯದ ಆಧಾರದಲ್ಲಿ ಮೀಸಲಾತಿ ನೀಡಿದೆ. ಮೀಸಲಾತಿ ಕಸಿದುಕೊಳ್ಳುತ್ತೇವೆ ಎಂದು ಕಾಂಗ್ರೆಸ್ ಹೇಳುತ್ತಿದ್ದು, ಈ ಬಗ್ಗೆ ಎಚ್ಚರವಿರಲಿ ಎಂದರು.
ಪಿಎಫ್‌ಐಗೆ ಕಾಂಗ್ರೆಸ್ ಬೆಂಬಲ: ಕರ್ನಾಟಕದಲ್ಲಿ ನಮ್ಮ ಸರ್ಕಾರ ಈಗಾಗಲೇ ಹಲವಾರು ವರ್ಷಗಳ ಬೇಡಿಕೆಯಾಗಿದ್ದ ಮೀಸಲಾತಿಯನ್ನು ಹೆಚ್ಚಿಸಿದೆ. ಆದರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಮ್ಮ ಸರ್ಕಾರ ಬಂದರೆ ಮರಳಿ ಮೀಸಲಾತಿ ಕೊಡುತ್ತೇವೆ ಎನ್ನುತ್ತಿದ್ದು, ಯಾರ ಮೀಸಲಾತಿ ಕಿತ್ತುಕೊಂಡು ಅವರಿಗೆ ಕೊಡುತ್ತೀರಿ ಅಂತ ಸ್ಪಷ್ಟಪಡಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಕಿದ್ದಾರೆ. ಶನಿವಾರ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಂಬಳ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಕಳಕಪ್ಪ ಬಂಡಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಸಂವಿಧಾನದಲ್ಲಿ ಇಲ್ಲ.
ಈ ವ್ಯವಸ್ಥೆಯನ್ನು ಸುಪ್ರೀಂ ಕೋರ್ಚ್ ವಿರೋಧಿಸಿದೆ. ಸಾಮಾಜಿಕ ನ್ಯಾಯದ ಆಧಾರದಲ್ಲಿ ಮೀಸಲಾತಿ ನೀಡಿದೆ. ಮೀಸಲಾತಿ ಕಸಿದುಕೊಳ್ಳುತ್ತೇವೆ ಎಂದು ಕಾಂಗ್ರೆಸ್ ಹೇಳುತ್ತಿದ್ದು, ಈ ಬಗ್ಗೆ ಎಚ್ಚರವಿರಲಿ ಎಂದರು. ವಿಧ್ವಂಸಕ ಕೃತ್ಯ ಎಸಗಿ ದೇಶದ ಭದ್ರತೆ ಮತ್ತು ಐಕ್ಯತೆಗೆ ಧಕ್ಕೆ ತರುವ ಪಿಎಫ್‌ಐ ಸಂಘಟನೆಗೆ ಕಾಂಗ್ರೆಸ್ ಪಕ್ಷದ ಬೆಂಬಲವಿದೆ. ಈ ವಿಷಯದಲ್ಲಿ ಈ ಹಿಂದೆ ನಡೆದಿರುವ ಹಲವಾರು ಘಟನೆಗಳಲ್ಲಿ ಸಾಬೀತಾಗಿದೆ. ಪಿಎಫ್‌ಐ ಕಾರ್ಯಕರ್ತರ ಮೇಲಿನ ಪ್ರಕರಣವನ್ನು ಸಿದ್ದರಾಮಯ್ಯ ಸರ್ಕಾರ ಹಿಂಪಡೆದು ಪಿಎಫ್‌ಐ ಸಂಘಟನೆಗೆ ಬೆಂಬಲ ನೀಡಿತ್ತು. ಇದರಿಂದಾಗಿ 2013ರಿಂದ 2018ರಲ್ಲಿ ಹಲವಾರು ಹಿಂದುಗಳ ಹತ್ಯೆಯಾಯಿತು.
ಉಡುಪಿಯಲ್ಲಿ ಅಮಿತ್ ಶಾ ಬಿರುಸಿನ ಪ್ರಚಾರ: ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳಿಗೆ ತಿರುಗೇಟು
ಸಮಾಜ ಘಾತುಕ ಸಂಘಟನೆಗೆ ಬೆಂಬಲ ನೀಡುವ ಕಾಂಗ್ರೆಸ್‌ಗೆ ಮತ ಹಾಕಬೇಡಿ ಎಂದರು. ಮೋದಿ ಅವರ ನೇತೃತ್ವದಲ್ಲಿ ತೆಗೆದುಕೊಂಡ ದಿಟ್ಟಕ್ರಮಗಳಿಂದಾಗಿ ಆರ್ಥಿಕತೆಯಲ್ಲಿ ಈ ಹಿಂದೆ 10 ಸ್ಥಾನದಲ್ಲಿದ್ದ ಭಾರತ ಈಗ 5ನೇ ಸ್ಥಾನಕ್ಕೇರಿದೆ. ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ, ಕರ್ನಾಟಕ ಮತ್ತಷ್ಟುಅಭಿವೃದ್ಧಿ ಹೊಂದಬೇಕಾದಲ್ಲಿ ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ಸ್ಪಷ್ಟಬಹುಮತದೊಂದಿಗೆ ಬರಬೇಕು, ಇದರಲ್ಲಿ ಕಾರ್ಯಕರ್ತರ ಪಾತ್ರ ಪ್ರಮುಖವಾಗಿದೆ ಎಂದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.