ಸಿದ್ಧಗಂಗಾ ಶ್ರೀಗಳು ಕೊಟ್ಟ ವಾಚ್‌ ಧರಿಸಿ ಸಿಎಂ ಬೊಮ್ಮಾಯಿ ಪ್ರಚಾರ

By Kannadaprabha News  |  First Published May 5, 2023, 11:26 AM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ತುಮಕೂರಿನ ಸಿದ್ಧಗಂಗಾ ಮಠದ ಲಿಂ.ಶಿವಕುಮಾರ ಶ್ರೀಗಳು ನೀಡಿದ್ದ ವಾಚ್‌ ಅನ್ನು ಕೈಗೆ ಕಟ್ಟಿಕೊಂಡು ಸ್ವಕ್ಷೇತ್ರ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿದರು.


ಶಿಗ್ಗಾಂವಿ (ಮೇ.05): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ತುಮಕೂರಿನ ಸಿದ್ಧಗಂಗಾ ಮಠದ ಲಿಂ.ಶಿವಕುಮಾರ ಶ್ರೀಗಳು ನೀಡಿದ್ದ ವಾಚ್‌ ಅನ್ನು ಕೈಗೆ ಕಟ್ಟಿಕೊಂಡು ಸ್ವಕ್ಷೇತ್ರ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿದರು. ಮುಖ್ಯಮಂತ್ರಿ ಆದ ಬಳಿಕವೂ ಬೊಮ್ಮಾಯಿ ಅವರು ತಮ್ಮ ಕೈಗೆ ಸ್ವಾಮೀಜಿಗಳು ಕೊಟ್ಟವಾಚನ್ನೇ ಕಟ್ಟಿಕೊಳ್ಳುತ್ತಿದ್ದಾರೆ. ಆ ವಾಚ್‌ನೊಂದಿಗೆ ಅವರು ಭಾವನಾತ್ಮಕ ನಂಟು ಹೊಂದಿದ್ದಾರೆ ಎಂದು ಆಪ್ತರು ಹೇಳುತ್ತಾರೆ. ಚುನಾವಣೆಗೆ ಇನ್ನು ಕೆಲವೇ ದಿನಗಳಿದ್ದು, ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ಅವರು ಸ್ವಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಸಾಧ್ಯವಾದಷ್ಟುಹಳ್ಳಿಗಳನ್ನು ತಲುಪಲು ಅವರು ಪ್ರಯತ್ನ ನಡೆಸುತ್ತಿದ್ದಾರೆ. ಪ್ರಚಾರಕ್ಕೆ ಹೋದಲ್ಲೆಲ್ಲ ಸಿಗುತ್ತಿರುವ ಆತ್ಮೀಯ ಸ್ವಾಗತದಿಂದಾಗಿ ಅವರು ಖುಷಿಯಾಗಿದ್ದು, ಮತ್ತೊಂದು ಬಾರಿ ಶಾಸಕನಾಗಿ ಆಯ್ಕೆ ಮಾಡುವಂತೆ ಮನವಿ ಮಾಡುತ್ತಿದ್ದಾರೆ.

ಕಾಂಗ್ರೆಸ್‌ ಬ್ರಿಟಿಷ ವಂಶಸ್ಥರ ಪಕ್ಷ: ಕಾಂಗ್ರೆಸ್‌ ಪಕ್ಷವು ಬ್ರಿಟಿಷರ ವಂಶಸ್ಥರ ಪಕ್ಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿದರು. ರಾತ್ರಿ ಇಲ್ಲಿನ ಪೂರ್ವ ಕ್ಷೇತ್ರದ ಅಭ್ಯರ್ಥಿ ಡಾ. ಕ್ರಾಂತಿಕಿರಣ ಪರವಾಗಿ ಮಂಗಳವಾರ ಪೇಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದರು ಸ್ವಾಂತಂತ್ರ ಪೂರ್ವದಲ್ಲಿ ಬ್ರಿಟಿಷರು ನಮ್ಮನ್ನು ಆಳಿದರೆ ಸ್ವಾತಂತ್ಯನಂತರ ಕಾಂಗ್ರೆಸ್‌ ನಮ್ಮನ್ನ ಆಳುತ್ತಿದೆ. ಜಾತಿ​-ಜಾತಿಗಳ ನಡುವೆ ವೈಷಮ್ಯ ಬೆಳೆಸುವ ಮೂಲಕ ಜನರಲ್ಲಿ ದ್ವೇಷವನ್ನುಂಟು ಮಾಡುತ್ತಾ ಒಡೆದಾಳುವ ನೀತಿ ಅನುಸರಿಸುತ್ತಿದೆ. ದೀನ, ದಲಿತರ, ಮುಸ್ಲಿಂರ ಏಳ್ಗೆ ಬಯಸದ ಇವರು ಕೇವಲ ವೋಟ್‌ಬ್ಯಾಂಕ್‌ ಆಗಿ ಬಳಸುತ್ತಿದ್ದಾರೆ.

Tap to resize

Latest Videos

ನಾವು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಿಲ್ಲ: ಡಿ.ಕೆ.ಶಿವಕುಮಾರ್‌

ಪೂರ್ವ ಕ್ಷೇತ್ರ ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದಿದೆ. ಅಕ್ಕಪಕ್ಕದ ಕ್ಷೇತ್ರಗಳನ್ನು ಹೋಲಿಸದರೆ ಇಲ್ಲಿ 10 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ, ಕೇಂದ್ರ- ರಾಜ್ಯ ಸರ್ಕಾರದ ಯೋಜನೆಗಳು ಇಲ್ಲಿ ತಲುಪದೇ ಅಭಿವೃದ್ಧಿ ವಂಚಿತವಾಗಿದೆ. ಈಗ ಎಲ್ಲಡೆ ಬದಲಾವಣೆಯ ಗಾಳಿ ಬೀಸುತ್ತಿದ್ದು, ಈಗ ಈ ಪೂರ್ವಕ್ಷೇತ್ರದಲ್ಲೂ ಬದಲಾವಣೆಯ ಪರ್ವ ಆರಂಭವಾಗುವ ಲಕ್ಷಣ ಕಾಣುತ್ತಿದೆ. ನೀವು ಕಾಂಗ್ರೆಸ್ಸಿಗೆ ಮತ ಹಾಕಿದ್ದೇ ಆದಲ್ಲಿ ಮತ್ತೇ 5 ವರ್ಷಗಳ ಕಾಲ ಅಭಿವೃದ್ಧಿಯಲ್ಲಿ ಹಿನ್ನೆಡೆ ಅನುಭವಿಸಲಿದ್ದೀರಿ. ಕ್ಷೇತ್ರದಲ್ಲಿ ಅಭಿವೃದ್ಧಿಗೆ ಹಿಡಿದ ರೋಗ ನಿವಾರಣೆ ಮಾಡಬೇಕಾದರೆ ಡಾ. ಕ್ರಾಂತಿಕಿರಣ ಅವರನ್ನು ಬೆಂಬಲಿಸಿದಾಗ ಮಾತ್ರ ಸಾಧ್ಯ. ಹಾಗಾಗಿ ಈ ಬಾರಿ ಬಿಜೆಪಿಗೆ ಬೆಂಬಲಿಸುವ ಮೂಲಕ ಕ್ಷೇತ್ರದಲ್ಲಿ ಕಮಲದ ಬಾವುಟ ಹಾರುವಂತೆ ಮಾಡಿ ಎಂದು ಮನವಿ ಮಾಡಿದರು.

ಹಿರೇಕೆರೂರಲ್ಲಿ ಬಿ.ಸಿ.ಪಾಟೀಲ, ಬಣಕಾರ ನಡುವೆ ಜಿದ್ದಾಜಿದ್ದಿ: ಅಭ್ಯರ್ಥಿಗಳು ಅವರೇ, ಪಕ್ಷ ಮಾತ್ರ ಬೇರೆ!

ಪೂರ್ವ ಕ್ಷೇತ್ರದ ಅಭ್ಯರ್ಥಿ ಡಾ. ಕ್ರಾಂತಿಕಿರಣ ಮಾತನಾಡಿ, ಕೇಂದ್ರ ಹಾಗೂ ರಾಜ್ಯದಲ್ಲಿ ಡಬಲ್‌ ಎಂಜಿನ್‌ ಸರ್ಕಾರ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಜನರ ನೆಚ್ಚಿನ ಪಕ್ಷವಾಗಿ ಹೊರಹೊಮ್ಮಿದೆ. ಪೂರ್ವ ಕ್ಷೇತ್ರವು ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ತೀರಾ ಹಿಂದುಳಿದಿದ್ದು, ಈ ಬಾರಿ ನನಗೆ ಆಶೀರ್ವದಿಸಿದರೆ ಈ ಭಾಗದಲ್ಲಿ ಆರೋಗ್ಯ, ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ಮಾದರಿ ಕ್ಷೇತ್ರವಾಗಿಸಲು ಶ್ರಮಿಸುವುದಾಗಿ ತಿಳಿಸಿದರು. ಬಹಿರಂಗ ಸಭೆಗೂ ಪೂರ್ವದಲ್ಲಿ ಪೂರ್ವಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅದ್ಧೂರಿ ರೋಡ್‌ ಶೋ ನಡೆಸಿದರು. ಈ ವೇಳೆ ಸೆಂಟ್ರಲ್‌ ಕ್ಷೇತ್ರದ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಸೇರಿದಂತೆ ಪಕ್ಷದ ನೂರಾರು ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.

click me!