Karnataka election 2023: ಹರಿಹರದಲ್ಲಿ ನಾಳೆ ಸಿಎಂ ಬೊಮ್ಮಾಯಿ ರೋಡ್‌ ಶೋ

By Kannadaprabha News  |  First Published Apr 23, 2023, 12:25 PM IST

ನಗರದಲ್ಲಿ ಏ.24ರ ಸೋಮವಾರ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಬೃಹತ್‌ರೋಡ್‌ ಶೋ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಸ್‌.ಎಂ. ವೀರೇಶ್‌ ಹನಗವಾಡಿ ತಿಳಿಸಿದರು.


ಹರಿಹರ (ಏ.23) : ನಗರದಲ್ಲಿ ಏ.24ರ ಸೋಮವಾರ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ(CM Basavaraj Bommai) ಬೃಹತ್‌ರೋಡ್‌ ಶೋ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಸ್‌.ಎಂ. ವೀರೇಶ್‌ ಹನಗವಾಡಿ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ನಗರದ ಪಕ್ಕಿರಸ್ವಾಮಿ ಮಠದ ಸಮೀಪ ಬೆಳಗ್ಗೆ 10ಗಂಟೆಗೆ ಬೊಮ್ಮಾಯಿ ಚಾಲನೆ ನೀಡಲಿದ್ದು, ವಿಧಾನ ಪರಿಷತ್‌ ಸದಸ್ಯ ಚಲುವಾದಿ ನಾರಾಯಣಸ್ವಾಮಿ, ಸಂಸದ ಜಿ.ಎಂ.ಸಿದ್ದೇಶ್ವರ, ಹರಿಹರ ಬಿಜೆಪಿ ಅಭ್ಯರ್ಥಿ ಬಿ.ಪಿ.ಹರೀಶ್‌ ಹಾಗೂ ಇತರರು ಭಾಗವಹಿಸಲಿದ್ದಾರೆ. ರೋಡ್‌ಶೋ ಶಿವಮೊಗ್ಗ ರಸ್ತೆ, ರಾಣಿಚೆನ್ನಮ್ಮ ವೃತ್ತದ ಮೂಲಕ ಸಾಗಿ ಗಾಂಧಿ ವೃತ್ತದಲ್ಲಿ ಅಂತ್ಯಗೊಳ್ಳಲಿದ್ದು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ತಾಲೂಕಿನ ಎಲ್ಲಾ ಸ್ತರದ ಚುನಾಯಿತ ಜನಪ್ರತಿ ನಿಧಿಗಳು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದಾರೆ.

Tap to resize

Latest Videos

ಹರಿಹರ ಸೇರಿ ಜಿಲ್ಲೆಯ ಏಳು ಕ್ಷೇತ್ರಗಳಲ್ಲೂ ಬಿಜೆಪಿ ಪರ ಅಲೆಯಿದ್ದು ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ, ಬೊಮ್ಮಾಯಿ ಸರ್ಕಾರ ತೆಗೆದುಕೊಂಡಿರುವ ಮೀಸಲಾತಿ ಹೆಚ್ಚಳ, ವರ್ಗಿಕರಣ ನಿರ್ಣಯದ ಪರವಾಗಿ ಜನ ಮತ ಚಲಾವಣೆ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರ ಘಟಕದ ಅಧ್ಯಕ್ಷ ಅಜೀತ್‌ ಸಾವಂತ್‌, ಪ್ರಧಾನ ಕಾರ್ಯದರ್ಶಿಗಳಾದ ಎಚ್‌. ಮಂಜಾನಾಯ್‌್ಕ, ತುಳಜಪ್ಪ ಭೂತೆ, ಕಾರ್ಯದರ್ಶಿ ಪ್ರವೀಣ್‌ ಜಿ.ಪವಾರ್‌, ಮುಖಂಡರಾದ ಅಣ್ಣೇಶ್‌ ಐರಣಿ, ಜಿಗಳಿ ಹನುಮಗೌಡ ಹಾಗೂ ಇತರರಿದ್ದರು.

ಲಿಂಗಾಯತ ಸಿಎಂ ಭ್ರಷ್ಟಾಚಾರ ಮಾಡಿ ರಾಜ್ಯ ಹಾಳು ಮಾಡಿದ್ದಾರೆ: ಸಿದ್ದು ಕಿಡಿ

click me!