ರಾಜ್ಯ ಕಂಡ ಭ್ರಷ್ಟ ಸರ್ಕಾರ ನನ್ನದಲ್ಲ, ಸಿದ್ದರಾಮಯ್ಯದು: ಸಿಎಂ ಬೊಮ್ಮಾಯಿ

Published : Apr 23, 2023, 01:58 PM IST
ರಾಜ್ಯ ಕಂಡ ಭ್ರಷ್ಟ ಸರ್ಕಾರ ನನ್ನದಲ್ಲ, ಸಿದ್ದರಾಮಯ್ಯದು: ಸಿಎಂ ಬೊಮ್ಮಾಯಿ

ಸಾರಾಂಶ

‘ಸಿದ್ದರಾಮಯ್ಯ ಅವರ ಸರ್ಕಾರವೇ ಕರ್ನಾಟಕ ಕಂಡಂತಹ ಭ್ರಷ್ಟಸರ್ಕಾರ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. 2013-18ರವರೆಗೆ ಭ್ರಷ್ಟಸರ್ಕಾರ ನಡೆಸಿದವರು ನೀವು ಎಂದು ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಏ.23): ‘ಸಿದ್ದರಾಮಯ್ಯ ಅವರ ಸರ್ಕಾರವೇ ಕರ್ನಾಟಕ ಕಂಡಂತಹ ಭ್ರಷ್ಟಸರ್ಕಾರ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶನಿವಾರ ಮೈಸೂರಿನಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಎಂದು ನೀಡಿದ ಹೇಳಿಕೆಗೆ ಟ್ವೀಟರ್‌ ಮೂಲಕ ಈ ರೀತಿ ಕಿಡಿಕಾರಿರುವ ಬೊಮ್ಮಾಯಿ ಅವರು, ಲೋಕಾಯುಕ್ತವನ್ನು ಸಂಪೂರ್ಣ ನಿಷ್ಕ್ರಿಯ ಮಾಡಿದ ಖ್ಯಾತಿ ಸಿದ್ದರಾಮಯ್ಯ ಅವರದ್ದು ಎಂದು ಟೀಕಿಸಿದ್ದಾರೆ. ‘ಸಿದ್ದರಾಮಯ್ಯ ಅವರೇ, ಕರ್ನಾಟಕ ಕಂಡಂತ ಭ್ರಷ್ಟಸರ್ಕಾರ ನಿಮ್ಮದು. 

2013-18ರವರೆಗೆ ಭ್ರಷ್ಟ ಸರ್ಕಾರ ನಡೆಸಿದವರು ನೀವು. ಬಿಡಿಎನಲ್ಲಿ ರೀಡೂ ಭ್ರಷ್ಟಾಚಾರ, ಸಣ್ಣ ಮತ್ತು ಬೃಹತ್‌ ನೀರಾವರಿ, ಎಸ್‌ಸಿ, ಎಸ್‌ಟಿ ಮಕ್ಕಳಿಗೆ ನೀಡುವ ಹಾಸಿಗೆ ದಿಂಬಿನಲ್ಲಿಯೂ ಬಿಡಲಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ. ಲೋಕಾಯುಕ್ತವನ್ನು ಸಂಪೂರ್ಣ ನಿಷ್ಕ್ರಿಯ ಮಾಡಿದ ಖ್ಯಾತಿ ನಿಮ್ಮದು. ಎಸಿಬಿ ಮಾಡಿ ಎಲ್ಲಾ ಹಗರಣ ಮುಚ್ಚಿ ಹಾಕುವ ಕೆಲಸ ಮಾಡಿದಿರಿ. ಭ್ರಷ್ಟಅಧಿಕಾರಿ ಮತ್ತು ರಾಜಕಾರಣಿಗಳನ್ನು ರಕ್ಷಣೆ ಮಾಡಿದ್ದೀರಿ. ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್‌ಗೆ ನೈತಿಕ ಅಧಿಕಾರ ಇಲ್ಲ. ನಿಮ್ಮಿಂದ ಸರ್ಟಿಫಿಕೇಟ್‌ ಪಡೆಯುವ ಅವಶ್ಯಕತೆ ಇಲ್ಲ ಎಂದು ಹರಿಹಾಯ್ದಿದ್ದಾರೆ.

ಆಪರೇಷನ್‌ ಥಿಯೇಟರ್‌ನಿಂದ ಚುನಾವಣಾ ಕಣಕ್ಕೆ ನ್ಯೂರೋಸರ್ಜನ್‌ ಡಾ.ಕ್ರಾಂತಿಕಿರಣ!

ಕಾಂಗ್ರೆಸ್‌ ಗುಂಡೀಲಿ ನೀರೇ ಇಲ್ಲ, ಮೊದಲು ಅದನ್ನು ನೋಡಿಕೊಳ್ಳಲಿ: ಲಿಂಗಾಯತ ಅಣೆಕಟ್ಟು ಒಡೆದು ಹರಿದು ಕಾಂಗ್ರೆಸ್‌ ಎಂಬ ಸಮುದ್ರ ಸೇರಲಿದೆ ಎಂಬ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ತೀಕ್ಷ$್ಣ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್‌ ಗುಂಡಿಯಲ್ಲಿ ನೀರೇ ಇಲ್ಲ. ಮೊದಲು ಅದನ್ನು ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. ಆರ್‌.ಟಿ.ನಗರದ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2013ರಲ್ಲಿ ಲಿಂಗಾಯತ ಸಮುದಾಯ ವಿಭಜನೆಯಾಗಿಲ್ಲ. ಅದು ರಾಜಕೀಯ ಪಕ್ಷವಾಯಿತು ಅಷ್ಟೇ. ಲಿಂಗಾಯತ ಮತದಾರರು ಯಾವಾಗಲೂ ಪ್ರಬುದ್ಧರಾಗಿದ್ದಾರೆ. ಲಿಂಗಾಯತರನ್ನು ಗಟ್ಟಿಮಾಡುವ ಕೆಲಸವನ್ನು ಶಿವಕುಮಾರ್‌ ಅವರು ಮಾಡುತ್ತಿದ್ದಾರೆ ಎಂದು ಹೇಳಿದರು.

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ ಗೆದ್ದರೆ ರಾಜ್ಯದಲ್ಲಿ ಸರ್ಕಾರ: ಡಿ.ಕೆ.ಶಿವಕುಮಾರ್‌

ಸವದತ್ತಿ ಕ್ಷೇತ್ರ ಸೇರಿದಂತೆ ಐದು ಕ್ಷೇತ್ರದಲ್ಲಿ ಬಿಜೆಪಿ ನಾಮಪತ್ರ ಸರಿ ಇಲ್ಲ ಎನ್ನುವ ಆರೋಪ ಮಾಡಿದ್ದಾರೆ. ಚುನಾವಣಾ ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಯಲಿದೆ. ಯಾವುದೇ ಪಕ್ಷ ಏನು ಮಾಡುವುದಕ್ಕೂ ಆಗಲ್ಲ. ಎಲ್ಲ ಪ್ರಕ್ರಿಯೆಗಳು ಆಗಿದ್ದು, ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ಯಾವುದೇ ಪಕ್ಷವೂ ಏನೂ ಮಾಡಲು ಆಗುವುದಿಲ್ಲ ಎಂದು ಹೇಳಿದರು. ಇನ್ನು ಕರ್ನಾಟಕದಲ್ಲಿ ಚುನಾವಣೆ ಹಿನ್ನೆಲೆ ಈಗಾಗಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದು, ಪರಿಶೀಲನೆ ಕೂಡ ಮುಗಿದಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ. ಮೇ 10ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

₹500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ : ಸಿಧು ಪತ್ನಿ ಆರೋಪ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ