ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ: ಎಚ್‌.ವೈ.ಮೇಟಿ

Published : Apr 17, 2023, 12:30 AM IST
ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ: ಎಚ್‌.ವೈ.ಮೇಟಿ

ಸಾರಾಂಶ

ಬಿಜೆಪಿ ಸರ್ಕಾರದ ದುರಾಡಳಿತದಿಂದ ಮತದಾರರು ಬೇಸತ್ತು ಹೋಗಿದ್ದಾರೆ. ಸಾಮಾನ್ಯ ಜನರ ಬದುಕು ದುರಸ್ಥರವಾಗಿದೆ. ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಇನ್ನೂ ಹಾಗೇ ಉಳಿದುಕೊಂಡಿವೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ವೈ.ಮೇಟಿ ಆರೋಪಿಸಿದರು. 

ಬಾಗಲಕೋಟೆ (ಏ.17): ಬಿಜೆಪಿ ಸರ್ಕಾರದ ದುರಾಡಳಿತದಿಂದ ಮತದಾರರು ಬೇಸತ್ತು ಹೋಗಿದ್ದಾರೆ. ಸಾಮಾನ್ಯ ಜನರ ಬದುಕು ದುರಸ್ಥರವಾಗಿದೆ. ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಇನ್ನೂ ಹಾಗೇ ಉಳಿದುಕೊಂಡಿವೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ವೈ.ಮೇಟಿ ಆರೋಪಿಸಿದರು. ವಿದ್ಯಾಗಿರಿಯಲ್ಲಿ ಚುನಾವಣೆ ಪ್ರಚಾರ ಕಚೇರಿ ಉದ್ಘಾಟಿಸಿ ಮಾತನಾಡಿ, ಅಭಿವೃದ್ಧಿ ಮಾಡಿದ್ದೇನೆಂದು ಹೇಳಿಕೊಳ್ಳುವ ಬಾಗಲಕೋಟೆ ಶಾಸಕರು, ಕಾಂಗ್ರೆಸ್‌ ಸರ್ಕಾರದ ಅಧಿಕಾರದಲ್ಲಿ ನಾನು ಮಂಜೂರು ಮಾಡಿಸಿದ ಹಣದಲ್ಲೇ ರಸ್ತೆಗಳಿಗೆ ಡಾಂಬರ್‌ ಹಾಕಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಬಾಗಲಕೋಟೆ ಶಾಸಕನಾಗಿದ್ದ ನಾನು ನವನಗರದ ಯೂನಿಟ್‌-1ರ ಸಮಗ್ರ ಅಭಿವೃದ್ಧಿಗಾಗಿ . 138 ಕೋಟಿ ಅನುದಾನ ತಂದಿದ್ದೆ. ಆ ಅನುದಾನದಲ್ಲಿ ಸಮಗ್ರ ಅಭಿವೃದ್ಧಿಗೆ ಮುಂದಾಗಿದ್ದೆವು. ಆದರೆ, ಆಗ ಇದೇ ಬಿಜೆಪಿ ಶಾಸಕರು, ವಿರೋಧ ವ್ಯಕ್ತಪಡಿಸಿದರು. ಅಭಿವೃದ್ಧಿಗೆ ಅಡ್ಡಗಾಲು ಹಾಕಿ ಇದೀಗ ತಮ್ಮಿಂದ ಅಭಿವೃದ್ಧಿ ಎನ್ನುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದರು. ಜಿಲ್ಲೆಯಲ್ಲಿ ಆಗಬೇಕಾದ ಮೂಲ ಅಭಿವೃದ್ಧಿ ಈವರೆಗೂ ಬಿಜೆಪಿಯಿಂದ ಸಾಧ್ಯವಾಗಿಲ್ಲ. ಬಾಗಲಕೋಟೆ ಸಂತ್ರಸ್ತರು ಇನ್ನು ಸಂತ್ರಸ್ತರಾಗೇ ನರಳಾಡುತ್ತಿದ್ದಾರೆ. ಸಂತ್ರಸ್ತರ ನೋವು-ನಲಿವು ಕೇಳಲು ಸಾಧ್ಯವಾಗುತ್ತಿಲ್ಲ.

ಗೆಲ್ಲಿಸಿದರೇ ತಲೆ ಎತ್ತಿ ನಡೆಯುವ ಹಾಗೆ ನೋಡಿಕೊಳ್ಳುತ್ತೇನೆ: ರಮೇಶ ಕತ್ತಿ

ಜಿಲ್ಲೆಗೆ ಮೊದಲು ಬೇಕಾಗಿರುವುದು ಸರ್ಕಾರಿ ಮೆಡಿಕಲ್‌ ಕಾಲೇಜ್‌. ಇದಕ್ಕಾಗಿ ಹೋರಾಟ ನಡೆಯುತ್ತಲೇ ಇದೆ. ಆದರೆ, ಅದಕ್ಕೆ ಸ್ಪಂದಿಸುವ ಕೆಲಸವಾಗಿಲ್ಲ. ಕ್ಷೇತ್ರದ ಮತದಾರರು ಗೆಲ್ಲಿಸಿದ್ದೇ ಆದಲ್ಲಿ ಬಾಗಲಕೋಟೆ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ ಎಂದರು. ಈಗಾಗಲೇ ಕ್ಷೇತ್ರದ ಹಳ್ಳಿ ಹಳ್ಳಿಗೂ ಸಂಚರಿಸಿ ಮತಯಾಚನೆ ಮಾಡುತ್ತಿದ್ದು, ಪ್ರತಿ ಹಳ್ಳಿಯಲ್ಲೂ ಬಿಜೆಪಿ ದುರಾಡಳಿತದ ವಿರುದ್ಧ ಧ್ವನಿ ಕೇಳಿ ಬರುತ್ತಿದೆ. ಬಿಜೆಪಿ ನಮ್ಮ ಜೀವನವೇ ಹಾಳು ಮಾಡಿದೆ. ರೈತರ ಬದುಕಿನ ಜೊತೆ ಚಲ್ಲಾಟವಾಡುತ್ತಿದೆ. ದೊಡ್ಡ ದೊಡ್ಡ ವ್ಯಾಪಾರಸ್ತರ ಕೈಗೊಂಬೆಯಾಗಿ ಸರ್ಕಾರ ನಡೆಸುತ್ತಿದ್ದು, ಇದರಿಂದ ಬಡವರ ಬದುಕು ಬೀದಿಗೆ ಬಂದಂತಾಗಿದೆ ಎಂದು ಹೇಳಿದರು.

ಬಿಜೆಪಿಯ ಕೆಟ್ಟಆಡಳಿತದಿಂದಾಗಿ ಇಂದು ಜನರು ಬದುಕು ಕಟ್ಟಿಕೊಳ್ಳಲು ವಲಸೆ ಹೋಗುವಂತಾಗಿದೆ. ಹಾಗಾಗಿ ಬಡವರ ಬದುಕು ಹಸನಾಗಿಸಲು ಮತ್ತೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಬೇಕು. ಇದಕ್ಕಾಗಿ ಪ್ರತಿಯೊಬ್ಬರೂ ಕಾಂಗ್ರೆಸ್‌ಗೆ ಮತ ನೀಡಿ ಬೆಂಬಲಿಸಬೇಕು ಎಂದು ಹೇಳಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಜನತೆ ರೋಸಿ ಹೋಗಿದೆ: ಎಚ್.ಡಿ.ಕುಮಾರಸ್ವಾಮಿ

ಅಮೀನಗಡದಲ್ಲಿ ಕಾಂಗ್ರೆಸ್‌ ಸೇರ್ಪಡೆ: ಅಮೀನಗಡದಲ್ಲಿ ಎಚ್‌.ವೈ.ಮೇಟಿ ಹಾಗೂ ಎಸ್‌.ಜಿ.ನಂಜಯ್ಯನಮಠ ನೇತೃತ್ವದಲ್ಲಿ ಹಾಲುಮತ, ಮಡಿವಾಳ ಹಾಗೂ ಬಂಜಾರ ಸಮಾಜ ಸೇರಿದಂತೆ ವಿವಿಧ ಸಮಾಜದ ಹಿರಿಯರು ಯುವಕರ ಹಾಗೂ ಲಾರಿ ಮಾಲೀಕರ, ಲಾರಿ ಚಾಲಕರ ಸಂಘದ, ಸೇವಾದಳದ ಮಹಿಳಾ ಸಂಘದ, ವಿವಿಧ ಸಮಾಜದ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ನಮ್ಮ ಪಕ್ಷದ ಮುಖಂಡರು, ಹಿರಿಯರು, ಯುವಕರ, ಮಹಿಳಾ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ