ಶಾಸಕ ಸಿ.ಟಿ.ರವಿಗೆ ನಾಲಿಗೆ ಮೇಲೆ ಹಿಡಿತ ಇಲ್ಲ, ಸಂಸ್ಕೃತಿಯೂ ಇಲ್ಲ, ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಚಿಕ್ಕಮಗಳೂರು (ಮೇ.07): ಶಾಸಕ ಸಿ.ಟಿ.ರವಿಗೆ ನಾಲಿಗೆ ಮೇಲೆ ಹಿಡಿತ ಇಲ್ಲ, ಸಂಸ್ಕೃತಿಯೂ ಇಲ್ಲ, ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ.ತಮ್ಮಯ್ಯ ಪರವಾಗಿ ಶನಿವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಸಿ.ಟಿ.ರವಿ ನನ್ನನ್ನು ಸಿದ್ರಾಮುಲ್ಲಾಖಾನ್ ಎಂದು ಕರೆಯುತ್ತಾರೆ. ಹಾಗಿದ್ದರೆ, ನಾನು ಹಿಂದು ಅಲ್ವಾ ?
ಮಹಾತ್ಮಗಾಂಧಿ, ಅಂಬೇಡ್ಕರ್, ಸ್ವಾಮಿ ವಿವೇಕಾನಂದರು ಪ್ರತಿಪಾದಿಸಿದ ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ. ಈ ಕ್ಷೇತ್ರದಲ್ಲಿ ಸಿ.ಟಿ.ರವಿಯವರು ಕಳೆದ 20 ವರ್ಷಗಳಿಂದ ಸೋಲಿಸುವವರೇ ಇಲ್ಲ ಎಂದು ಮೆರೆಯುತ್ತಾ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರ ರಾಜಕೀಯ ಜೀವನ ಈ ಚುನಾವಣೆಯಲ್ಲಿ ಅಂತ್ಯ ಆಗಲಿದೆ ಎಂದು ಭವಿಷ್ಯ ನುಡಿದರು. ಬಿಜೆಪಿಯನ್ನು ಸೋಲಿಸಬೇಕೆಂಬ ಇಚ್ಛೆ ಇದ್ದರೆ ಮುಸಲ್ಮಾನರು ಜೆಡಿಎಸ್‌ಗೆ ಮತ ಹಾಕಬಾರದು. ಕಾಂಗ್ರೆಸ್‌ಗೆ ಮತ ನೀಡಬೇಕು. ಜೆಡಿಎಸ್‌ಗೆ ಮತ ಹಾಕಿದರೆ ಅದು ಬಿಜೆಪಿಗೆ ಹೋಗುತ್ತದೆ.
undefined
ಕಾಂಗ್ರೆಸ್ ಗ್ಯಾರಂಟಿ ಬರೀ ಸುಳ್ಳು, ಇಂಥ ಪಕ್ಷ ನಂಬಬೇಡಿ: ಮೋದಿ ವಾಗ್ದಾಳಿ
ಜಿಲ್ಲೆಯಲ್ಲಿಂದು ಸಿದ್ದು ಚುನಾವಣಾ ಪ್ರಚಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸೈಯದ್ ಹನೀಫ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರ ಮೈಸೂರಿನಿಂದ ಬೆಳಿಗ್ಗೆ 9.30ಕ್ಕೆ ಹೆಲಿಕ್ಯಾಪ್ಟರ್‌ನಲ್ಲಿ ಹೊರಟು 10.30ಕ್ಕೆ ಎನ್.ಆರ್.ಪುರಕ್ಕೆ ಆಗಮಿಸಿ ಇಲ್ಲಿ ನಡೆಯಲಿರುವ ಸಾರ್ವಜನಿಕರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಮಧ್ಯಾಹ್ನ 1 ಗಂಟೆಗೆ ಚಿಕ್ಕಮಗಳೂರು ಕ್ಷೇತ್ರದ ಸಖರಾಯಪಟ್ಟಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು, ಮಧ್ಯಾಹ್ನ 3 ಗಂಟೆಗೆ ತರೀಕೆರೆಯ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.30ಕ್ಕೆ ಕಡೂರಿನಲ್ಲಿ ಸಾರ್ವಜನಿಕ ಸಭೆ ನಡೆಸಿ ಅಲ್ಲಿಂದ ರಸ್ತೆ ಮಾರ್ಗವಾಗಿ ಮೈಸೂರಿಗೆ ತೆರಳಲಿದ್ದಾರೆ ಎಂದು ತಿಳಿಸಿದರು. ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ನೀಡಿದ್ದು, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಹಾಗೇ ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆಂಬ ವಿಶ್ವಾಸ ವ್ಯಕ್ತಪಡಿಸಿದರು.
ಹಿಂದೂ ಅಸ್ಮಿತೆಗೆ ಕಾಂಗ್ರೆಸ್ ಏಟು: ಸಿಎಂ ಯೋಗಿ ಆದಿತ್ಯನಾಥ್ ಕಿಡಿ
ನಗರಾಭಿವೃದ್ಧಿ ಪ್ರಾಧಿಕಾರದಿಂದ ನಗರದಲ್ಲಿ ವಾಜಪೇಯಿ ಬಡಾವಣೆ ನಿರ್ಮಿಸಲಾಗಿದೆ. ಬಡಾವಣೆಯಲ್ಲಿ ವಿದ್ಯುತ್ ಸೌಲಭ್ಯವನ್ನು ಇದುವರೆಗೂ ಕಲ್ಪಿಸಲು ಸಾಧ್ಯವಾಗದ ಕಾರಣ ಅಲ್ಲಿ ಮನೆಗಳನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಒಳಚರಂಡಿ ಕಾಮಗಾರಿ ಪೂರ್ಣಗೊಂಡಿಲ್ಲ. ಇದು ಶಾಸಕ ಸಿ.ಟಿ.ರವಿ ನಡೆಸಿದ ಅಭಿವೃದ್ದಿ ಕಾರ್ಯವೇ ಎಂದು ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಗಂಗಾಧರ್, ಸಿ.ಕೆ. ಸತೀಶ್ ಇದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.