ಪ್ರತಿ ಚುನಾವಣೆಯೂ ಮಹತ್ವ ಪೂರ್ಣವಾಗಿರುತ್ತದೆ. ಚುನಾವಣೆಗಳಲ್ಲಿ ಕಾರ್ಯಕರ್ತರ ಪರಿಶ್ರಮದಿಂದ ಗೆಲ್ಲಲು ಮಾತ್ರ ಸಾಧ್ಯ. ಇದನ್ನು ಅರಿತುಕೊಳ್ಳಿ. ಚುನಾವಣೆ ಮುಗಿಯುವವರೆಗೂ ಯಾರೂ ವಿಶ್ರಮಿಸದಿರಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.
ಹುಬ್ಬಳ್ಳಿ (ಏ.19): ಪ್ರತಿ ಚುನಾವಣೆಯೂ ಮಹತ್ವ ಪೂರ್ಣವಾಗಿರುತ್ತದೆ. ಚುನಾವಣೆಗಳಲ್ಲಿ ಕಾರ್ಯಕರ್ತರ ಪರಿಶ್ರಮದಿಂದ ಗೆಲ್ಲಲು ಮಾತ್ರ ಸಾಧ್ಯ. ಇದನ್ನು ಅರಿತುಕೊಳ್ಳಿ. ಚುನಾವಣೆ ಮುಗಿಯುವವರೆಗೂ ಯಾರೂ ವಿಶ್ರಮಿಸದಿರಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ನಗರದ ಗೋಕುಲ್ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಏರ್ಪಡಿಸಿದ್ದ ಬಿಜೆಪಿ ಪದಾಧಿಕಾರಿಗಳು, ಶಕ್ತಿಕೇಂದ್ರ, ಮಹಾಶಕ್ತಿಕೇಂದ್ರಗಳ ಪ್ರಮುಖರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ನಮಗೆ ಪ್ರತಿ ಚುನಾವಣೆಯೂ ಮುಖ್ಯವೇ. ಪಕ್ಷವನ್ನು ಗೆಲ್ಲಿಸುವುದು ಕಾರ್ಯಕರ್ತರ ಪಡೆ. ಶಕ್ತಿ ಕೇಂದ್ರ ಮಹಾಶಕ್ತಿಕೇಂದ್ರಗಳ ಪ್ರಮುಖರಿಂದ ಮಾತ್ರ ಚುನಾವಣೆಯಲ್ಲಿ ಗೆಲ್ಲುವುದು ಸಾಧ್ಯ.
ಆದಕಾರಣ ಇಂದಿನಿಂದ ನಿಮ್ಮ ಬೂತ್, ವಾರ್ಡ್, ಕ್ಷೇತ್ರಗಳಲ್ಲಿ ನಿರಂತರವಾಗಿ ಪ್ರಚಾರ ಮಾಡಿ. ನಮ್ಮ ಸರ್ಕಾರಗಳ ಸಾಧನೆ, ಕಾಂಗ್ರೆಸ್‌ನ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡಿ ಎಂದು ನುಡಿದರು. ಕರ್ನಾಟಕದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಅತಿ ಹೆಚ್ಚು ಹೂಡಿಕೆ ಮಾಡಲಾಗಿದ್ದು, ಮುಂಬರುವ ದಿನಗಳಲ್ಲಿ ದೇಶದ ಆರ್ಥಿಕ ಅಭಿವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡಲಿದೆ ಎಂದ ಅವರು, ಧಾರವಾಡಕ್ಕೆ ಐಐಟಿ, ವಂದೇ ಭಾರತ ರೈಲು, ಮೈಸೂರ ದಶಪಥ ರಸ್ತೆ ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದಾರೆ ಎಂದರು.
ಕ್ಷೇತ್ರದ ಜನರ ಸಂಕಷ್ಟಗಳಿಗೆ ಸ್ಪಂದಿಸದ ಕುಮಾರಸ್ವಾಮಿ: ಸಿ.ಪಿ.ಯೋಗೇಶ್ವರ್
ಇದಕ್ಕೆ ಮೂಲ ಕಾರಣ ಡಬಲ್ ಎಂಜಿನ್ ಸರ್ಕಾರ. ಇಲ್ಲಿಯ ಜನರು ಬಿಜೆಪಿಗೆ ಮತ ಹಾಕಿ ಅಧಿಕಾರಕ್ಕೆ ತಂದಿದ್ದರಿಂದ ಹಲವಾರು ಅಭಿವೃದ್ಧಿ ಕಾರ್ಯ ಮಾಡಲು ಸಹಕಾರಿಯಾಗಿದೆ. ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಸುಳ್ಳು ಭರವಸೆ ನೀಡುವ ಮೂಲಕ ಮತ್ತೆ ಅಧಿಕಾರದ ಕನಸು ಕಾಣುತ್ತಿದೆ. ಆದರೆ ಬಿಜೆಪಿ ಜನರ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ತಿಳಿಸಿದರು. ಕೋವಿಡ್ ಸಂದರ್ಭದಲ್ಲಿ ಅನೇಕ ದೇಶಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾದವು. ಆದರೆ, ಕೋವಿಡ್ ನಂತರದಲ್ಲಿ ಆರ್ಥಿಕವಾಗಿ ಬೆಳವಣಿಗೆ ಹೊಂದುವ ಮೂಲಕ ಉಜ್ವಲ ಭವಿಷ್ಯ ತೆರೆದುಕೊಂಡಿರುವ ಭಾರತ ವಿಶ್ವದ 5ನೇ ಆರ್ಥಿಕ ಶಕ್ತಿಯಾಗಿ ಬೆಳೆದು ನಿಂತಿದೆ ಎಂದು ಹೇಳಿದರು.
ಉತ್ಪಾದನಾ ಕ್ಷೇತ್ರದಲ್ಲಿಯೂ ಭಾರತ ಒಂದೆ ಹೆಜ್ಜೆ ಮುಂದಿಟ್ಟಿದೆ. ಈ ಮೊದಲು ಚೀನಾ ಕಂಪನಿಯ ಮೊಬೈಲ್‌ಗಳನ್ನು ಬಳಕೆ ಮಾಡಲಾಗುತ್ತಿತ್ತು. ಈಗ ಭಾರತದಲ್ಲಿ ಅತಿ ಹೆಚ್ಚು ಮೊಬೈಲ್ ಉತ್ಪಾದಿಸಲಾಗುತ್ತಿದೆ. ಭಾರತದಲ್ಲಿ ಐಫೋನ್‌ನಂತಹ ಮೊಬೈಲ್‌ಗಳ ಉತ್ಪಾದನಾ ಘಟಕ ಸ್ಥಾಪನೆಯಾಗಿವೆ. ಹೀಗೆ ಆಟೋಮೊಬೈಲ್, ಎಲೆಕ್ಟ್ರಾನಿಕ್, ಕೈಗಾರಿಕೆ ಸೇರಿದಂತೆ ಎಲ್ಲ ಸ್ತರದ ಉತ್ಪಾದನೆಯಲ್ಲಿಯೂ ಭಾರತ ಮುಂದೆ ಇದೆ ಎಂದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
ಕಾಂಗ್ರೆಸ್ ಭ್ರಷ್ಟಾಚಾರದ ಪಕ್ಷ: ಕಳೆದ 70 ವರ್ಷದ ದೇಶದ ಅಭಿವೃದ್ಧಿಗಿಂತ ಭ್ರಷ್ಟಾಚಾರವನ್ನೇ ಹೆಚ್ಚು ಮಾಡಿದೆ. ದೇಶ ವಿರೋಧಿ ಸಂಘಟನೆಗಳಿಗೆ ಸಹಕಾರ ನೀಡುವ ದೇಶದ ರಕ್ಷಣೆ ಹಾಳುಮಾಡಿತ್ತು. ದೇಶದ್ರೋಹಿ ಪಿಎಫ್‌ಐ ಕಾರ್ಯಕರ್ತರ ಮೇಲಿನ ಕೇಸ್‌ಗಳನ್ನು ಸಿದ್ದರಾಮಯ್ಯ ಸರ್ಕಾರ ವಜಾಗೊಳಿಸಿತ್ತು. ಈ ಮೂಲಕ ದೇಶದ್ರೋಹಿ ಚಟುವಟಿಕೆಗಳಿಗೆ ಸಾಥ್ ನೀಡಿದ್ದರು. ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಬೆಂಬಲಕ್ಕೆ ನಿಂತಿದ್ದರು. ಸಮಾಜ, ಜಾತಿ ಧರ್ಮಗಳನ್ನು ಒಡೆದಾಳುವ ನೀತಿಯನ್ನು ಕಾಂಗ್ರೆಸ್ ಅನುಸರಿಸುತ್ತದೆ. ಹೀಗೆ ಒಡೆಯುತ್ತಲೇ ತಮ್ಮ ಪಕ್ಷವನ್ನೇ ಒಡೆದುಕೊಳ್ಳುತ್ತಿದೆ.
ಇನ್ನು ಮುಂದೆ ಕನಕಪುರದಲ್ಲಿ ಬಿಜೆಪಿ ಹವಾ: ಸಚಿವ ಅಶೋಕ್
ಕರ್ನಾಟಕದಲ್ಲೂ ಪಕ್ಷ ವಿಭಜನೆಯಾಗಿದೆ ಎಂದು ಟೀಕಿಸಿದರು. ಆದರೆ, ಬಿಜೆಪಿ ಸರ್ಕಾರ ಮಾತ್ರ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿದೆ. ಈ ಮೂಲಕ ದೇಶ ರಕ್ಷಣೆಗೆ ಹೆಚ್ಚಿನ ಒತ್ತು ನೀಡಿದೆ ಎಂದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು, ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಎಂ.ಆರ್. ಪಾಟೀಲ, ಡಾ. ಕ್ರಾಂತಿಕಿರಣ, ನಾಗರಾಜ ಛಬ್ಬಿ, ಮಾಜಿ ಶಾಸಕ ಅಶೋಕ ಕಾಟವೆ, ಲಿಂಗರಾಜ ಪಾಟೀಲ, ಸಂಜಯ ಕಪಟಕರ, ಮಹಾತೇಶ ಕವಟಗಿಮಠ ಇದ್ದರು.