ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರ ಪಕ್ಷದ ನಾಯಕರಿಗೇ ಅರಿವಾಗಿದೆ. ಇದೇ ಕಾರಣಕ್ಕೆ ಪದೇ ಪದೇ ಬಿಜೆಪಿ ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಬೆಂಗಳೂರು (ಏ.10): ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರ ಪಕ್ಷದ ನಾಯಕರಿಗೇ ಅರಿವಾಗಿದೆ. ಇದೇ ಕಾರಣಕ್ಕೆ ಪದೇ ಪದೇ ಬಿಜೆಪಿ ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಕಾರಣಕ್ಕೆ ಪದೇ ಪದೇ ರಾಜ್ಯಕ್ಕೆ ಯಾವುದೋ ಒಂದು ನೆಪ ಹುಡುಕಿಕೊಂಡು ಬರುತ್ತಿದ್ದಾರೆ.
ಬರಲಿ ಅವರು ಎಷ್ಟು ಬಾರಿ ಬಂದರೂ ರಾಜ್ಯದ ಜನರು ಈಗಾಗಲೇ ಬಿಜೆಪಿಯನ್ನು ಸೋಲಿಸಲು ನಿಶ್ಚಯಿಸಿದ್ದಾರೆ’ ಎಂದು ಹೇಳಿದರು. ಮೋದಿ ಅವರು ಪದೇ ಪದೇ ಬರುತ್ತಿರುವುದೇ ರಾಜ್ಯದಲ್ಲಿ ಬಿಜೆಪಿ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಅವರು ಈ ರೀತಿ ಎಲ್ಲ ಪ್ರಯತ್ನ ಮಾಡುತ್ತಾ ಪರೋಕ್ಷವಾಗಿ ಸೋಲನ್ನು ಒಪ್ಪಿಕೊಳ್ಳುತ್ತಿದ್ದಾರೆ. ಮೋದಿ ಅವರು ಎಷ್ಟುಬಾರಿ ಬಂದರೂ ಜನ ಈಗಾಗಲೇ ಈ ಸರ್ಕಾರ ಕಿತ್ತೊಗೆಯಲು ತೀರ್ಮಾನ ಮಾಡಿದ್ದಾರೆ. ಬಿಜೆಪಿ ಪ್ರಚಾರಕ್ಕೆ ಜನರು ಸೇರುತ್ತಿಲ್ಲ ಎಂದು ಚಿತ್ರ ನಟರನ್ನೂ ಪ್ರಚಾರಕ್ಕೆ ಕರೆಯುತ್ತಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಸೋಮಣ್ಣ, ಡಿಕೆಶಿ ವಿರುದ್ಧ ಅಶೋಕ್ ಸ್ಪರ್ಧೆ?: ಬಿಜೆಪಿ ಸಭೆಯಲ್ಲಿ ಗಂಭೀರ ಚರ್ಚೆ
ಅದು ರಾಜ್ಯದಲ್ಲಿ ಬಿಜೆಪಿಯ ಸ್ಥಿತಿ ಎಂದು ಲೇವಡಿ ಮಾಡಿದರು. ಕೊರೋನಾ ವೇಳೆ ಜನರ ಜೀವ ಉಳಿಸಿರುವುದರಿಂದ ನಮ್ಮನ್ನು ಬೆಂಬಲಿಸಿ ಎಂಬ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಯಾವ ಜೀವ ಉಳಿಸಿದ್ದಾರೆ. ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೆ ಜನ ಸತ್ತರು. ಆ ಜನರ ಕೊಲೆ ಮಾಡಿದ್ದು ಬಿಜೆಪಿಯವರೇ ಅಲ್ಲವೇ? ಸ್ವತಃ ಸುಧಾಕರ್ ಇಲಾಖೆಯಲ್ಲೇ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಜನರೇ ಇದಕ್ಕೆ ಬುದ್ಧಿ ಕಲಿಸಲಿದ್ದಾರೆ ಎಂದರು.
ಅಂಗವೈಕಲ್ಯ ಮುಂದಿಟ್ಟು ಜಾಮೀನು ಕೇಳಿದ ಆರೋಪಿ: ಒಪ್ಪದ ಹೈಕೋರ್ಟ್
ಬಿಜೆಪಿ ಮೊದಲು ಪಟ್ಟಿ ಬಿಡುಗಡೆ ಮಾಡಲಿ: ಕಾಂಗ್ರೆಸ್‌ನ 3ನೇ ಪಟ್ಟಿಬಗ್ಗೆ ಪ್ರತಿಕ್ರಿಯಿಸಿದ ಅವರು, ಮೊದಲು ಬಿಜೆಪಿಯವರು ಮೊದಲ ಪಟ್ಟಿ ಯಾವಾಗ ಬಿಡುಗಡೆ ಮಾಡುತ್ತಾರೆ ಎಂಬುದನ್ನು ಕೇಳಿ. ಅವರ ಪಟ್ಟಿಬಂದ ಮೇಲೆ ನಮ್ಮ ಮೂರನೇ ಪಟ್ಟಿ ನೋಡೋಣ. ಇನ್ನು ಬಿಜೆಪಿ-ಜೆಡಿಎಸ್‌ನಿಂದ ಬರುವವರ ಬಗ್ಗೆ ಈಗಲೇ ಏನೂ ಹೇಳಲ್ಲ. ಗುಟ್ಟು ರಟ್ಟು ಮಾಡಲು ಹೋಗುವುದಿಲ್ಲ ಎಂದು ಹೇಳಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.