500ಕ್ಕೂ ಹೆಚ್ಚು ನಾಮಪತ್ರಗಳು ತಿರಸ್ಕೃತ: ನಾಡಿದ್ದು ಅಂತಿಮ ಕಣ ರೆಡಿ

Published : Apr 22, 2023, 05:42 AM IST
500ಕ್ಕೂ ಹೆಚ್ಚು ನಾಮಪತ್ರಗಳು ತಿರಸ್ಕೃತ: ನಾಡಿದ್ದು ಅಂತಿಮ ಕಣ ರೆಡಿ

ಸಾರಾಂಶ

ವಿಧಾನಸಭೆ ಚುನಾವಣೆಗೆ ಕಳೆದ ಒಂದು ವಾರದಿಂದ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯವು ಶುಕ್ರವಾರ ನಡೆದಿದ್ದು, 4989 ನಾಮಪತ್ರಗಳು ಕ್ರಮಬದ್ಧವಾಗಿವೆ. ಸುಮಾರು 500ಕ್ಕೂ ಹೆಚ್ಚು ನಾಮಪತ್ರಗಳು ತಿರಸ್ಕೃತಗೊಂಡಿವೆ. 

ಬೆಂಗಳೂರು (ಏ.22): ವಿಧಾನಸಭೆ ಚುನಾವಣೆಗೆ ಕಳೆದ ಒಂದು ವಾರದಿಂದ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯವು ಶುಕ್ರವಾರ ನಡೆದಿದ್ದು, 4989 ನಾಮಪತ್ರಗಳು ಕ್ರಮಬದ್ಧವಾಗಿವೆ. ಸುಮಾರು 500ಕ್ಕೂ ಹೆಚ್ಚು ನಾಮಪತ್ರಗಳು ತಿರಸ್ಕೃತಗೊಂಡಿವೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಾಗ 3632 ಅಭ್ಯರ್ಥಿಗಳಿಂದ ಒಟ್ಟು 5102 ಉಮೇದುವಾರಿಕೆ ಸಲ್ಲಿಕೆಯಾಗಿದ್ದವು. ಶುಕ್ರವಾರ ಬೆಳಗ್ಗೆಯಿಂದ ನಾಮಪತ್ರಗಳ ಪರಿಶೀಲನೆ ಕಾರ್ಯವು ತಡರಾತ್ರಿಯವರೆಗೆ ನಡೆಯಿತು. ಐದು ವಿಧಾನಸಭಾ ಕ್ಷೇತ್ರಗಳ ಉಮೇದುವಾರಿಕೆ ಪರಿಶೀಲನೆ ಕಾರ್ಯವು ತಡರಾತ್ರಿಯಾದರೂ ಮುಗಿದಿರಲಿಲ್ಲ. 

ಸವದತ್ತಿ-ಯಲ್ಲಮ್ಮ, ಔರಾದ್‌, ಹಾವೇರಿ, ರಾಯಚೂರು ಮತ್ತು ಶಿವಾಜಿನಗರ ಕ್ಷೇತ್ರದಲ್ಲಿ ನಾಮಪತ್ರಗಳ ಪರಿಶೀಲನೆ ಕಾರ್ಯವು ತಡರಾತ್ರಿಯವರೆಗೆ ನಡೆದಿದೆ. ಪರಿಶೀಲನೆ ಕಾರ್ಯ ತಡರಾತ್ರಿ ಮುಗಿದ ಹಿನ್ನೆಲೆಯಲ್ಲಿ ಶನಿವಾರ ನಾಮಪತ್ರಗಳ ಕ್ರಮಬದ್ಧ ಸಂಖ್ಯೆಯ ಬಗ್ಗೆ ಸ್ಪಷ್ಟಚಿತ್ರಣ ಲಭ್ಯವಾಗಲಿದೆ. ಐದು ಕ್ಷೇತ್ರಗಳನ್ನು ಹೊರತುಪಡಿಸಿದರೆ 4989 ನಾಮಪತ್ರಗಳು ಕ್ರಮಬದ್ಧವಾಗಿವೆ. ಈ ಪೈಕಿ 4607 ನಾಮಪತ್ರಗಳನ್ನು ಪುರುಷರು ಸಲ್ಲಿಸಿದ್ದು, 381 ನಾಮಪತ್ರಗಳು ಮಹಿಳೆಯರು ಸಲ್ಲಿಸಿದ್ದಾಗಿವೆ. ಇತರೆ ಒಂದು ನಾಮಪತ್ರವು ಕ್ರಮಬದ್ಧವಾಗಿದೆ. 

ದುಡ್ಡಿಲ್ಲ, ಫುಡ್ಡಿಲ್ಲ... ಕಾಪಾಡಿ: ಸೂಡಾನ್ ಕನ್ನಡಿಗರ ಮೊರೆ

ಬಿಜೆಪಿ 219, ಕಾಂಗ್ರೆಸ್‌ 218, ಜೆಡಿಎಸ್‌ 207, ಎಎಪಿ 207, ಬಿಎಸ್‌ಪಿ 135, ಸಿಪಿಐಎಂ 4, ನೋಂದಾಯಿತ ಮಾನ್ಯತೆ ಪಡೆಯದ ಪಕ್ಷಗಳಿಂದ 720, ಪಕ್ಷೇತರರ 1334 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾ ಆಯೋಗವು ತಿಳಿಸಿದೆ. ಸೋಮವಾರ ನಾಮಪತ್ರಗಳನ್ನು ವಾಪಸ್‌ ತೆಗೆದುಕೊಳ್ಳಲು ಅಂತಿಮ ದಿನವಾಗಿದೆ. ಉಮೇದುವಾರಿಕೆಗಳ ಹಿಂತೆಗೆತ ಕಾರ್ಯ ಪೂರ್ಣಗೊಂಡ ಬಳಿಕ ಚುನಾವಣಾ ಅಖಾಡದಲ್ಲಿ ಎಷ್ಟುಹುರಿಯಾಳುಗಳು ಇದ್ದಾರೆ ಎಂಬುದರ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಲಿದೆ. ಬಹಳಷ್ಟುಮಂದಿ ನಾಮಪತ್ರಗಳನ್ನು ವಾಪಸ್‌ ತೆಗೆದುಕೊಳ್ಳುವ ಸಾಧ್ಯತೆ ಇದೆ. 

ನಾಮಪತ್ರ ಹಿಂತೆಗೆತ ಬಳಿಕ ಚುನಾವಣಾ ಕಣದಲ್ಲಿರುವ ಅಧಿಕೃತ ಅಭ್ಯರ್ಥಿಗಳ ಸಂಖ್ಯೆ ಗೊತ್ತಾಗಲಿದೆ. ಸೋಮವಾರ ರಾತ್ರಿಯ ವೇಳೆಗೆ ಕಣದಲ್ಲಿರುವ ಅಭ್ಯರ್ಥಿಗಳ ಸಂಖ್ಯೆಯ ಬಗ್ಗೆ ಗೊತ್ತಾಗಲಿದೆ. ನಾಮಪತ್ರಗಳ ಹಿಂತೆಗೆತ ಬಳಿಕ ಚುನಾವಣಾ ಕಾವು ಮತ್ತಷ್ಟುರಂಗೇರಲಿದೆ. ಮೇ 8ರವರೆಗೆ ಭರ್ಜರಿ ರೋಡ್‌ಶೋ, ಬೃಹತ್‌ ಸಮಾವೇಶಗಳು, ಮೆರವಣಿಗೆಗಳು ನಡೆಯಲಿದ್ದು, ಅಭ್ಯರ್ಥಿಗಳ ಪರ ರಾಜಕೀಯ ಪಕ್ಷಗಳ ಮುಖಂಡರು ಮತ ಯಾಚಿಸಲಿದ್ದಾರೆ.

ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದ ನಂತರ 3632 ಅಭ್ಯರ್ಥಿಗಳಿಂದ ಒಟ್ಟು 5102 ಉಮೇದುವಾರಿಕೆ ಸಲ್ಲಿಕೆಯಾಗಿವೆ. 3327 ಪುರುಷ ಅಭ್ಯರ್ಥಿಗಳಿಂದ 4710, 304 ಮಹಿಳಾ ಅಭ್ಯರ್ಥಿಗಳಿಂದ 391 ನಾಮಪತ್ರಗಳು ಸಲ್ಲಿಕೆಯಾಗಿವೆ. ಒಬ್ಬರು ಇತರರು ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಬಿಜೆಪಿ 707, ಕಾಂಗ್ರೆಸ್‌ 651, ಜೆಡಿಎಸ್‌ 455, ಎಎಪಿ 373, ಬಿಎಸ್‌ಪಿ 179, ಸಿಪಿಐಎಂ 5, ಎನ್‌ಪಿಪಿ 5 ನಾಮಪತ್ರಗಳನ್ನು ಸಲ್ಲಿಕೆಯಾಗಿದ್ದವು. ಇವುಗಳ ಪರಿಶೀಲನೆ ಬಳಿಕ ಅಖಾಡದಲ್ಲಿ ಉಳಿಯುವ ಅಭ್ಯರ್ಥಿಗಳ ನಿಖರವಾದ ಮಾಹಿತಿ ಸಿಗಲಿದೆ.

ಅಂತಿಮ ದಿನ ಬೆಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಮೂವರು ನಾಮಪತ್ರ ಸಲ್ಲಿಕೆ

ಡಿಕೆಶಿ ನಾಮಪತ್ರ ಸ್ವೀಕೃತ, ಡಿಕೆಸು ಕಣದಿಂದ ಹಿಂದಕ್ಕೆ: ಕೆಪಿ​ಸಿಸಿ ಅಧ್ಯಕ್ಷ ಡಿ.ಕೆ.​ಶಿ​ವ​ಕು​ಮಾರ್‌ ಕನ​ಕ​ಪುರ ಕ್ಷೇತ್ರ​ದಲ್ಲಿ ಕಾಂಗ್ರೆಸ್‌ನಿಂದ ಸಲ್ಲಿ​ಸಿದ್ದ ನಾಮ​ಪತ್ರ ಅಂಗೀ​ಕಾ​ರ​ಗೊಂಡಿದೆ. ಹೀಗಾಗಿ ಅವರ ಸಹೋದರ ಡಿ.ಕೆ.ಸುರೇಶ್‌ ತಾವು ಸಲ್ಲಿಸಿದ ನಾಮಪತ್ರವನ್ನು ಹಿಂಪಡೆಯಲಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರ ಅಫಿಡವಿಟ್‌ಗೆ ಸಂಬಂಧಿಸಿದಂತೆ ಬಿಜೆಪಿ ಸಲ್ಲಿಸಿದ್ದ ದೂರುಗಳನ್ನು ಚುನಾವಣಾ ಆಯೋಗ ಗಮನಕ್ಕೆ ತೆಗೆದುಕೊಂಡಿಲ್ಲ ಎಂದು ತಿಳಿದುಬಂದಿದೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್