
ನಂಜನಗೂಡು (ಏ.30): ಶಾಸಕ ಬಿ. ಹರ್ಷವರ್ಧನ್ ಅವರನ್ನು ಮತದಾರರು ಚುನಾವಣೆಯಲ್ಲಿ ಬೆಂಬಲಿಸುವ ಮೂಲಕ ನಂಜನಗೂಡನ್ನು ಪ್ರಗತಿಯತ್ತ ಕೊಂಡೊಯ್ಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು. ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಬಿ. ಹರ್ಷವರ್ಧನ್ ಪರ ರೋಡ್ ಶೋ ನಡೆಸುವ ಮೂಲಕ ಮತ ಪ್ರಚಾರ ನಡೆಸಿ ಅವರು ಮಾತನಾಡಿದರು.
ಚುನಾವಣೆ ಸಂದರ್ಭ ನಂಜನಗೂಡಿಗೆ ಎರಡು ಬಾರಿ ಭೇಟಿ ಕೊಟ್ಟಿದ್ದೇನೆ. ಅಭಿವೃದ್ಧಿಗಾಗಿ ಹರ್ಷವರ್ಧನ್ ಬೇಕು ಎಂಬುದಾಗಿ ಜನ ಬಯಸುತ್ತಿದ್ದಾರೆ. ನಂಜನಗೂಡಿನಲ್ಲಿ ನುಗು ಏತ ನೀರಾವರಿ, ಶ್ರೀಕಂಠೇಶ್ವರಸ್ವಾಮಿ ಬೆಳ್ಳಿರಥ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳ ಮೂಲಕ ಇಡೀ ರಾಜ್ಯದ ಗಮನ ಸೆಳೆದಿರುವ ಶಾಸಕ ಬಿ. ಹರ್ಷವರ್ಧನ್ ಮತ್ತೊಮ್ಮೆ ಜಯ ಸಾಧಿಸುವುದರಲ್ಲಿ ಯಾವುದೇ ಅನುಮಾನವಿಲ್ಲ, ಹೀಗಾಗಿ ಮತ್ತೊಮ್ಮೆ ನಂಜನಗೂಡಿನಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಲಿದೆ ಎಂದರು.
ತರೀಕೆರೆ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿರುವ ಅಭ್ಯರ್ಥಿಗಳು: ಈ ಬಾರಿ ಗೆಲ್ಲಿಸುವಂತೆ ಮತದಾರರ ಬಳಿ ಮನವಿ
ಮೇ 6ಕ್ಕೆ ನಂಜನಗೂಡಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ: ಶಾಸಕ ಬಿ. ಹರ್ಷವರ್ಧನ್ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೇ 6ಕ್ಕೆ ನಂಜನಗೂಡಿಗೆ ಆಗಮಿಸುತ್ತಿರುವುದು ನನ್ನ ಸೌಭಾಗ್ಯವಾಗಿದ್ದು ಎಂದರು. ಹಲವು ಮಹತ್ತರ ಯೋಜನೆಗಳನ್ನು ಸಾಕಾರಗೊಳಿಸಲು ಸಾಧ್ಯವಾಗಿದೆ, ಮತ್ತೊಮ್ಮೆ ಮತದಾರರು ಚುನಾವಣೆಯಲ್ಲಿ ಆಶೀರ್ವದಿಸುವ ಮೂಲಕ ಅಭಿವೃದ್ಧಿಯನ್ನು ಬೆಂಬಲಿಸಲಿದ್ದಾರೆ ಎಂದರು.
ರೋಡ್ ಶೋ: ಇನ್ನು ಬಿರುಬಿಸಿಲಿನ ನಡುವೆಯೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೃಹತ್ ರೋಡ್ ಶೋ ನಡೆಯಿತು. ಎಂಜಿಎಸ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿ ಮುಂದೆ ಸಮಾವೇಶಗೊಂಡ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಕ್ಷದ ಬಾವುಟಗಳನ್ನು ಪ್ರದರ್ಶಿಸುತ್ತಾ ಹರ್ಷವರ್ಧನ್ ಅವರಿಗೆ ಜೈಕಾರ ಹಾಕುತ್ತಾ ಬಿಸಿಲ ಬೇಗೆಯನ್ನೂ ಲೆಕ್ಕಿಸದೇ ಮೆರವಣಿಗೆಯಲ್ಲಿ ಪಾಲ್ಗೊಂಡರು. ಮೆರವಣಿಗೆಯಲ್ಲಿ ನಟ ಸುದೀಪ್ ಭಾವಚಿತ್ರವಿರುವ ಬಾವುಟಗಳು ರಾರಾಜಿಸಿದವು. ರಾಷ್ಟ್ರಪತಿ ರಸ್ತೆ, ಬ್ರಾಡ್‌ವೇ ರಸ್ತೆ, ಬಜಾರ್ ರಸ್ತೆಯಲ್ಲಿ ಸಂಚರಿಸಿದ ಮೆರವಣಿಗೆ ಶ್ರೀಕಂಠೇಶ್ವರಸ್ವಾಮಿ ದೇವಾಲಯ ಸಮೀಪ ಅಂತ್ಯಗೊಂಡಿತು.
ಇಂದಿನವರೆಗೆ 1.5 ಲಕ್ಷ ಕೋಟಿ ಹಣವನ್ನು ಬಿಜೆಪಿ ಸರ್ಕಾರ ಜನರಿಂದ ಲೂಟಿ ಮಾಡಿದೆ: ಪ್ರಿಯಾಂಕಾ ಗಾಂಧಿ
ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್, ಕ್ಷೇತ್ರ ಉಸ್ತುವಾರಿ ಸುರೇಶ್‌ಬಾಬು, ಮಂಡಲ ಅಧ್ಯಕ್ಷ ಪಿ. ಮಹೇಶ್, ನಗರಾಧ್ಯಕ್ಷ ಶ್ರೀನಿವಾಸರೆಡ್ಡಿ, ಹಿರಿಯ ಮುಖಂಡರಾದ ಕುಂಬ್ರಹಳ್ಳಿ ಸುಬ್ಬಣ್ಣ, ಸಿಂಧುವಳ್ಳಿ ಎಸ್.ಎಂ. ಕೆಂಪಣ್ಣ, ಬಾಲಚಂದ್ರು, ಮಹಿಳಾ ಘಟಕದ ಗ್ರಾಮಾಂತರ ಅಧ್ಯಕ್ಷೆ ಕೋಮಲ, ಮಹಿಳಾ ಘಟಕದ ನಗರಾಧ್ಯಕ್ಷೆ ನಂದಿನಿ ಮಹೇಶ್, ನಗರಸಭಾಧ್ಯಕ್ಷ ಮಹದೇವಸ್ವಾಮಿ, ಉಪಾಧ್ಯಕ್ಷೆ ನಾಗಮಣಿ ಭಾಗವಹಿಸಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.