ಕಾಂಗ್ರೆಸ್ ಪಕ್ಷಕ್ಕೆ ಹತ್ತು ಜನ ಸ್ಟಾರ್ ಪ್ರಚಾರಕರು ಸಿಗುತ್ತಿಲ್ಲ. ಆ ಪಕ್ಷದ ಸ್ಟಾರ್ ಪಟ್ಟಿನೋಡಿದರೆ ಗೊತ್ತಾಗುತ್ತದೆ. ಅದರಲ್ಲಿ ಗಲಭೆಕೋರರು, ದೇಶದ್ರೋಹಿಗಳು ಇದ್ದಾರೆ. ಇಂತಹ ವ್ಯಕ್ತಿಗಳು ಸ್ಟಾರ್ ಪ್ರಚಾರಕರಾಗಿರುವುದು ಕಾಂಗ್ರೆಸ್ ಅಂದ ಪತನದ ದಾರಿ ತೋರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಟೀಕಿಸಿದರು.
ಬೆಳಗಾವಿ (ಏ.21): ಕಾಂಗ್ರೆಸ್ ಪಕ್ಷಕ್ಕೆ ಹತ್ತು ಜನ ಸ್ಟಾರ್ ಪ್ರಚಾರಕರು ಸಿಗುತ್ತಿಲ್ಲ. ಆ ಪಕ್ಷದ ಸ್ಟಾರ್ ಪಟ್ಟಿನೋಡಿದರೆ ಗೊತ್ತಾಗುತ್ತದೆ. ಅದರಲ್ಲಿ ಗಲಭೆಕೋರರು, ದೇಶದ್ರೋಹಿಗಳು ಇದ್ದಾರೆ. ಇಂತಹ ವ್ಯಕ್ತಿಗಳು ಸ್ಟಾರ್ ಪ್ರಚಾರಕರಾಗಿರುವುದು ಕಾಂಗ್ರೆಸ್ ಅಂದ ಪತನದ ದಾರಿ ತೋರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಟೀಕಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ರಾಜ್ಯದ ಅಭಿವೃದ್ಧಿ ಅಸಾಧ್ಯವಾಗಿದೆ. ಸಿದ್ದರಾಮಯ್ಯ ಅವಧಿಯಲ್ಲಿ, ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳೇ ಆಗಿಲ್ಲ. ಬಿಜೆಪಿ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಅಭಿವೃದ್ಧಿಕಾರ್ಯಗಳಾಗಿವೆ ಎಂದರು.
ರಾಜ್ಯದಲ್ಲಿ ಹಾಗೂ ಜಿಲ್ಲೆಯಾದ್ಯಂತ ನಡೆದಿರುವ ರೈಲ್ವೆ ನಿಲ್ದಾಣದ ಆಧುನಿಕರಣ, ಹೆದ್ದಾರಿಗಳ ಕಾಮಗಾರಿ, ಹೆಲಿಕಾಪ್ಟರ ತಯಾರಿಕಾ ಘಟಕ, ಐಐಟಿ ಉದ್ಘಾಟನೆಯಾಗಿದ್ದು ರೈತ ವಿದ್ಯಾನಿಧಿ, ಕಿತ್ತೂರು ಕರ್ನಾಟಕ ನಿಗಮ, ಲಿಂಗಾಯತ ಮತ್ತು ಮರಾಠ ನಿಗಮಗಳ ಸ್ಥಾಪನೆ, ಹಿಂದುಳಿದ ಅನೇಕ ಸಮಾಜಗಳ ಅಭಿವೃದ್ಧಿ ನಿಗಮ ಸ್ಥಾಪನೆ, ಬಸವಣ್ಣನವರ ಅನುಭವ ಮಂಟಪದ ನಿರ್ಮಾಣ, ರಾಣಿ ಚನ್ನಮ್ಮಾಜಿಯ ಕೋಟೆ ನಿರ್ಮಾಣ ನಡೆದಿರುವದು ಹಾಗೂ ಎಸ್ಸಿ,ಎಸ್ಟಿಮಿಸಲಾತಿ ಹೆಚ್ಚಳ, ಲಿಂಗಾಯತ ಮತ್ತು ಒಕ್ಕಲಿಗ ಸಮಾಜಕ್ಕೆ 2ಡಿ, 2ಸಿ ನೀಡುವ ಮೂಲಕ ಸಾಮಾಜಿಕ ನ್ಯಾಯ ನೀಡಿದ ಬಿಜೆಪಿ ಸರ್ಕಾರದ ಸಾಧನೆಗಳನ್ನ ಮುಂದಿಟ್ಟುಕೊಂಡು ಜನತೆಯ ಮುಂದೆ ಮತಯಾಚನೆ ಮಾಡುತ್ತೇವೆ ಎಂದರು.
ರಾಘವೇಶ್ವರ ಭಾರತೀ ಸ್ವಾಮೀಜಿ ವಿರುದ್ಧ ಚಾರ್ಜ್‌ಶೀಟ್ ರದ್ದುಗೊಳಿಸಿದ ಹೈಕೋರ್ಟ್!
ಬಿಜೆಪಿಯಲ್ಲಿದ್ದು ಎಲ್ಲ ಅಧಿಕಾರ ಅನುಭವಿಸಿ, ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈಗ ಬಿಜೆಪಿ ವಿರುದ್ಧ ಟೀಕೆ ಮಾಡುವುದೇ ಅವರ ಕಾಯಕವಾಗಿದ್ದು, ಇದು ಮಹಾಪಾಪದ ಕೆಲಸವಾಗಿದೆ. ಕುಟುಂಬವನ್ನು ಬಿಟ್ಟು ದೇಶಕ್ಕಾಗಿ ಜೀವನವನ್ನೇ ದಾರಿ ಎರೆದು ಪಕ್ಷ ಕಟ್ಟುತ್ತಿರುವವರ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ . ಕರ್ನಾಟಕ ಅಭಿವೃದ್ಧಿ ಕಾಂಗ್ರೆಸ್ ಕೊಡುಗೆ ಶೂನ್ಯವಾಗಿದೆ ಎಂದು ಹೇಳಿದರು. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 72 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ನಮ್ಮ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಸಹಸ್ರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳುತ್ತಿದ್ದಾರೆ. ಇದು ಬಿಜೆಪಿಗೆ ಪೂರಕ ವಾತಾವರಣಇದೆ. ಬೆಳಗಾವಿ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ಡಿಕೆಶಿ ಅಕ್ರಮ ಆಸ್ತಿ ಗಳಿಕೆ ಕೇಸ್: ಸರ್ಕಾರದ ಶಿಫಾರಸು ಪ್ರಶ್ನಿಸಿದ್ದ ಅರ್ಜಿ ಹೈಕೋರ್ಟಲ್ಲಿ ವಜಾ
ಸುದ್ದಿಗೋಷ್ಠಿಯಲ್ಲಿ ಮಹಾರಾಷ್ಟ್ರ ಸಚಿವ ಗಿರಿಷ ಮಹಾಜನ, ರಾಜ್ಯ ವಕ್ತಾರ ಎಮ್.ಬಿ.ಝಿರಲಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಅನಿಲ ಬೆನಕೆ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಮಹಾನಗರ ಅಧ್ಯಕ್ಷ ಅನೀಲ ಬೆನಕೆ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ, ಮಾಧ್ಯಮ ಸಂಚಾಲಕ ಎಫ್.ಎಸ್.ಸಿದ್ದನಗೌಡರ ಇದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.